AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಕ್, ಶ್ರವಣ ದೋಷವುಳ್ಳ ವಕೀಲೆಯ ವಾದ ಆಲಿಸಿದ ಕರ್ನಾಟಕ ಹೈಕೋರ್ಟ್: ದೇಶದಲ್ಲೇ ಮೊದಲು!

2023 ರ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್​ನಲ್ಲಿ ಸಂಜ್ಞಾ ಭಾಷೆಯ ಮೂಲಕ ವಾದ ಮಂಡಿಸಿ ದೇಶದ ನ್ಯಾಯಾಂಗದ ಇತಿಹಾಸದಲ್ಲಿ ದಾಖಲೆ ನಿರ್ಮಾಣ ಮಾಡಿದ್ದ ವಾಕ್ ಮತ್ತು ಶ್ರವಣ ದೋಷವುಳ್ಳ ವಕೀಲೆ ಸಾರಾ ಸನ್ನಿ ಇದೀಗ ಮತ್ತೊಂದು ದಾಖಲೆ ಮಾಡಿದ್ದಾರೆ. ಕರ್ನಾಟಕ ಹೈಕೋರ್ಟ್​ನಲ್ಲಿ ಸಂಜ್ಞಾ ಭಾಷೆಯ ಇಂಟರ್ಪ್ರಿಟರ್ ಮೂಲಕ ವಾದ ಮಂಡನೆ ಮಾಡಿದ್ದಾರೆ. ಇದರೊಂದಿಗೆ, ಸಂಜ್ಞಾ ಭಾಷೆಯಲ್ಲಿ ಮಂಡಿಸಿದ ವಾದ ಆಲಿಸಿದ ದೇಶದ ಮೊದಲ ಹೈಕೋರ್ಟ್ ಎಂಬ ಹೆಗ್ಗಳಿಕೆಗೆ ಕರ್ನಾಟಕ ಹೈಕೋರ್ಟ್ ಪಾತ್ರವಾಗಿದೆ.

ವಾಕ್, ಶ್ರವಣ ದೋಷವುಳ್ಳ ವಕೀಲೆಯ ವಾದ ಆಲಿಸಿದ ಕರ್ನಾಟಕ ಹೈಕೋರ್ಟ್: ದೇಶದಲ್ಲೇ ಮೊದಲು!
ಕರ್ನಾಟಕ ಹೈಕೋರ್ಟ್ (ಒಳ ಚಿತ್ರದಲ್ಲಿ ಸಾರಾ ಸನ್ನಿ)
Ganapathi Sharma
|

Updated on: Apr 09, 2024 | 8:08 AM

Share

ಬೆಂಗಳೂರು, ಏಪ್ರಿಲ್ 9: ವಾಕ್ ಮತ್ತು ಶ್ರವಣ ದೋಷವುಳ್ಳ ವಕೀಲರು ಸಂಜ್ಞಾ ಭಾಷೆಯ ಮೂಲಕ ಮಂಡಿಸಿದ ವಾದವನ್ನು ಕರ್ನಾಟಕ ಹೈಕೋರ್ಟ್ (Karnataka High Court) ಸೋಮವಾರ ಆಲಿಸಿದೆ. ಈ ಮೂಲಕ, ಸಂಜ್ಞಾ ಭಾಷೆಯಲ್ಲಿ (Sign language) ಮಂಡಿಸಿದ ವಾದ ಆಲಿಸಿದ ದೇಶದ ಮೊದಲ ಹೈಕೋರ್ಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವಕೀಲೆ ಸಾರಾ ಸನ್ನಿ ಮಂಡಿಸಿದ ವಾದವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಪೀಠವು ಆಲಿಸಿತು.

ಸುಪ್ರೀಂ ಕೋರ್ಟ್​ನಲ್ಲಿ ವಾದ ಮಂಡಿಸಿದ್ದ ಸಾರಾ

ಪ್ರಮಾಣೀಕೃತ ಸಂಜ್ಞಾ ಭಾಷಾ ಇಂಟರ್ಪ್ರಿಟರ್ (ವಿವರಣೆಕಾರ) ಮೂಲಕ 2023 ರ ಅಕ್ಟೋಬರ್‌ನಲ್ಲಿ ವಕೀಲೆ ಸಾರಾ ಸನ್ನಿ ಸುಪ್ರೀಂ ಕೋರ್ಟ್​ನಲ್ಲಿ ವಾದ ಮಂಡಿಸಿ ದೇಶದ ನ್ಯಾಯಾಂಗದ ಇತಿಹಾಸದಲ್ಲಿ ದಾಖಲೆ ನಿರ್ಮಿಸಿದ್ದರು. ಇದೀಗ ಹೈಕೋರ್ಟ್​ನಲ್ಲಿ ವಾದ ಮಂಡನೆ ಮಾಡಿ ಮತ್ತೊಂದು ದಾಖಲೆ ನಿರ್ಮಾಣ ಮಾಡಿದ್ದಾರೆ.

‘ಅರ್ಜಿದಾರರ ಪತ್ನಿಯ ಪರ ವಕೀಲೆ ಸಾರಾ ಸನ್ನಿ ಸಂಜ್ಞಾ ಭಾಷೆಯ ಇಂಟರ್ಪ್ರಿಟರ್ ಮೂಲಕ ವಿವರವಾಗಿ ವಾದ ಮಂಡನೆ ಮಾಡಿದ್ದಾರೆ. ಸಾರಾ ಸನ್ನಿ ಮಾಡಿದ ವಾದ ಮಂಡನೆಯನ್ನು ಪ್ರಶಂಸಿಸಬೇಕಾಗಿದೆ. ಸಂಜ್ಞೆ ಭಾಷಾ ಇಂಟರ್ಪ್ರಿಟರ್ ಮೂಲಕವಾದರೂ ಮೆಚ್ಚುಗೆಯಾಗುವ ರೀತಿಯಲ್ಲಿ ವಾದ ಮಂಡನೆ ಮಾಡಿದ್ದಾರೆ’ ಎಂದು ನ್ಯಾಯಪೀಠ ಮೆಚ್ಚುಗೆ ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್, ವಾಕ್ ಮತ್ತು ಶ್ರವಣದೋಷವುಳ್ಳ ವಕೀಲರ ಅಹವಾಲುಗಳನ್ನು ದಾಖಲಿಸಿದ ಮೊದಲ ಹೈಕೋರ್ಟ್ ಎಂಬ ಹೆಗ್ಗಳಿಕೆಗೆ ಕರ್ನಾಟಕ ಹೈಕೋರ್ಟ್ ಪಾತ್ರವಾಗಿದೆ ಎಂದರು.

ಇದನ್ನೂ ಓದಿ: ದಿವ್ಯಾಂಗರು ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಸಾರಾ ಸಾಕ್ಷಿ, ಇಲ್ಲಿದೆ ಕೇರಳದ ದಿವ್ಯಾಂಗ ವಕೀಲೆಯ ಯಶೋಗಾಥೆ

ಮಹಿಳೆಯೊಬ್ಬರು ಪತಿಯ ವಿರುದ್ಧ ಐಪಿಸಿ ಸೆಕ್ಷನ್ 498 (ಎ), 504, 506 ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯ ಸೆಕ್ಷನ್ 3, 4 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಆ ಮಹಿಳೆಯ ಪರ ವಕೀಲೆ ಸಾರಾ ವಾದ ಮಂಡಿಸಿದ್ದರು. ಪ್ರಕರಣವನ್ನು ರದ್ದುಗೊಳಿಸುವಂತೆ ಮತ್ತು ಲುಕ್‌ಔಟ್ ನೋಟಿಸ್​ಗೆ ತಡೆ ನೀಡುವಂತೆ ಕೋರಿ ಸಾರಾ ಕಕ್ಷಿಗಾರರ ಪತಿ ನ್ಯಾಯಾಲಯದ ಮೊರೆ ಹೋಗಿದ್ದರು.

ಯಾರು ಈ ಸಾರಾ ಸನ್ನಿ?

ಸಾರಾ ಸನ್ನಿ ಮೂಲತಃ ಕೇರಳದ ಕೊಟ್ಟಾಯಂನವರು. ಸಾರಾ ಬೆಂಗಳೂರಿನ ಸೇಂಟ್ ಜೋಸೆಫ್ ಕಾನೂನು ವಿದ್ಯಾಲಯದಲ್ಲಿ ಎಲ್​ಎಲ್​ಬಿ ಪದವಿ ಪಡೆದಿದ್ದಾರೆ. ಸಾರಾಗೆ ಬಾಲ್ಯದಿಂದಲೂ ಕಿವಿ ಕೇಳಿಸುತ್ತಿರಲಿಲ್ಲ, ಮಾತು ಸಹ ಬರುತ್ತಿರಲಿಲ್ಲ. ಆದರೆ ತಂದೆ ತಾಯಿ ಬೆಂಬಲದೊಂದಿಗೆ ಎಲ್​ಎಲ್​ಬಿ ಕಲಿತು ವಕೀಲಿ ವೃತ್ತಿ ಆರಿಸಿಕೊಂಡಿದ್ದಾರೆ. ಬೆಂಗಳೂರಿನ ಸೇಂಟ್ ಜೋಸೆಫ್ ಕಾನೂನು ವಿದ್ಯಾಲಯದಲ್ಲಿ ಎಲ್​ಎಲ್​ಬಿ ಪದವಿ ಪಡೆದಿದ್ದಾರೆ. ಹಿರಿಯ ವಕೀಲರಾದ ಸಂಚಿತಾ ಬಳಿ ಸಾರಾ ಸುಪ್ರೀಂಕೋರ್ಟ್​ನಲ್ಲಿ ಅಭ್ಯಾಸ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್