ಪ್ರಯಾಣಿಕರ ಗಮನಕ್ಕೆ: ಬೆಂಗಳೂರು-ಕಾರವಾರ ಮಧ್ಯೆ ವಿಶೇಷ ರೈಲು

ಪ್ರಯಾಣಿಕರ ಬೇಡಿಕೆಯ ಮೇರೆಗೆ ಬೆಂಗಳೂರು-ಕಾರವಾರ ಮಧ್ಯೆ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಯಾವ್ಯಾವ ದಿನಾಂಕದಂದು ರೈಲು ಸಂಚರಿಸಲಿದೆ. ಏನೇನು ವಿಶೇಷತೆಗಳನ್ನು ಒಳಗೊಂಡಿದೆ ಎಂಬ ಎಲ್ಲ ಮಾಹಿತಿ ಇಲ್ಲಿದೆ ಓದಿ.

ಪ್ರಯಾಣಿಕರ ಗಮನಕ್ಕೆ: ಬೆಂಗಳೂರು-ಕಾರವಾರ ಮಧ್ಯೆ ವಿಶೇಷ ರೈಲು
ಕಾರವಾರ ರೈಲು ನಿಲ್ದಾಣ
Follow us
ವಿವೇಕ ಬಿರಾದಾರ
|

Updated on: Jul 24, 2024 | 8:11 AM

ಪ್ರಯಾಣಿಕರ ಬೇಡಿಕೆಯ ಮೇರೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಾರವಾರ ನಿಲ್ದಾಣಗಳ (Bengaluru-Karwar) ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು (Train) ಓಡಿಸಲಾಗುವುದು ಎಂದು ನೈಋತ್ಯ ರೈಲ್ವೆ ವಲಯ (South Western Railway Zone) ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಜುಲೈ 26 ಮತ್ತು 28 ರಂದು ರೈಲು ಸಂಖ್ಯೆ 06567 ಸರ್ ಎಂ. ವಿಶ್ವೇಶ್ವರಯ್ಯ ಬೆಂಗಳೂರು-ಕಾರವಾರ ವಿಶೇಷ ಎಕ್ಸ್​ಪ್ರೆಸ್ ರೈಲು ಸರ್ ಎಂ. ವಿಶ್ವೇಶ್ವರಯ್ಯ ಬೆಂಗಳೂರಿನಿಂದ ಮಧ್ಯರಾತ್ರಿ 12:30 ಗಂಟೆಗೆ ಹೊರಟು, ಅದೇ ದಿನ ಸಂಜೆ 4 ಗಂಟೆಗೆ ಕಾರವಾರ ನಿಲ್ದಾಣ ತಲುಪಲಿದೆ.

ಪುನಃ ಇದೇ ರೈಲು (06568) ಜುಲೈ 26 ಮತ್ತು 28 ರಂದು ಕಾರವಾರ ನಿಲ್ದಾಣದಿಂದ ರಾತ್ರಿ 11:30 ಗಂಟೆಗೆ ಹೊರಟು, ಮರುದಿನ ಸಂಜೆ 3:30 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಜುಲೈ, ಆಗಸ್ಟ್​​​ ತಿಂಗಳಲ್ಲಿ ಈ ದಿನದಂದು ಬೆಂಗಳೂರು-ಚೆನ್ನೈ ರೈಲು ರದ್ದು

ಈ ವಿಶೇಷ ರೈಲು ಬಾಣಸವಾಡಿ, ಚಿಕ್ಕಬಾಣಾವರ, ಕುಣಿಗಲ್, ಚನ್ನಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳಲ್ಲಿ ನಿಲುಗಡೆ ಇರಲಿವೆ.

ಈ ವಿಶೇಷ ರೈಲು ಎಸಿ-ಟು ಟೈಯರ್-2 ಎಸಿ-ತ್ರಿ ಟೈಯರ್-2, ಸ್ವೀಪರ್ ಕ್ಲಾಸ್-6, ಸಾಮಾನ್ಯ ದ್ವಿತೀಯ ದರ್ಜೆ-6 ಮತ್ತು ಎಸ್ಎಲ್‌ಆರ್/ಡಿ -2 ಸೇರಿದಂತೆ 18 ಬೋಗಿಗಳು ಒಳಗೊಂಡಿರುತ್ತವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ