Belagavi session: ಸುವರ್ಣ ಸೌಧದಿಂದ ಸಾವರ್ಕರ್ ಫೋಟೋ ತೆಗೆಯುವ ಪ್ರಸ್ತಾವ ಬಂದಿಲ್ಲ: ಸ್ಪೀಕರ್ ಯುಟಿ ಖಾದರ್

| Updated By: Ganapathi Sharma

Updated on: Dec 07, 2023 | 3:47 PM

ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಬಿ.ಆರ್.ಅಂಬೇಡ್ಕರ್, ಬಸವಣ್ಣ, ಮಹಾತ್ಮ ಗಾಂಧಿ ಮತ್ತು ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಗಳ ಜೊತೆಗೆ ಸಾವರ್ಕರ್ ಅವರ ಭಾವಚಿತ್ರಗಳನ್ನು ಕಳೆದ ವರ್ಷ ಡಿಸೆಂಬರ್ 19 ರಂದು ಅಂದಿನ ಬಿಜೆಪಿ ಸರ್ಕಾರ ಅನಾವರಣಗೊಳಿಸಿತ್ತು.

Belagavi session: ಸುವರ್ಣ ಸೌಧದಿಂದ ಸಾವರ್ಕರ್ ಫೋಟೋ ತೆಗೆಯುವ ಪ್ರಸ್ತಾವ ಬಂದಿಲ್ಲ: ಸ್ಪೀಕರ್ ಯುಟಿ ಖಾದರ್
ಯುಟಿ ಖಾದರ್
Follow us on

ಬೆಳಗಾವಿ, ಡಿಸೆಂಬರ್ 7: ಸುವರ್ಣ ವಿಧಾನಸೌಧದಲ್ಲಿ (Suvarna Vidhan Soudha) ಅಳವಡಿಸಲಾಗಿರುವ ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವವಾದಿ ವೀರ ಸಾವರ್ಕರ್ (Veer Savarkar) ಅವರ ಭಾವಚಿತ್ರ ತೆರವು ಮಾಡುವ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದು ವಿಧಾನಸಭಾ ಸ್ಪೀಕರ್ ಯುಟಿ ಖಾದರ್ (UT Khader) ಗುರುವಾರ ತಿಳಿಸಿದರು. ಸಾವರ್ಕರ್​​​ ಭಾವಚಿತ್ರ ತೆಗೆಯಬೇಕೇ ಎಂಬ ಬಗ್ಗೆ ಸ್ಪೀಕರ್ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದರು. ಸಾವರ್ಕರ್ ಭಾವಚಿತ್ರ ತೆರವುಗೊಳಿಸಬೇಕು ಎಂದು ಕಾಂಗ್ರೆಸ್​ನ ಹಲವು ನಾಯಕರಿಂದ ಆಗ್ರಹ ವ್ಯಕ್ತವಾಗಿತ್ತು.

ಸದ್ಯಕ್ಕೆ ಅಂತಹ ಯಾವುದೇ ಪ್ರಸ್ತಾಪ ನಮಗೆ ಬಂದಿಲ್ಲ. ಬಂದರೆ ಆವಾಗ ನೋಡೋಣ, ಈಗಲೇ ಬ್ಯಾಟ್ ಬೀಸಿದ್ರೆ ಆಗುತ್ತಾ? ಸಂವಿಧಾನ ಬದ್ಧವಾಗಿ ಏನು ಮಾಡಬೇಕು ಅದನ್ನು ಮಾಡುತ್ತೇನೆ. ನನಗೆ ಸಚಿವರೂ ಒಂದೇ, ಪ್ರತಿಪಕ್ಷದವರೂ ಒಂದೇ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರವರ ಹೇಳಿಕೆ ನೀಡಲು ಎಲ್ಲರಿಗೂ ಅವಕಾಶವಿದೆ. ಯಾವುದೇ ವಿಚಾರವಿದ್ದರೂ ಸಂವಿಧಾನ ಬದ್ಧವಾಗಿ ಕರ್ತವ್ಯ ನಿರ್ವಹಿಸುವೆ ಎಂದು ಖಾದರ್ ಹೇಳಿದ್ದಾರೆ.

ಸುವರ್ಣಸೌಧದಲ್ಲಿ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಭಾವಚಿತ್ರ ಅಳವಡಿಸುವ ಪ್ರಸ್ತಾವ ಇದೆ ಎಂದು ಯುಟಿ ಖಾದರ್ ಕೆಲವು ದಿನಗಳ ಹಿಂದೆ ಹೇಳಿದ್ದರು. ಅದರ ಬೆನ್ನಲ್ಲೇ, ಕಾಂಗ್ರೆಸ್ ಸರ್ಕಾರ ಸಾವರ್ಕರ್ ಫೋಟೋ ತೆಗೆದುಹಾಕಿ ನೆಹರೂ ಫೋಟೋ ಅಳವಡಿಸಲು ಮುಂದಾಗಿದೆ ಎಂಬ ವದಂತಿ ಹರಡಿತ್ತು.

ಇದನ್ನೂ ಓದಿ: ಸುವರ್ಣಸೌಧದಲ್ಲಿ ಸಾವರ್ಕರ್ ಭಾವಚಿತ್ರ ತೆಗೆದು ನೆಹರೂ ಫೋಟೊ ಹಾಕಲಿದೆಯಾ ಕಾಂಗ್ರೆಸ್ ಸರ್ಕಾರ?

ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಬಿ.ಆರ್.ಅಂಬೇಡ್ಕರ್, ಬಸವಣ್ಣ, ಮಹಾತ್ಮ ಗಾಂಧಿ ಮತ್ತು ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಗಳ ಜೊತೆಗೆ ಸಾವರ್ಕರ್ ಅವರ ಭಾವಚಿತ್ರಗಳನ್ನು ಕಳೆದ ವರ್ಷ ಡಿಸೆಂಬರ್ 19 ರಂದು ಅಂದಿನ ಬಿಜೆಪಿ ಸರ್ಕಾರ ಅನಾವರಣಗೊಳಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:45 pm, Thu, 7 December 23