ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ಯಶವಂತಪುರ-ತಾಳಗುಪ್ಪ ಮಧ್ಯೆ ವಿಶೇಷ ಎಕ್ಸ್‌ ಪ್ರೆಸ್ ರೈಲು ಸಂಚಾರ

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಯಶವಂತಪುರ ಟು ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ ಪ್ರೆಸ್ ರೈಲು ಸಂಚಾರಕ್ಕೆ ನೈರುತ್ಯ ರೈಲ್ವೆ ನಿರ್ಧರಿಸಿದೆ. ಜೊತೆಗೆ ದಾನಾಪುರ ಟು ಬೆಂಗಳೂರು ನಡುವಿನ ವಿಶೇಷ ರೈಲು ಸೇವೆಯನ್ನು ಸಹ ವಿಸ್ತರಿಸಲಾಗಿದೆ. ಎರಡು ರೈಲುಗಳ ವೇಳಾಪಟ್ಟಿ, ದಿನಾಂಕ ಸಂಪೂರ್ಣ ವಿವರ ಇಲ್ಲಿದೆ.

ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ಯಶವಂತಪುರ-ತಾಳಗುಪ್ಪ ಮಧ್ಯೆ ವಿಶೇಷ ಎಕ್ಸ್‌ ಪ್ರೆಸ್ ರೈಲು ಸಂಚಾರ
Yeshwantpur To Talaguppa

Updated on: Jul 29, 2025 | 7:45 AM

ಬೆಂಗಳೂರು, ಜುಲೈ 29: ಸಾತಂತ್ರ್ಯ ದಿನಾಚರಣೆಯ (Independence Day) ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಯಶವಂತಪುರ ಮತ್ತು ತಾಳಗುಪ್ಪ (Yesvantpur-Talaguppa) ನಡುವೆ ಪ್ರತಿ ದಿಕ್ಕಿನಲ್ಲಿ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಗಳನ್ನು ನಿರ್ವಹಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ನೈರುತ್ಯ ರೈಲ್ವೆ ಮಾಹಿತಿ ನೀಡಿದೆ. ವಿಶೇಷ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿಶೇಷ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿ 

ರೈಲು ಸಂಖ್ಯೆ 06543 ಯಶವಂತಪುರ ಟು ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 14ರಂದು (ಗುರುವಾರ) ರಾತ್ರಿ 10:30 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗಿನ ಜಾವ 04:15 ಗಂಟೆಗೆ ತಾಳಗುಪ್ಪ ತಲುಪಲಿದೆ.

ಇದನ್ನೂ ಓದಿ
ಈಡೇರಿದ ಕನಸು: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಗ್ರೀನ್ ಸಿಗ್ನಲ್
ಕರ್ನಾಟಕದಿಂದ ವೇಲಂಕಣಿ ಜಾತ್ರೆಗೆ ತೆರಳುವ ಭಕ್ತರಿಗೆ ಗುಡ್​ನ್ಯೂಸ್​​
ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ
ಕರ್ನಾಟಕದ ಈ ಭಾಗದಿಂದ ಸಿಕಂದರಾಬಾದ್, ಹೈದರಾಬಾದ್​ಗೆ ವಿಶೇಷ ರೈಲು

ನೈರುತ್ಯ ರೈಲ್ವೆ ಟ್ವೀಟ್​

ರೈಲು ಸಂಖ್ಯೆ 06544 ತಾಳಗುಪ್ಪ ಟು ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 15ರಂದು (ಶುಕ್ರವಾರ) ಬೆಳಿಗ್ಗೆ 08:15 ಗಂಟೆಗೆ ತಾಳಗುಪ್ಪದಿಂದ ಹೊರಟು, ಅಂದು ಸಂಜೆ 04:50 ಗಂಟೆಗೆ ಯಶವಂತಪುರ ತಲುಪಲಿದೆ.

ಎಲ್ಲೆಲ್ಲಿ ನಿಲ್ದಾಣ

ಈ ವಿಶೇಷ ರೈಲು ಎರಡೂ ಮಾರ್ಗಗಳಲ್ಲಿ, ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರಂ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಇದನ್ನೂ ಓದಿ: ಕೊನೆಗೂ ಈಡೇರಿದ 3 ದಶಕ ಕನಸು: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಗ್ರೀನ್ ಸಿಗ್ನಲ್

ಈ ರೈಲು 1 ಎಸಿ ಫಸ್ಟ್ ಕ್ಲಾಸ್, 2 ಎಸಿ ಟು ಟೈರ್, 5 ಎಸಿ ತ್ರಿ ಟೈರ್, 7 ಸೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್, 2 ಲಗೇಜ್-ಕಮ್-ಗಾರ್ಡ್ ವ್ಯಾನ್ (ಜನರೇಟರ್ ಕಾರ್ ಸಹಿತ) ಮತ್ತು 1 ಪ್ಯಾಂಟ್ರಿ ಕಾರ್ (ಬಂದ್ ಸ್ಥಿತಿಯಲ್ಲಿರುತ್ತದೆ) ಸೇರಿದಂತೆ ಒಟ್ಟು 22 ಬೋಗಿಗಳನ್ನು ಒಳಗೊಂಡಿರುತ್ತದೆ.

ದಾನಾಪುರ ಟು ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಗಳ ಮುಂದುವರಿಕೆ

ಪೂರ್ವ ಮಧ್ಯೆ ರೈಲ್ವೆಯು ದಾನಾಪುರ ಮತ್ತು ಬೆಂಗಳೂರು ನಡುವೆ ಸಂಚರಿಸುವ ವಿಶೇಷ ರೈಲುಗಳ ಅವಧಿಯನ್ನು ಅಸ್ತಿತ್ವದಲ್ಲಿರುವ ಸಮಯ ಮತ್ತು ನಿಲುಗಡೆಗಳೊಂದಿಗೆ ವಿಸ್ತರಿಸಿದೆ.

ರೈಲು ಸಂಖ್ಯೆ 03251 ದಾನಾಪುರ ಟು ಎಸ್.ಎಂ.ವಿ.ಟಿ. ಬೆಂಗಳೂರು ದ್ವಿ-ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನು ಈ ಹಿಂದೆ ಜುಲೈ 28ರವರೆಗೆ ಸಂಚರಿಸಲು ಸೂಚಿಸಲಾಗಿತ್ತು. ಈಗ ಇದನು ಆಗಸ್ಟ್ 3 ರಿಂದ 25ರವರೆಗೆ ವಿಸ್ತರಿಸಲಾಗಿದೆ. ಅದೇ ರೀತಿ, ರೈಲು ಸಂಖ್ಯೆ 03252 ಎಸ್.ಎಂ.ವಿ.ಟಿ. ಬೆಂಗಳೂರು ದಾನಾಪುರ ದಿ-ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನು ಈ ಹಿಂದೆ ಜುಲೈ 30ರವರೆಗೆ ಸಂಚರಿಸಲು ಸೂಚಿಸಲಾಗಿತ್ತು. ಈಗ ಇದನು ಆಗಸ್ಟ್ 5 ರಿಂದ 27ರವರೆಗೆ ವಿಸ್ತರಿಸಲಾಗಿದೆ. ಈ ಎರಡೂ ದ್ವಿ-ಸಾಪ್ತಾಹಿಕ ರೈಲುಗಳು ವಿಸ್ತ್ರತ ಅವಧಿಯಲ್ಲಿ ಪ್ರತಿ ದಿಕ್ಕಿನಲ್ಲಿ ಒಟ್ಟು 8 ಟ್ರಿಪ್‌ಗಳನ್ನು ಸಂಚರಿಸಲಿವೆ.

ರೈಲು ಸಂಖ್ಯೆ 03259 ದಾನಾಪುರ ಟು ಎಸ್.ಎಂ.ವಿ.ಟಿ. ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನು ಈ ಹಿಂದೆ ಜುಲೈ 29ರವರೆಗೆ ಸಂಚರಿಸಲು ಸೂಚಿಸಲಾಗಿತ್ತು. ಈಗ ಇದನು ಆಗಸ್ಟ್ 5 ರಿಂದ 26ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ

ರೈಲು ಸಂಖ್ಯೆ 03260 ಎಸ್.ಎಂ.ವಿ.ಟಿ. ಬೆಂಗಳೂರು ಟು ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನು ಸಹ ಈ ಹಿಂದೆ ಜುಲೈ 31ರವರೆಗೆ ಸಂಚರಿಸಲು ಸೂಚಿಸಲಾಗಿತ್ತು. ಈಗ ಇದನು ಆಗಸ್ಟ್ 7 ರಿಂದ 28 ರವರೆಗೆ ವಿಸ್ತರಿಸಲಾಗಿದೆ. ಈ ಎರಡೂ ಸಾಪ್ತಾಹಿಕ ರೈಲುಗಳು ವಿಸ್ತ್ರತ ಅವಧಿಯಲ್ಲಿ ಪ್ರತಿ ದಿಕ್ಕಿನಲ್ಲಿ ಒಟ್ಟು 4 ಟ್ರಿಪ್‌ಗಳನ್ನು ಸಂಚರಿಸಲಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.