AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ರೇವಣ್ಣ ಮನವಿಗೆ ಸ್ಪಂದಿಸಿದ ಕೋರ್ಟ್, ಮಾಜಿ ಎಂಪಿ ಬೇಡಿಕೆ ಈಡೇರಿಕೆ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ, ಜೈಲಿನಲ್ಲಿರುವ ಮೊಮ್ಮಗ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪೆರೋಲ್ (Parole) ಕೋರಿ ಯಾವುದೇ ಅರ್ಜಿ ಸಲ್ಲಿಸಿಲ್ಲ. ಬದಲಾಗಿ ಟಿವಿಯಲ್ಲೇ ಅಜ್ಜಿಯ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಇದರ ಮಧ್ಯೆ ಇದೀಗ ಪ್ರಜ್ವಲ್​​​ಗೆ ಕೋರ್ಟ್​​​ನಿಂದ ಕೊಂಚ ರಿಲೀಫ್ ಸಿಕ್ಕಿದೆ.

ಪ್ರಜ್ವಲ್ ರೇವಣ್ಣ ಮನವಿಗೆ ಸ್ಪಂದಿಸಿದ ಕೋರ್ಟ್, ಮಾಜಿ ಎಂಪಿ ಬೇಡಿಕೆ ಈಡೇರಿಕೆ
Prajwal Revanna
Ramesha M
| Edited By: |

Updated on: Jul 20, 2026 | 9:57 PM

Share

ಮುಖ್ಯಾಂಶಗಳು

  • ಜೈಲಿನಲ್ಲಿ ಸ್ನೇಹಿತರು, ಸಂಬಂಧಿಗಳ ಭೇಟಿಗೆ ಅನುಮತಿ ಕೋರಿ ಅರ್ಜಿ
  • ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಭಾಗಶಃ ಪುರಸ್ಕರಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್
  • ಜೈಲು ಕೈಪಿಡಿಗನುಗುಣವಾಗಿ ಅನುಮತಿ ನೀಡುವಂತೆ ಆದೇಶಿಸಿ ಜೈಲಿನ‌ ಮುಖ್ಯ ಅಧೀಕ್ಷಕರಿಗೆ ಕೋರ್ಟ್ ಸೂಚನೆ

ಬೆಂಗಳೂರು, (ಜುಲೈ 20): ಜೈಲಿನಲ್ಲಿ ಸ್ನೇಹಿತರು, ಸಂಬಂಧಿಗಳ ಭೇಟಿಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಮಾಡಿದ್ದ ಮನವಿಗೆ ಕೋರ್ಟ್​ ಪುರಸ್ಕರಿಸಿದೆ. ಹೌದು…ಸ್ನೇಹಿತರು, ಸಂಬಂಧಿಗಳ ಭೇಟಿಗೆ ಅನುಮತಿ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಪುರಸ್ಕರಿಸಿದ್ದು, ಜೈಲು ಕೈಪಿಡಿಗನುಗುಣವಾಗಿ ಅನುಮತಿ ನೀಡುವಂತೆ ಆದೇಶ ಹೊರಡಿಸಿದೆ. ಈ ಬಗ್ಗೆ ಜೈಲಿನ‌ ಮುಖ್ಯ ಅಧೀಕ್ಷಕರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದ್ದು, ಒಂದು ವೇಳೆ ಅನುಮತಿ ನಿರಾಕರಿಸಿದರೆ ಅದರ ಮಾಹಿತಿ ಪ್ರಜ್ವಲ್‌ಗೆ ನೀಡಲು ಸೂಚಿಸಿದೆ.

ಜೈಲಿನಲ್ಲಿ ಸ್ನೇಹಿತರು ಹಾಗೂ ಸಂಬಂಧಿಗಳ ಭೇಟಿಗೆ ಅನುಮತಿ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಇಂದು (ಜುಲೈ 20) ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಭಾಗಶಃ ಪುರಸ್ಕರಿಸಿದೆ. ಜೈಲು ಕೈಪಿಡಿಗನುಗುಣವಾಗಿ ಅನುಮತಿ ನೀಡಲು ಆದೇಶಿಸಿ ಜೈಲಿನ‌ ಮುಖ್ಯ ಅಧೀಕ್ಷಕರಿಗೆ ಸೂಚನೆ ನೀಡಿದೆ.

ಇದನ್ನೂ ಓದಿ: ಅಜ್ಜಿ ಚೆನ್ನಮ್ಮ ನಿಧನದ ಸುದ್ದಿ ಕೇಳಿ ಜೈಲಲ್ಲೇ ಕಣ್ಣೀರಿಟ್ಟ ಮಾಜಿ ಸಂಸದ ಪ್ರಜ್ವಲ್​​ ರೇವಣ್ಣ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್

ಕೆ.ಆರ್ ನಗರದಲ್ಲಿ ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದು, ಕಳೆದ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನು ಶಿಕ್ಷೆ ಪ್ರಮಾಣ ಹಾಗೂ ಜಾಮೀನು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರೂ ಸಹ ಯಾವುದೇ ರಿಲೀಫ್ ಸಿಕ್ಕಿಲ್ಲ.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ (HD Devegowda) ಪತ್ನಿ ಚೆನ್ನಮ್ಮ (Chennamma) ವಿಧಿವಶ ಹಿನ್ನೆಲೆ ಜೈಲಿನಲ್ಲಿರುವ ಮೊಮ್ಮಗ ಪ್ರಜ್ವಲ್ ರೇವಣ್ಣ , ಅಜ್ಜಿಯನ್ನು ನೆನೆದು ಕಣ್ಣೀರು ಹಾಕುತ್ತಿದ್ದಾರೆ. ಅಜ್ಜಿ ಅಂತ್ಯಕ್ರಿಯೆಯನ್ನು ವಿಸಿ ಮೂಲಕ ವೀಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us