ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಅಪಘಾತಗಳನ್ನು ತಡೆಗಟ್ಟಲು ವಾಹನಗಳಿಗೆ ವೇಗ ಮಿತಿ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಅಪಘಾತಗಳನ್ನು ತಡೆಗಟ್ಟಲು ಪೊಲಿಸ್ ಇಲಾಖೆ, ವಾಹನಗಳ ವೇಗ ಮಿತಿ ಜಾರಿಗೊಳಿಸಲು ಮುಂದಾಗಿದೆ.

ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಅಪಘಾತಗಳನ್ನು ತಡೆಗಟ್ಟಲು ವಾಹನಗಳಿಗೆ ವೇಗ ಮಿತಿ
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ
Follow us
ರಮೇಶ್ ಬಿ. ಜವಳಗೇರಾ
|

Updated on: Jun 30, 2023 | 10:08 AM

ಬೆಂಗಳೂರು: ಕರ್ನಾಟಕದ ಮೊದಲ ಎಕ್ಸಪ್ರೆಸ್​​​ವೇ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru-Mysore Expressway) ಅಪಘಾತ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಪಘಾತಗಳನ್ನು ತಡೆಗಟ್ಟಲು ವಾಹನಗಳ ವೇಗಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಹೌದು…ಅತೀ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿರುವುದರಿಂದ ವಾಹನಗಳ ವೇಗ ಮಿತಿ(speed limit) 100 ಜಾರಿಗೊಳಿಸಲು ಪೊಲೀಸ್​ ಇಲಾಖೆ ಪ್ಲ್ಯಾನ್ ಮಾಡಿಕೊಂಡಿದೆ. ಈ ಬಗ್ಗೆ ಎಡಿಜಿಪಿ ಅಲೋಕ್​ ಮೋಹನ್ ಹಾಗೂ ಮೈಸೂರು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.​

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಮತ್ತೊಂದು ಟೋಲ್ ಪ್ಲಾಜಾ ಜು.1ರಿಂದ​ ಆರಂಭ, ಇಲ್ಲಿದೆ ಟೋಲ್ ದರ ವಿವರ

ಮೊನ್ನೇ ಅಷ್ಟೇ ಅಲೋಕ್ ಮೋಹನ್ ಅವರು ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ವೇನಲ್ಲಿ ಸಂಚರಿಸಿ ಅತಿ ಹೆಚ್ಚು ಅಪಘಾತವಾಗುವ ಸ್ಪಾಟ್​ಗಳನ್ನು ಪರಿಶೀಲನೆ ಮಾಡಿದ್ದರು. ಬಳಿಕ ರಾಮನಗರದಲ್ಲಿ ಮಾತನಾಡಿದ್ದ ಅಲೋಕ್ ಮೋಹನ್, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯಾದಾಗಿನಿಂದಲೂ ಹೆಚ್ಚಿನ ಸಂಖ್ಯೆಯ ಅಪಘಾತಗಳು ಸಂಭವಿಸುತ್ತಿವೆ. ಇದನ್ನು ತಡೆಗಟ್ಟಲು 119 ಕಿಲೋಮೀಟರ್ ವರೆಗಿನ ಹೆದ್ದಾರಿಯಲ್ಲಿ ಸ್ಪೀಡ್ ರಾಡಾರ್ ಗನ್ ಮತ್ತು  ವಾಹನ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್‌ಪಿಆರ್) ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಒಂದು ವೇಳೆ ವಾಹನ ಮಿತಿಗಿಂತ ವೇಗವಾಗಿ ಚಲಿಸುತ್ತಿದ್ದರೆ ಸ್ಪೀಡ್ ರಾಡಾರ್ ಗನ್​ನಲ್ಲಿ ಸೆರೆಯಾಗಲಿದ್ದು, ವಾಹನ ಸಂಖ್ಯೆಗೆ ಮೇಲೆ ದಂಡ ವಿಧಿಸಲಾಗುತ್ತದೆ  ಎಂದು ಮಾಹಿತಿ ನೀಡಿದ್ದಾರೆ.

ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ಮಧ್ಯಮ ಗಾತ್ರದ ವಾಹನಗಳನ್ನು ಚಾಲನೆ ಮಾಡುವವರು ಅತಿವೇದ ಅಥವಾ ಅಜಾಗರೂಕತೆಯ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡುವುದರಿಂದ ಮಾತ್ರ ಅಪಘಾತಗಳು ಸಂಭವಿಸುತ್ತವೆ. ಇದು ಅವೈಜ್ಞಾನಿಕ ರಸ್ತೆಯಿಂದಲ್ಲ. ಈ ಎಕ್ಸ್‌ಪ್ರೆಸ್‌ ವೇ ರೇಸಿಂಗ್ ಟ್ರ್ಯಾಕ್ ಅಲ್ಲ ಎಂಬುದನ್ನು ಜನರು ಅರ್ಥಮಾಡಿಕೊಳ್ಳಬೇಕು. ಆದರೆ ತಡೆರಹಿತ ಪ್ರಯಾಣಕ್ಕಾಗಿ ನಿರ್ಮಾಣ ಮಾಡಲಿದೆ ಎಂಬ ಅರಿವು ಇರಬೇಕು ಎಂದಿದ್ದಾರೆ.

ಎಕ್ಸ್‌ಪ್ರೆಸ್‌ ವೇಯನ್ನು ವಾಹನಗಳು ಗಂಟೆಗೆ 120 ಕಿಮೀ ಗರಿಷ್ಠ ವೇಗದ ಮಿತಿಯೊಂದಿಗೆ ಚಲಿಸಲು ವಿನ್ಯಾಸಗೊಳಿಸಲಾಗಿದೆ. 80 ಕಿಮೀ ನಿಂದ 100 ಕಿಮೀ ವೇಗದಲ್ಲಿ ಪ್ರಯಾಣಿಸುವಾಗ ಅಪಘಾತಗಳು ಸಂಭವಿಸುವುದಿಲ್ಲ. ಇಷ್ಟು ವೇಗದಲ್ಲಿ ಪ್ರಯಾಣಿಸಿದರೂ ಒಂದೂವರೆ ಗಂಟೆಯಲ್ಲಿ ಬೆಂಗಳೂರು ತಲುಪಬಹುದು. ಜನರು 10-15 ನಿಮಿಷಗಳನ್ನು ಉಳಿಸುವುದಕ್ಕಾಗಿ ವೇಗದ ಮಿತಿಯನ್ನು ದಾಟಬಾರದು. ಐಷಾರಾಮಿ ಕಾರಿನಲ್ಲಿ, ಕೆಲವರು 140-150 ಕಿಮೀ ವೇಗದಲ್ಲಿ ಚಾಲನೆ ಮಾಡುತ್ತಿದ್ದರೆ ಅದನ್ನು ಹೇಗೆ ನಿಯಂತ್ರಿಸಬಹುದು? ಇದು ಅಪಘಾತಕ್ಕೆ ಕಾರಣವಾಗುತ್ತದೆ ಎಂದು ಪ್ರತಾಪ್ ಸಿಂಹ ಅಭಿಪ್ರಾಯಪಟ್ಟಿದ್ದಾರೆ.

ವರದಿಗಳ ಪ್ರಕಾರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಈ ಆರು ಪಥಗಳ ಮುಖ್ಯ ಹೆದ್ದಾರಿಯಲ್ಲಿ ದ್ವಿಚಕ್ರ, ಮತ್ತು ತ್ರಿಚಕ್ರ ವಾಹನಗಳನ್ನು ನಿಷೇಧಿಸಲು ತೀರ್ಮಾನಿಸಿದ್ದು, ಸರ್ವೀಸ್ ರಸ್ತೆಯಲ್ಲಿ ಮಾತ್ರ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸುಲು ನಿರ್ಧರಿಸಿದೆ.

ಈ ವರ್ಷದ ಅಂದರೆ ಮಾರ್ಚ್‌ನಲ್ಲಿ ಉದ್ಘಾಟನೆಗೊಂಡ ನಂತರ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 100ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಗಳ ಮೂಲಕ ತಿಳಿದುಬಂದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ