AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ಸರ್ಕಾರಕ್ಕೆ 100ರ ಸಂಭ್ರಮ: ಸೆ.10ರಂದು “ಶತಕದ ಪಥ, ಪ್ರಗತಿಯ ರಥ” ವಿಶೇಷ ಕಾರ್ಯಕ್ರಮ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಬಂದು ನಾಳೆಗೆ (ಸೆಪ್ಟೆಂಬರ್ 10) 100 ದಿನಗಳನ್ನ ಪೂರೈಸಲಿದೆ. ಹೀಗಾಗು ಯಶಸ್ವಿ 100 ದಿನಗಳನ್ನು ಸಂಭ್ರಮಿಸಲು ಸರ್ಕಾರ ವಿಶೇಷ ಕಾರ್ಯಕ್ರವೊಂದನ್ನು ಆಯೋಜಿಸಿದೆ. "ಶತಕದ ಪಥ, ಪ್ರಗತಿಯ ರಥ" ಎನ್ನುವ ವಿಶೇಷ ಕಾರ್ಯಕ್ರಮ ಎಲ್ಲಿ ಯಾವಾಗ ನಡೆಯಲಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ಡಿಕೆಶಿ ಸರ್ಕಾರಕ್ಕೆ 100ರ ಸಂಭ್ರಮ: ಸೆ.10ರಂದು ಶತಕದ ಪಥ, ಪ್ರಗತಿಯ ರಥ ವಿಶೇಷ ಕಾರ್ಯಕ್ರಮ
Dk Shivakumar
ರಮೇಶ್ ಬಿ. ಜವಳಗೇರಾ
|

Updated on: Sep 09, 2026 | 5:51 PM

Share

ಬೆಂಗಳೂರು, (ಸೆಪ್ಟೆಂಬರ್ 09): ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಆಡಳಿತವು 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ, “ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ” ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಾಳೆ ಅಂದರೆ ಸೆಪ್ಟೆಂಬರ್ 10 ರ ಗುರುವಾರ ಬೆಳಿಗ್ಗೆ 10.00 ಗಂಟೆಗೆ ವಿಧಾನಸೌಧದ ಬ್ಯಾಂಕ್ವೇಟ್ ಸಭಾಂಗಣದಲ್ಲಿ “ಶತಕದ ಪಥ, ಪ್ರಗತಿಯ ರಥ” ವಿಶೇಷ ಕಾರ್ಯಕ್ರಮ ನಡೆಯಲಿದೆ. ಇನ್ನು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೆರವೇರಿಸುತ್ತಿರುವುದು ವಿಶೇಷ.

ಫಲಾನುಭವಿಗಳೊಂದಿಗೆ ಸಿಎಂ ಸಂವಾದ

ಸರ್ಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಯೋಜನೆ, ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ, ಯುವನಿಧಿ ಯೋಜನೆ, ಗೃಹಜ್ಯೋತಿ ಯೋಜನೆ ಹಾಗೂ ವಿವಿಧ ಕ್ಷೇತ್ರದ ಕಾರ್ಮಿಕರನ್ನು ಒಳಗೊಂಡಂತೆ, ಸಮಾಜದ ವಿವಿಧ ವರ್ಗಗಳ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೇರವಾಗಿ ಸಂವಾದ ನಡೆಸಲಿದ್ದಾರೆ.

ಇದನ್ನೂ ಓದಿ: ಸಿಎಂ ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ 100 ದಿನ: ಸರ್ಕಾರದ ಸಾಧನೆಯ ಪಟ್ಟಿ ಇಲ್ಲಿದೆ ನೋಡಿ

ಕಾರ್ಯಕ್ರಮದಲ್ಲಿ ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಮತ್ತು ಪೌರಕಾರ್ಮಿಕರು ಭಾಗವಹಿಸಲಿದ್ದು, ರಾಜ್ಯ ಸರ್ಕಾರದ ಜನಪರ ಯೋಜನೆಗಳು ಜನರ ಜೀವನದಲ್ಲಿ ತಂದಿರುವ ಬದಲಾವಣೆಗಳು ಮತ್ತು ಅಭಿವೃದ್ಧಿಯ ಮುಂದಿನ ಹಾದಿಯ ಕುರಿತು ಚರ್ಚೆ ನಡೆಯಲಿದೆ.

ಇನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ. ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಶಾಸಕರು ಮತ್ತು ರಾಜ್ಯ ಸಭಾ‌ ಸದಸ್ಯರು, ಲೋಕಸಭಾ‌ ಸದಸ್ಯರು ಹಾಗೂ ವಿಧಾನಪರಿಷತ್ತಿನ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ