AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್.ಡಿ.ರೇವಣ್ಣಗೆ ಬಂಧನ ಭೀತಿ: ಮಧ್ಯಂತರ ನಿರೀಕ್ಷಣಾ ಜಾಮೀನು ವಜಾ

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್​.ಡಿ.ರೇವಣ್ಣಗೂ ಬಂಧನದ ಭೀತಿಯಲ್ಲಿದ್ದಾರೆ. ಹೀಗಾಗಿ ಮಧ್ಯಂತರ ಜಾಮೀನಿಗೆ ಕಸರತ್ತು ನಡೆಸಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಇಂದು ಜಾಮೀನು ವಿಚಾರಣೆ ಕೈಗೆತ್ತಿಕೊಂಡಿದ್ದು, ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನಯ ವಜಾಗೊಳಿಸಲಾಗಿದೆ.

Ramesha M
| Updated By: ಗಂಗಾಧರ​ ಬ. ಸಾಬೋಜಿ|

Updated on:May 04, 2024 | 7:05 PM

Share

ಬೆಂಗಳೂರು, ಮೇ 04: ಲೈಂಗಿಕ ದೌರ್ಜನ್ಯ ಕೇಸ್​ನಲ್ಲಿ ಶಾಸಕ ಹೆಚ್‌.ಡಿ.ರೇವಣ್ಣಗೆ (HD Revanna) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ (Special court) ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಆ ಮೂಲಕ ಮೇ 6ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ. ಹೀಗಾಗಿ ಹೆಚ್.ಡಿ.ರೇವಣ್ಣಗೆ ಬಂಧನದ ಭೀತಿ ಶುರುವಾಗಿದೆ. ಒಂದು ಲೈಂಗಿಕ ದೌರ್ಜನ್ಯ ಕೇಸ್, ಮತ್ತೊಂದು ಕಿಡ್ನಾಪ್ ಆರೋಪ. ಹೀಗೆ ಎರಡು ಕೇಸ್‌ಗಳಿಂದ ರೇವಣ್ಣ ಇಕ್ಕಟ್ಟಿಗೆ ಸಿಲುಕಿದ್ದಾರೆ. ಯಾವುದೇ ಕ್ಷಣದಲ್ಲಿ ಬಂಧನವಾದ್ರೂ ಅಚ್ಚರಿ ಇಲ್ಲ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಇಂದು ಜಾಮೀನು ವಿಚಾರಣೆ ಕೈಗೆತ್ತಿಕೊಂಡಿದ್ದು ರೇವಣ್ಣ ಪರ ವಕೀಲರು ವಾದಮಂಡಿಸಿದ್ದಾರೆ. ಆರೋಪಿ ಮುಗ್ಧ ಎಂದು ಸಾಬೀತುಮಾಡಲು ಅವಕಾಶ ನೀಡಬೇಕು. ಈ ಕಾರಣಕ್ಕಾಗಿಯೇ ಹೆಚ್‌.ಡಿ.ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಬೇಕು. ನ್ಯಾಯಾಧೀಶರೂ ಪೂರ್ವಾಗ್ರಹವಿಲ್ಲದೇ ನಿರೀಕ್ಷಣಾ ಜಾಮೀನು ಪರಿಗಣಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ಉಲ್ಲೇಖಿಸಿ ಮೂರ್ತಿ ಡಿ. ನಾಯ್ಕ್ ವಾದ ಮಂಡಿಸಿದರು.

ಇದನ್ನೂ ಓದಿ: ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: ರೇವಣ್ಣ ನಿವಾಸದಲ್ಲಿ ಇಂಚಿಂಚೂ ಶೋಧ ನಡೆಸಿದ SIT

ಹೆಚ್.ಡಿ.ರೇವಣ್ಣ ವಿಚಾರಣೆಗೆ ಹಾಜರಾಗಲು ಮುಂದಾದ ನಂತರ ಈ ಕೇಸ್​ ಕೋರ್ಟ್ ಎಸ್ಐಟಿಯ ಈ ನಡವಳಿಕೆಯನ್ನು ತಿಳಿಯಬೇಕು. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಆರೋಪಿಯಲ್ಲ. ಎ2 ಆರೋಪಿಗೂ ಹೆಚ್.ಡಿ.ರೇವಣ್ಣಗೂ ಸಂಬಂಧವಿಲ್ಲ. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ದೇಶದೆಲ್ಲೆಡೆ ಪ್ರಚಾರವಾಗಿದೆ. ರಾಜಕೀಯ, ಹಣಕಾಸಿನ ಬಲ ಬಳಸಿ ಈ ಕೃತ್ಯ ಮಾಡಿದ್ದಾರೆಂದು ಎಸ್ಐಟಿ ಆಕ್ಷೇಪಣೆ ಉಲ್ಲೇಖಿಸಿ ರೇವಣ್ಣ ಪರ ವಕೀಲರ ವಾದವಾಗಿದೆ.

ಈ ಕೇಸಿಗೆ ಸಂಬಂಧವಿಲ್ಲದ ಅಂಶಗಳನ್ನೆಲ್ಲಾ ಎಸ್ಐಟಿ ಉಲ್ಲೇಖಿಸಿದೆ. ಹೆಚ್.ಡಿ.ರೇವಣ್ಣ ಮೇಲಿನ ಆರೋಪಕ್ಕೂ ಎಸ್ಐಟಿ ಆಕ್ಷೇಪಣೆಗೂ ಸಂಬಂಧವಿಲ್ಲ. ರಾಜಕೀಯ ದ್ವೇಷದಿಂದ ತನಿಖೆ ನಡೆಯುತ್ತಿದೆ. ಕೆಲವೊಮ್ಮೆ ಪೊಲೀಸರು ಸ್ವತಂತ್ರವಾಗಿ ತನಿಖೆ ನಡೆಸದಿರುವುದು ದುರದೃಷ್ಟಕರ ಎಂದು ಸುಪ್ರೀಂ ಕೋರ್ಟ್ ತೀರ್ಪನ್ನು ವಕೀಲರು ಓದಿದರು.

ಎಸ್​​ಪಿಪಿ ಗೆ ನೋಟಿಸ್ ನೀಡದೆಯೂ ಮಧ್ಯಂತರ ಜಾಮೀನು ನೀಡಬಹುದು. ಈಗ ಎಸ್ಐಟಿ ಪೊಲೀಸರಿಗೆ ಕೋರ್ಟ್ ನೋಟಿಸ್ ನೀಡಿದೆ. ಹೆಚ್.ಡಿ.ರೇವಣ್ಣ ಇಂದು ಎಸ್ಐಟಿ ವಿಚಾರಣೆಗೆ ಹಾಜರಾಗಲು ಸಿದ್ಧರಾಗಿದ್ದಾರೆ. ಆದರೆ ಎಸ್ಐಟಿ ರೇವಣ್ಣ ಮೇಲೆ ಜಾಮೀನು ರಹಿತ ಕೇಸ್ ಹಾಕಿದೆ. ಕೋರ್ಟ್ ಬಂಧನದಿಂದ ರಕ್ಷಣೆ ನೀಡಿದರೆ ತನಿಖೆಗೆ ಹಾಜರಾಗಲು ಸಿದ್ಧ. ತನಿಖೆಯ ಉದ್ದೇಶವೇ ಸತ್ಯಾಂಶ ಸಂಗ್ರಹಿಸುವುದು. ಎಸ್​ಪಿಪಿ ಸಲ್ಲಿಸಿರುವ ಆಕ್ಷೇಪಣೆಯಲ್ಲಿ ಪ್ರಜ್ವಲ್ ರೇವಣ್ಣ ಮೇಲೆ ಆರೋಪ ಹೊರಿಸಿವೆ. ಪ್ರಜ್ವಲ್ ರೇವಣ್ಣ ಮೇಲಿನ ಆರೋಪಗಳಿಗೆ ರೇವಣ್ಣ ಹೊಣೆಯೇ ಎಂದು ಪ್ರಶ್ನಿಸಿದರು. ಹೀಗಾಗಿ ಯಾವುದೇ ಷರತ್ತು ವಿಧಿಸಿ ಮಧ್ಯಂತರ ಜಾಮೀನು ನೀಡಿ ಎಂದು ರೇವಣ್ಣ ಪರ ವಕೀಲರು ವಾದಮಂಡಿಸಿದರು.

ಇದನ್ನೂ ಓದಿ: ರೇವಣ್ಣ ವಿರುದ್ದ ಬಿಜೆಪಿ ನಾಯಕನ ಹೊಸ ಬಾಂಬ್; 30 ವರ್ಷದ ಹಳೆಯ ಘಟನೆ ರಿವೀಲ್​

ಎಸ್‌ಐಟಿ ಎಸ್‌ಪಿಪಿ ಬಿ.ಎನ್.ಜಗದೀಶ್ ವಾದಮಂಡಿಸಿದ್ದು, ಮೊದಲ ಎಫ್ಐಆರ್‌ನಲ್ಲಿ ಮಾತ್ರ ಜಾಮೀನು ರಹಿತ ಅಪರಾಧಗಳಿಲ್ಲ ಎಂದಿದ್ದೆ. ಜಾಮೀನು ರಹಿತ ಕೇಸ್ ದಾಖಲಿಸುವುದಿಲ್ಲ ಎಂದು ಭರವಸೆ ನೀಡಿಲ್ಲ. ತನಿಖಾಧಿಕಾರಿಯ ಮೊದಲ ಕರ್ತವ್ಯ ಮಹಿಳೆಯ ಜೀವ ಉಳಿಸುವುದು. ಆಕೆಯ ಜೀವ ಉಳಿಸಿ ಸ್ವತಂತ್ರಗೊಳಿಸಲು ಎಸ್ಐಟಿ ಪ್ರಯತ್ನಿಸುತ್ತಿದೆ. ಬಡ ಮಹಿಳೆಯನ್ನು ಹುಡುಕಲು ಎಸ್ಐಟಿ ಎಲ್ಲಾ ಪ್ರಯತ್ನ ಮಾಡುತ್ತಿದೆ. ಆಕೆಯ ಪುತ್ರ ನೀಡಿರುವ ದೂರು ಸಂಪೂರ್ಣ ದೂರೆಂದು ಭಾವಿಸಬಾರದು. ಸೆ.364A ಯಾವುದೇ ಒಂದು ಕೃತ್ಯ ಮಾಡಲು ಅಥವಾ ಮಾಡದಂತೆ ತಡೆಯಲು ಅಪಹರಣ ಇದೇ ಕಾರಣಕ್ಕಾಗಿಯೇ ಇನ್ ಕ್ಯಾಮರಾ ವಿಚಾರಣೆ ಕೋರಿದ್ದೆ. ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ್ದು ಯಾರು? ಸಂಸದ ಪ್ರಜ್ವಲ್ ರೇವಣ್ಣ ಪಾತ್ರವಿದೆಯಾ ಇಲ್ಲವಾ ಗೊತ್ತಿಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:34 pm, Sat, 4 May 24

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ