AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್ ಇನ್​ ಜೈಲ್: ಶಾಸಕ ಸ್ಥಾನ ಅನರ್ಹ ಭೀತಿ!

Congress MLA Satish Sail: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಪ್ರಕರಣ ದೇಶಾದ್ಯಂತ ಸದ್ದು ಮಾಡಿತ್ತು. ಈ ಹಗರಣವನ್ನ ಅಂದಿನ ಲೋಕಾಯುಕ್ತ ಸಂತೋಷ್ ಹೆಗ್ಡೆ ಬಯಲಿಗೆಳೆದಿದ್ದರು. ಈಗ 14 ವರ್ಷಗಳ ಹಿಂದೆ ದಾಖಲಾಗಿದ್ದ ಒಟ್ಟು ಆರು ಪ್ರಕರಣಗಳ ಆದೇಶ ಹೊರಬಿದ್ದಿದ್ದು, ಕಾರವಾರ ಶಾಸಕ ಸತೀಶ್ ಸೈಲ್‌ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಆರಕ್ಕೆ ಆರು ಪ್ರಕರಣದಲ್ಲೂ ಸತೀಶ್ ಸೈಲ್‌ ದೋಷಿಯಾಗಿದ್ದು, ಇದೀಗ ಸೈಲ್ ಜೈಲ್​ ಪಾಲಾಗಿದ್ದಾರೆ. ಅಲ್ಲದೇ ಇದೀಗ ಸತೀಶ್ ಸೈಲ್​ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ.

ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್ ಇನ್​ ಜೈಲ್: ಶಾಸಕ ಸ್ಥಾನ ಅನರ್ಹ ಭೀತಿ!
ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್
ರಮೇಶ್ ಬಿ. ಜವಳಗೇರಾ
|

Updated on: Oct 24, 2024 | 11:15 PM

Share

ಬೆಂಗಳೂರು, (ಅಕ್ಟೋಬರ್ 24): ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆಯಾಗಿ ಸುಮಾರು 14 ವರ್ಷಗಳ ನಂತರ ತೀರ್ಪು ಹೊರಬಿದ್ದಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದು, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಬಂದರು ಅಧಿಕಾರಿ ಮಹೇಶ್ ಬಿಳಿಯೆ ಸೇರಿದಂತೆ ಅದಿರು ಕಳ್ಳತನದಲ್ಲಿ ಭಾಗಿಯಾದ ಆರೋಪಿಗಳನ್ನು ದೋಷಿಗಳು ಎಂದು ತೀರ್ಪು ನೀಡಿದೆ. ಒಟ್ಟು ಆರು ಪ್ರಕರಣದ ತೀರ್ಪು ನೀಡಿದೆ. ಆರು ಪ್ರಕರಣದಲ್ಲೂ ದೋಷಿಯಾಗಿರುವ ಆಡಳಿತರೂಢ ಕಾಂಗ್ರೆಸ್​ ಪಕ್ಷದ ಶಾಸಕ ಸತೀಶ್ ಸೈಲ್ ಈಗ ಜೈಲು ಸೇರಿದ್ದಾರೆ.

ಸತೀಶ್ ಸೈಲ್ ಜೈಲ್

ಬೇಲೆಕೇರಿ ಅದಿರು ನಾಪತ್ತೆ ಕೇಸ್‌ನಲ್ಲಿ ಶಾಸಕ ಸತೀಶ್ ಸೈಲ್ ಜೊತೆಗೆ ಮಹೇಶ್ ಬಿಳಿಯೆ, ಮಹೇಶ್ ಕುಮಾರ್ ಕೆ, ಪ್ರೇಮ್ ಚಂದ್ ಗರ್ಗ್, ಸುಶೀಲ್ ಕುಮಾರ್ ವಲೇಚ ಎಂಬುವವರನ್ನೂ ದೋಷಿ ಎಂದು ಕೋರ್ಟ್ ತೀರ್ಪು ನೀಡಿದ್ದು, ಕೂಡಲೇ ಎಲ್ಲಾ ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಆದೇಶಿಸಿ , ಶಿಕ್ಷೆ ಪ್ರಮಾಣವನ್ನೂ ನಾಳೆಗೆ (ಅಕ್ಟೋಬರ್ 25) ಕಾಯ್ದಿರಿಸಿದ್ದಾರೆ. ಕೋರ್ಟ್​ ಸೂಚನೆಯಂತೆ ಸಿಬಿಐ ಅಧಿಕಾರಿಗಳು ಸತೀಶ್ ಸೈಲ್ ಸೇರಿದಂತೆ ಇತರೆ ಅಪರಾಧಿಗಳು ಕೋರ್ಟ್​ನಲ್ಲೇ ವಶಕ್ಕೆ ಪಡೆದುಕೊಂಡು ಬೋರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಬಳಿಕ ಆಸ್ಪತ್ರೆಯಿಂದ ನೇರವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಬಿಟ್ಟರು.

ಇದನ್ನೂ ಓದಿ: ಬೇಲೆಕೇರಿ ಅದಿರು ಸಾಗಾಟ ಪ್ರಕರಣ: 6 ಕೇಸ್​ನಲ್ಲೂ ಕೈ​ ಶಾಸಕ ಸತೀಶ್ ಸೈಲ್‌ ದೋಷಿ!

ಈ ಮೊದಲು ಸಿದ್ದರಾಮಯ್ಯ ಆದಿಯಾಗಿ ಕಾಂಗ್ರೆಸ್​ನ ಘಟಾನುಘಟಿ ನಾಯಕರೆಲ್ಲರೂ ಸೇರಿ ಅಕ್ರಮ ಗಣಿ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಅಲ್ಲದೇ  ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಿ ಗಣಿ ಧಣಿಗಳ ವಿರುದ್ಧ ತೊಡೆತಟ್ಟಿದ್ದರು. ಇದೀಗ ಕಾಂಗ್ರೆಸ್​ನ ಶಾಸಕ ಆಗಿರುವ ಸತೀಶ್ ಸೈಲ್​ ಈಗ ಬೇಲೆಕೇರಿ ಅದಿರು ಪಕರಣದಲ್ಲಿ ಅಪರಾಧಿಯಾಗಿ ಜೈಲುಪಾಲಾಗಿದ್ದಾರೆ.

2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆಯಾದ್ರೆ ಶಾಸಕ ಸ್ಥಾನ ಅನರ್ಹ?

ಸದ್ಯ ಇವತ್ತು ಕೋರ್ಟ್‌ಗೆ ಹಾಜರಾಗಿದ್ದ ಆರೋಪಿಗಳನ್ನ ವಶಕ್ಕೆ ಪಡೆದು ಜೈಲಿಗೆ ಶಿಫ್ಟ್ ಮಾಡಲಾಗಿದೆ. ನಾಳೆ(ಅ.25)  ಕೋರ್ಟ್ ಶಿಕ್ಷೆ ಪ್ರಕರಟಿಸಲಿದ್ದು, ಮೂರು ವರ್ಷಕ್ಕಿಂತ ಕಡಿಮೆ ಅವಧಿಯ ಶಿಕ್ಷೆಯಾದ್ರೆ ಜಾಮೀನು ಸಿಗುತ್ತೆ. ಇಲ್ಲವಾದ್ರೆ, ಸತೀಶ್‌ ಸೈಲ್‌ಗೆ ಜೈಲೇ ಗತಿ. ಜೊತೆಗೆ ಎರಡು ವರ್ಷಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯಾದ್ರೆ, ಸತೀಶ್ ಸೈಲ್ ಶಾಸಕ ಸ್ಥಾನವೂ ಅನರ್ಹಗೊಳ್ಳಲಿದೆ. ನಾಳೆ ಮಧ್ಯಾಹ್ನ 12.30ಕ್ಕೆ ಶಾಸಕರ ಭವಿಷ್ಯ ನಿರ್ಧಾರವಾಗಲಿದೆ.

ಏನಿದು ಪ್ರಕರಣ

ಬಳ್ಳಾರಿಯಿಂದ ಮ್ಯಾಂಗನೀಸ್ ಅದಿರನ್ನ ಸಾಗಿಸಿ, ಬೇಲೆಕೇರಿ ಬಂದರಿನ ಮೂಲಕ ವಿದೇಶಕ್ಕೆ ರಫ್ತು ಮಾಡಲಾಗಿತ್ತು. ಈ ವೇಳೆ 2010ರಲ್ಲಿ 5 ಲಕ್ಷ ಮೆಟ್ರಿಕ್ ಟನ್ ಅದಿರನ್ನ ಜಪ್ತಿ ಮಾಡಲಾಗಿತ್ತು. ಸೀಜ್ ಆಗಿದ್ದ ಅದಿರನ್ನ ಸಾಗಾಟ ಮಾಡಿದ ಆರೋಪ ಸತೀಶ್ ಸೈಲ್ ಮೇಲಿತ್ತು.  ಈ ಸ್ಕ್ಯಾಮ್ ಅನ್ನು ಮಾಜಿ ಕರ್ನಾಟಕ ಲೋಕಾಯುಕ್ತರಾದ ಎನ್. ಸಂತೋಶ್ ಹೆಗ್ಡೆ ಬೆಳಕಿಗೆ ತಂದಿದ್ದರು. ಈ ವರದಿಯನ್ವಯ 7.74 ಮಿಲಿಯನ್ ಟನ್ ಕಬ್ಬಿಣದ ಅದಿರು ವಿದೇಶಕ್ಕೆ ರಫ್ತಾಗಿತ್ತು. 2006-07 ಹಾಗೂ 2010-11ರ ನಡುವೆ ಭಾರೀ ಪ್ರಮಾಣದ ಅದಿರು ವಿದೇಶಕ್ಕೆ ರಫ್ತಾಗಿತ್ತು. ಇದರಿಂದ ಸರಕಾರದ ಖಜಾನೆಗೆ ಭಾರೀ ನಷ್ಟವುಂಟಾಗಿತ್ತು.

ಸೀಜ್ ಆಗಿದ್ದ ಅದಿರು ನಾಪತ್ತೆಯಾಗಿದೆ ಎಂದು ಪೊಲೀಸರು ಕೇಸ್ ದಾಖಲಿಸಿದ್ದರು. ನಂತರ ಬೇಲೆಕೇರಿ ಪ್ರಕರಣವನ್ನ ಸಿಬಿಐಗೆ ವರ್ಗಾವಣೆ ಮಾಡಲಾಗಿತ್ತು. ಮಲ್ಲಿಕಾರ್ಜುನ ಶಿಪ್ಪಿಂಗ್ ಕಾರ್ಪೊರೇಷನ್ ಮಾಲೀಕರಾಗಿದ್ದ ಸತೀಶ್ ಸೈಲ್ ವಿರುದ್ಧ ಕ್ರಿಮಿನಲ್ ಕಾನ್ಸ್ಪಿರೆಸಿ, ಚೀಟಿಂಗ್, ಪೋರ್ಜರಿ, ಟ್ರೆಸ್‌ಪಾಸ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಲ್ಲದೇ ಸಿಬಿಐ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಸಿತ್ತು. ಪ್ರಕರಣ ಸಂಬಂಧಿಸಿ 2013ರ ಸೆಪ್ಟೆಂಬರ್ ತಿಂಗಳಲ್ಲಿ ಸಿಬಿಐ ಸತೀಶ್ ಸೈಲ್ ಅವರನ್ನು ಬಂಧಿಸಿತ್ತು. ಇನ್ನು ಈ ಪ್ರಕರಣದಲ್ಲಿ ಅಂದಿನ ಬಿಎಸ್‌ಆರ್ ಕಾಂಗ್ರೆಸ್ ಕಂಪ್ಲಿ ಶಾಸಕ ಸುರೇಶ್ ಬಾಬು ಸಹ ಅರೆಸ್ಟ್ ಆಗಿದ್ದರು. ಬಳಿಕ ಸತೀಶ್ ಸೈಲ್ ಸಹ ಬಂಧನಕ್ಕೊಳಗಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?