ನಾಳೆಯಿಂದ ಅಧಿವೇಶನ, ಎಲ್ಲರೂ ಕಡ್ಡಾಯವಾಗಿ ಭಾಗವಹಿಸಿ: ಶಾಸಕರಿಗೆ ಸ್ಪೀಕರ್ ಕಾಗೇರಿ ಮನವಿ
Karnataka Assembly Session: ಇದು ಈ ವಿಧಾನಸಭೆಯ 15ನೆಯ ಮತ್ತು ಕೊನೆಯ ಅಧಿವೇಶನ ಆಗಿರುತ್ತದೆ. ಈಗಿನ ಶಾಸಕರು ಐದು ವರ್ಷ ಅವಧಿಯನ್ನು ಯಶಸ್ವಿಯಾಗಿ ಮುಗಿಸಿದ್ದೀರಿ. ಕೊನೆಯ ಅಧಿವೇಶನ ಎಂದು ಯಾರೂ ನಿರ್ಲಕ್ಷಿಸದೇ ಪಾಲ್ಗೊಳ್ಳಿ ಎಂದು ಸ್ಪೀಕರ್ ಕಾಗೇರಿ ಅವರು ಕೇಳಿಕೊಂಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಬಜೆಟ್ ಮಂಡನೆ ಇರುವುದರಿಂದ ನಾಳೆಯಿಂದ (ಫೆ. 10) ಅಧಿವೇಶನ (Karnataka Budget Session) ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಗುರುವಾರ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishveshwara Hegde Kageri), ಎಲ್ಲರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಇದು ಈ ವಿಧಾನಸಭೆಯ 15ನೆಯ ಮತ್ತು ಕೊನೆಯ ಅಧಿವೇಶನ (Assembly Session) ಆಗಿರುತ್ತದೆ. ಈಗಿನ ಶಾಸಕರು ಐದು ವರ್ಷ ಅವಧಿಯನ್ನು ಯಶಸ್ವಿಯಾಗಿ ಮುಗಿಸಿದ್ದೀರಿ. ಕೊನೆಯ ಅಧಿವೇಶನ ಎಂದು ಯಾರೂ ನಿರ್ಲಕ್ಷಿಸದೇ ಪಾಲ್ಗೊಳ್ಳಿ ಎಂದು ಸ್ಪೀಕರ್ ಕಾಗೇರಿ ಅವರು ಕೇಳಿಕೊಂಡರು.
ಬೆಳಗಾವಿಯಲ್ಲಿ ಕಳೆದ ಅಧಿವೇಶನ ನಡೆದಿತ್ತು. ಅದಾದ ಬಳಿಕ ಈಗ ವಿಧಾನಸೌಧದಲ್ಲಿ ಸೇರುತ್ತಿದ್ದೇವೆ. ಪ್ರಜಾಪ್ರಭುತ್ವದ ದೇಗುಲ ಎಂದು ಕರೆಯಲಾಗುವ ಸದನ ಇದು. ಸದಸ್ಯರು ಜವಾಬ್ದಾರಿಯುತವಾಗಿ ನಡೆದುಕೊಂಡು ಅಧಿವೇಶದಲ್ಲಿ ಪಾಲ್ಗೊಳ್ಳಬೇಕೆಂದು ಬಯಸುವುದಾಗಿ ಹೇಳಿದರು.
ಫೆಬ್ರುವರಿ 10ರಂದು ಆರಂಭವಾಗುವ ಅಧಿವೇಶನ ಫೆ. 24ರವರೆಗೆ ನಡೆಯಲಿದೆ. ಇದು ಬಜೆಟ್ ಅಧಿವೇಶನವಾಗಿದ್ದು ಫೆಬ್ರುವರಿ 17ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡಿಸಲಿದ್ದಾರೆ. ಫೆಬ್ರುವರಿ 20ರಿಂದ 24ರವರೆಗೂ ಬಜೆಟ್ ಮೇಲೆ ಚರ್ಚೆ ನಡೆಯಲಿದೆ.
ಇದನ್ನೂ ಓದಿ: DK Shivakumar: ನನ್ನ ಮಗಳ ಫೀಸ್ ಬಗ್ಗೆ ಮಾಹಿತಿ ಬೇಕಂತೆ; ಸಿಬಿಐಗೆ ಬುದ್ಧಿ ಹೇಳುತ್ತೇನೆ ಎಂದ ಡಿಕೆ ಶಿವಕುಮಾರ್
ಅಧಿವೇಶನ ಆರಂಭವಾಗುವ ನಾಳೆ 11 ಗಂಟೆಗೆ ರಾಜ್ಯಪಾಲರು ಬೃಹತ್ ಮೆಟ್ಟಿಲುಗಳ ಮೂಲಕ ವಿಧಾನಸಭೆಗೆ ಆಗಿಸಲಿದ್ದು, ಜಂಟಿ ಅಧಿವೇಶನವನ್ನು ಉದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ ಎಂಬ ಮಾಹಿತಿಯನ್ನು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನೀಡಿದರು.
ರಾಜ್ಯದಲ್ಲಿ ಏಪ್ರಿಲ್ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿ ಬಜೆಟ್ ಬಗ್ಗೆ ಬಹಳಷ್ಟು ನಿರೀಕ್ಷೆಗಳಿವೆ. ಅವರು ಜನಪ್ರಿಯ ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಬಿಜೆಪಿಗೆ ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳುವ ಬಹಳ ಕ್ಲಿಷ್ಟಕರ ಸವಾಲು ಇದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ತನ್ನ ಕೊನೆಯ ಬಜೆಟ್ ಒಂದು ಪ್ರಮುಖ ಅಸ್ತ್ರವಾಗಿದೆ. ಈ ಕಾರಣಕ್ಕೆ ಬಜೆಟ್ ಬಗ್ಗೆ ಬಹಳಷ್ಟು ಕುತೂಹಲ ಮನೆಮಾಡಿದೆ.
Published On - 1:04 pm, Thu, 9 February 23