ಅಧಿವೇಶನ ವೇಳೆ ಮಧ್ಯಾಹ್ನದ ಕಿರು ನಿದ್ರೆಗಾಗಿ ಶಾಸಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ

ಅಧಿವೇಶನ ನಡೆದ ಸಮಯದಲ್ಲಿ ಮಧ್ಯಾಹ್ನದ ಊಟದ ನಂತರ ಶಾಸಕರ ಹಾಜಾರಾತಿ ಕಡಿಮೆ ಆಗುತ್ತಿದೆ. ಇದನ್ನು ತಪ್ಪಿಸಲು ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್​ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ. ಶಾಸಕರ ಕಿರು ನಿದ್ರೆಗಾಗಿ ವಿಶೇಷ ಕುರ್ಚಿ ವ್ಯವಸ್ಥೆ ಮಾಡಲಾಗಿದೆ.

ಅಧಿವೇಶನ ವೇಳೆ ಮಧ್ಯಾಹ್ನದ ಕಿರು ನಿದ್ರೆಗಾಗಿ ಶಾಸಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ
ಅಧಿವೇಶನ
Follow us
ವಿವೇಕ ಬಿರಾದಾರ
|

Updated on: Jul 19, 2024 | 12:31 PM

ಬೆಂಗಳೂರು, ಜುಲೈ 19: ಕರ್ನಾಟಕ ಅಧಿವೇಶನ (Karnataka session) ನಡೆದ ಸಂದರ್ಭದಲ್ಲಿ, ಮಧ್ಯಾಹ್ನ ಊಟದ ಬಳಿಕ ಶಾಸಕರಿಗೆ (MLA) ಕಿರು ನಿದ್ರೆಗಾಗಿ ವಿಶೇಷ ಆಸನ ವ್ಯವಸ್ಥೆ ಮಾಡಲು ವಿಧಾಸಭೆ ಸಭಾಧ್ಯಕ್ಷ ಯುಟಿ ಖಾದರ್ (UT Khader)​​ ನಿರ್ಧರಿಸಿದ್ದಾರೆ. ಮುಂಗಾರು ಅಧಿವೇಶನ ನಾಲ್ಕನೇ ದಿನವಾದ ಇಂದು (ಜು.19) ಸಭಾಧ್ಯಕ್ಷ ಯುಟಿ ಖಾದರ್​ ಅವರು ಈ ವಿಷಯ ಪ್ರಸ್ತಾಪಿಸಿದರು. “ವಿಧಾಸಭೆ ಸದಸ್ಯರಿಗಾಗಿ ಬೆಳಗ್ಗೆ ಉಪಹಾರ, ಮಧ್ಯಾಹ್ನ ಉತ್ತಮ ಊಟದ ವ್ಯವಸ್ಥೆ ಮಾಡಲಾಗಿದೆ. ಊಟವಾದ ಮೇಲೆ ಕೆಲ ಶಾಸಕರು ಕಿರು ನಿದ್ದೆ ಮಾಡಿ ಬರುತ್ತೇನೆ ಎಂದು ಹೇಳಿ ಹೋದವರು ಮರಳಿ ಬರುವುದಿಲ್ಲ.”

“ಇದನ್ನು ತಪ್ಪಿಸಲು ಶಾಸಕರ ಕಿರು ನಿದ್ರೆಗಾಗಿ ಪ್ರಾಯೋಗಿಕವಾಗಿ ಆಡಳಿತ ಪಕ್ಷದ ಮೊಗಸಾಲೆಯಲ್ಲಿ ಒಂದು ರಿಕ್ಲೈನರ್ ಕುರ್ಚಿ ಹಾಕಲಾಗಿದೆ. ಶಾಸಕರು ಅದರ ಮೇಲೆ ಕಿರು ನಿದ್ರೆ ಮಾಡಿ ಸದನಕ್ಕೆ ಬರಬಹುದು. ಆ ರಿಕ್ಲೈನರ್​ ಕುರ್ಚಿ ನಿಮಗೆ ಸರಿ ಅನಿಸಿದರೆ ಮುಂದಿನ ಅಧಿವೇಶನದಲ್ಲಿ ಈ ವ್ಯವಸ್ಥೆಯನ್ನು ಅಧಿಕೃತ್ಯವಾಗಿ ಜಾರಿಗೆ ತರುತ್ತೇನೆ” ಎಂದು ಸಭಾಧ್ಯಕ್ಷ ಯುಟಿ ಖಾದರ್​ ಸದಸ್ಯರಿಗೆ ಹೇಳಿದರು.

ಇದನ್ನೂ ಓದಿ: Karnataka legislative assembly session live: 4ನೇ ದಿನಕ್ಕೆ ಕಾಲಿಟ್ಟ ಅಧಿವೇಶನ, ಬಾವಿಗಿಳಿದು ಬಿಜೆಪಿ-ಜೆಡಿಎಸ್ ಧರಣಿ

ಕೆಲ ಶಾಸಕರು ಮಧ್ಯಾಹ್ನ ಊಟದ ಬಳಿಕ ಶಾಸಕರ ಭವನದ ಕೊಠಡಿಗೆ ಹೋಗುತ್ತಿದ್ದರು. ಶಾಸಕರ ಭವನದ ಕೊಠಡಿಗೆ ಹೋಗಿ ನಿದ್ದೆ ಮಾಡಿ, ಶಾಸಕರು ವಾಪಸ್ ಸದನಕ್ಕೆ ಬರುತ್ತಿರಲಿಲ್ಲ. ಇದರಿಂದ ಶಾಸಕರ ಹಾಜರಾತಿ ಕಡಿಮೆ ಇರುತ್ತಿತ್ತು. ಇದನ್ನು ತಪ್ಪಿಸಲು ಸಭಾಧ್ಯಕ್ಷ ಯುಟಿ ಖಾದರ್ ಈ ಪ್ರಯೋಗಕ್ಕೆ ಕೈ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ