ಅತ್ಯಾಚಾರ ಕೇಸ್​ನಲ್ಲೂ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಜೈಲು ಸೇರಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಇದೀಗ ಅತ್ಯಾಚಾರ ಪ್ರಕರಣದಲ್ಲೂ ಬಿಗ್ ರಿಲೀಫ್​ ಸಿಕ್ಕಿದೆ. ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನಗೆ ಕೋರ್ಟ್ ಜಾಮೀನು ನೀಡಿದೆ.

ಅತ್ಯಾಚಾರ ಕೇಸ್​ನಲ್ಲೂ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು
ಶಾಸಕ ಮುನಿರತ್ನ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Oct 15, 2024 | 4:39 PM

ಬೆಂಗಳೂರು, (ಅಕ್ಟೋಬರ್ 15): ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ಇದೀಗ ಅತ್ಯಾಚಾರ ಪ್ರಕರಣದಲ್ಲೂ ಸಹ ಮುನಿರತ್ನಗೆ ಜಾಮೀನು ದೊರೆತಿದೆ. ಇಂದು (ಅಕ್ಟೋಬರ್ 15) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಜಾತಿ ನಿಂದನೆ ಕೇಸ್‌ನಲ್ಲಿ ಈಗಾಗಲೇ ಮುನಿರತ್ನ ಅವರಿಗೆ ಜಾಮೀನು ಸಿಕ್ಕಿತ್ತು. ಅದರೆ, ಅವರು ಬಿಡುಗಡೆ ಆಗುತ್ತಿರುವ ಹೊತ್ತಿನಲ್ಲಿಯೇ ಪರಪ್ಪನ ಅಗ್ರಹಾರದ ಬಳಿ ಅತ್ಯಾಚಾರ ಕೇಸ್‌ನಲ್ಲಿ ಪೊಲೀಸರು ಬಂಧಿಸಿದ್ದರು. ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ರಾಜರಾಜೇಶ್ವರಿ ನಗರದ ಸಾಮಾಜಿಕ ಕಾರ್ಯಕರ್ತೆ 40 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಮುನಿರತ್ನ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.. ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಐಪಿಸಿ ಸೆಕ್ಷನ್ 354A, 354C, 376, 506, 504, 120(b), 149, 384, 406, 308 ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ. ಬಿಜೆಪಿ ಶಾಸಕ ಮುನಿರತ್ನ ಹೊರತುಪಡಿಸಿ, ಇತರ ಆರು ವ್ಯಕ್ತಿಗಳ ವಿರುದ್ಧ ಆರೋಪ ಮಾಡಲಾಗಿತ್ತು. ವಿಜಯ್ ಕುಮಾರ್, ಸುಧಾಕರ, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ್ ಮತ್ತು ಲೋಕಿ ಸೇರಿದಂತೆ ಪ್ರಕರಣ ದಾಖಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುನಿರತ್ನ ಅವರನ್ನು ಬೆಂಗಳೂರು ಪೊಲೀಸರು ಸೆಪ್ಟೆಂಬರ್ 14 ರಂದು ರಾತ್ರಿ ಕಸ್ಟಡಿಗೆ ತೆಗೆದುಕೊಂಡಿದ್ದರು. ಕೋಲಾರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಬಿ ನಿಖಿಲ್ ಅವರ ಪ್ರಕಾರ, ಆಂಧ್ರಪ್ರದೇಶಕ್ಕೆ ಪ್ರಯಾಣಿಸುತ್ತಿದ್ದಾಗ ಕೋಲಾರ ಪೊಲೀಸರ ಸಹಾಯದಿಂದ ಬೆಂಗಳೂರು ಪೊಲೀಸರು ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಬಳಿಕ ಮುನಿರತ್ನ ಅವರು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದರು. ಅದ್ರ, ಅಲ್ಲಿಯೇ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಮುನಿರತ್ನ ಬಂಧನವಾಗಿತ್ತು

Published On - 3:58 pm, Tue, 15 October 24

ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ: ಸಿಎಂ
ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ: ಸಿಎಂ
ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​
ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​
ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!
ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!
ಮೈಸೂರು ದಸರಾ: ವಿಜಯಪುರ ಸತ್ತಿಗೆ ಕುಣಿತ ಕಲಾ ತಂಡಕ್ಕೆ ಮೊದಲ ಬಹುಮಾನ
ಮೈಸೂರು ದಸರಾ: ವಿಜಯಪುರ ಸತ್ತಿಗೆ ಕುಣಿತ ಕಲಾ ತಂಡಕ್ಕೆ ಮೊದಲ ಬಹುಮಾನ
ಸಿದ್ದರಾಮಯ್ಯ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗೆ ಮನವಿ: ಬಿವೈ ವಿಜಯೇಂದ್ರ
ಸಿದ್ದರಾಮಯ್ಯ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗೆ ಮನವಿ: ಬಿವೈ ವಿಜಯೇಂದ್ರ
ಹುಲಿ ಸೆರೆಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ
ಹುಲಿ ಸೆರೆಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಾದ್ಯಂತ ಭಾರೀ ಮಳೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಾದ್ಯಂತ ಭಾರೀ ಮಳೆ
ವಕ್ಫ್ ಜಮೀನು: ಸಚಿವ ಜಮೀರ್ ಅಹ್ಮದ್​ರನ್ನು ತರಾಟೆಗೆ ತೆಗೆದುಕೊಂಡ ಸಿಟಿ ರವಿ
ವಕ್ಫ್ ಜಮೀನು: ಸಚಿವ ಜಮೀರ್ ಅಹ್ಮದ್​ರನ್ನು ತರಾಟೆಗೆ ತೆಗೆದುಕೊಂಡ ಸಿಟಿ ರವಿ
ಓಕಳೀಪುರ ರೈಲ್ವೆ ಅಂಡರ್​ಪಾಸ್​ನಲ್ಲಿ ನೀರು ನಿಂತು ಜನರ ಪರದಾಟ
ಓಕಳೀಪುರ ರೈಲ್ವೆ ಅಂಡರ್​ಪಾಸ್​ನಲ್ಲಿ ನೀರು ನಿಂತು ಜನರ ಪರದಾಟ
ತನಿಖೆಯ ನಂತರ ಪೂರ್ಣ ಮಾಹಿತಿ ನೀಡುತ್ತೇವೆ: ಡಾ ಶರಣಪ್ಪ, ಪೊಲೀಸ್ ಕಮೀಶನರ್
ತನಿಖೆಯ ನಂತರ ಪೂರ್ಣ ಮಾಹಿತಿ ನೀಡುತ್ತೇವೆ: ಡಾ ಶರಣಪ್ಪ, ಪೊಲೀಸ್ ಕಮೀಶನರ್