Sputnik V: ಕೋವಿಶೀಲ್ಡ್​, ಕೋವಾಕ್ಸಿನ್​ ನಂತರ ಮತ್ತೊಂದು ಕೊರೊನಾ ಲಸಿಕೆ, ಸ್ಪುಟ್ನಿಕ್​ ವಿ ಬೆಂಗಳೂರಿ​ನಲ್ಲಿ ಲಭ್ಯ

ಕೊವಿಡ್ ವಿರುದ್ಧದ ಹೋರಾಟದಲ್ಲಿ ಕಂಡುಹಿಡಿದ ಮೊದಲ ಲಸಿಕೆ ಎಂಬ ಅಭಿದಾನಕ್ಕೆ ಪಾತ್ರವಾಗಿರುವ ಸ್ಪುಟ್ನಿಕ್ ಲಸಿಕೆಯು ಇನ್ನು ಮುಂದೆ ರಾಜ್ಯ ರಾಜಧಾನಿ ಬೆಂಗಳೂರಿನ ಯುನೈಟೆಡ್ ಹಾಸ್ಪಿಟಲ್​ನಲ್ಲಿ ಲಭ್ಯವಿರಲಿದೆ. ಜನರಿಗೆ ಅನುಕೂಲವಾಗಲೆಂದು ವಾಟ್ಸಾಪ್‌ನಲ್ಲಿ (ನಂ: 99169 77777) ಅತ್ಯಂತ ಸುಲಭವಾಗಿ ಲಸಿಕೆ ಪಡೆದುಕೊಳ್ಳುವ ಸ್ಲಾಟ್‌ ಬುಕ್‌ ಮಾಡಬಹುದಾದ ವ್ಯವಸ್ಥೆಯನ್ನೂ ಆಸ್ಪತ್ರೆಯು ಒದಗಿಸಿದೆ.

Sputnik V: ಕೋವಿಶೀಲ್ಡ್​, ಕೋವಾಕ್ಸಿನ್​ ನಂತರ ಮತ್ತೊಂದು ಕೊರೊನಾ ಲಸಿಕೆ, ಸ್ಪುಟ್ನಿಕ್​ ವಿ ಬೆಂಗಳೂರಿ​ನಲ್ಲಿ ಲಭ್ಯ
ಸ್ಪುಟ್ನಿಕ್​ ವಿ ಲಸಿಕೆ
Follow us
shivaprasad.hs
| Updated By: Digi Tech Desk

Updated on:Jul 03, 2021 | 5:58 PM

ಬೆಂಗಳೂರು ಜುಲೈ 03: ಕರ್ನಾಟಕಕ್ಕೆ ಸ್ಪುಟ್ನಿಕ್​-ವಿ ಕೊರೊನಾ ಲಸಿಕೆ ಬಂದಿದೆ. ಈಗ ಜಯನಗರದ ಯುನೈಟೆಡ್‌ ಆಸ್ಪತ್ರೆ ಮತ್ತು ಮಣಿಪಾಲ್ ಆಸ್ಪತ್ರೆಯಲ್ಲಿ​ ಸ್ಪುಟ್ನಿಕ್​-ವಿ ನೀಡುತ್ತಿದ್ದಾರೆ. ಜಯನಗರದ ಯುನೈಟೆಡ್‌ ಆಸ್ಪತ್ರೆಗೆ ಸ್ಪುಟ್ನಿಕ್‌-ವಿ ಲಸಿಕೆ ಸರಬರಾಜಾಗಿದ್ದು ಇಂದಿನಿಂದಲೇ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ.ವಿಕ್ರಮ್‌ ಸಿದ್ದಾರೆಡ್ಡಿ ತಿಳಿಸಿದ್ದಾರೆ.

ಯುನೈಟೆಡ್ ಆಸ್ಪತ್ರೆಯಲ್ಲಿ ಎರಡು ಡೋಸ್​​ ಲಸಿಕೆಗೆ 2,970ರೂ ದರ ನಿಗದಿಪಡಿಸಲಾಗಿದೆ. ಮೊದಲ ಡೋಸ್​ ಪಡೆದ 30 ದಿನದ ನಂತರ ಎರಡನೇ ಡೋಸ್​ ಲಸಿಕೆ ಪಡೆಯಬೇಕಾಗುತ್ತದೆ. ರಾಜ್ಯದಲ್ಲಿ ಕರೋನಾ ಸಾಂಕ್ರಾಮಿಕದ ವಿರುದ್ದ ವಿಶ್ವದ ಮೊದಲ ಲಸಿಕೆಯಾಗಿರುವ ಸ್ಪುಟ್ನಿಕ್‌-ವಿಯ ಮೊದಲ ಲಸಿಕಾ ಅಭಿಯಾನ ಇದಾಗಿದೆ. ಯುನೈಟೆಡ್‌ ಆಸ್ಪತ್ರೆಗೆ ಈಗಾಗಲೇ ಸಾಕಷ್ಟು ಡೋಸ್‌ ಗಳಷ್ಟು ಲಸಿಕೆ ಸರಬರಾಜಾಗಿದ್ದು, ಪ್ರತಿವಾರ ಅಗತ್ಯತೆಗೆ ತಕ್ಕಂತೆ ಲಸಿಕೆ ಸರಬರಾಜು ಮಾಡುವ ಭರವಸೆಯನ್ನು ರೆಡ್ಡಿ ಲ್ಯಾಬೋರೇಟರಿ ನೀಡಿದೆ.

ಈ ಲಸಿಕೆಯ ಸ್ಟೋರೇಜ್‌ ಗೆ ಅಗತ್ಯವಿರುವ ಅತ್ಯಾಧುನಿಕ ಫ್ರೀಜರ್‌ಗಳನ್ನು ಆಸ್ಪತ್ರೆಯಲ್ಲಿ ಅಳವಡಿಸಿಲಾಗಿದ್ದು, ಮೈನಸ್‌ – 30 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಾಂಶದಲ್ಲಿ ಲಸಿಕೆಗಳನ್ನು ಸಂಗ್ರಹಿಸಲಾಗಿದೆ. ಯುನೈಟೆಡ್‌ ಬ್ರದರ್ಸ್‌ ಹೆಲ್ತ್ಕೇರ್‌ ಸರ್ವೀಸಸ್‌ ಪ್ರೈವೇಟ್ ಲಿಮಿಟೆಡ್‌ನ ನೂತನ ಆಸ್ಪತ್ರೆಯಾಗಿರುವ ‘ಜಯನಗರ ಯುನೈಟೆಡ್‌ ಆಸ್ಪತ್ರೆ’ ಉದ್ಘಾಟನೆಗೆ ಸಿದ್ದವಾಗಿದ್ದು, ಎಲ್ಲಾ ರೀತಿಯ ಸೌಲಭ್ಯಗಳು ಹಾಗೂ ಮಾನವ ಸಂಪನ್ಮೂಲ ಹೊಂದಿದೆ. ಕರೋನಾ ಸಾಂಕ್ರಾಮಿಕದ ವಿರುದ್ದ ಹೋರಾಡಲು ಲಸಿಕಾ ಅಭಿಯಾನವೇ ಪ್ರಮುಖ ಅಸ್ತ್ರವಾಗಿದೆ. ಆದ್ದರಿಂದ ಉದ್ಘಾಟನೆಗೂ ಮುನ್ನವೇ ನಾಲ್ಕು ಅಂತಸ್ತಿನ ಕಟ್ಟಡವನ್ನು ಹಾಗೂ ನಮ್ಮ ಎಲ್ಲಾ ಅತ್ಯಾಧುನಿಕ ಗುಣಮಟ್ಟದ ಸೇವೆಗಳನ್ನು ಕೇವಲ ಲಸಿಕೆ ನೀಡುವ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದ್ದೇವೆ (ಎರಡು ವಾರಗಳ ಕಾಲ) ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ.ವಿಕ್ರಮ್‌ ಸಿದ್ದಾರೆಡ್ಡಿ ತಿಳಿಸಿದ್ದಾರೆ.

ಈ ಲಸಿಕೆಯನ್ನು ಅತ್ಯಂತ ಜತನದಿಂದ ಕಾಪಾಡಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ನಾವುಗಳು ದಿನದ ಎಲ್ಲಾ ಸಮಯದಲ್ಲೂ ಅತ್ಯಂತ ನಿಗಾ ಇಡುವ ನಿಟ್ಟಿನಲ್ಲಿ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದ್ದೇವೆ. ದೇಶದ ಯಾವುದೇ ಮೂಲೆಯಿಂದ ತಾಪಾಂಶದಲ್ಲಿ ಆಗುವ ಬದಲಾವಣೆಗಳನ್ನು ಮಾನಿಟರ್‌ ಮಾಡಬಹುದಾಗಿದೆ. ಹಾಗೂ ತುರ್ತು ಸಂದರ್ಭದಲ್ಲಿ ಅಟೋಮ್ಯಾಟಿಕ್‌ ಆಗಿ ಎಸ್‌ಎಂಎಸ್‌ ಅಲರ್ಟ್‌ ಕಳುಹಿಸುವ ತಂತ್ರಜ್ಞಾನ ಇದಾಗಿದ್ದು, ತಕ್ಷಣ ನಮ್ಮ ತಂಡ ಸ್ಥಳಕ್ಕೆ ಆಗಮಿಸಿ ತುರ್ತು ಕಾರ್ಯಗಳಲ್ಲಿ ತೊಡಗಿಕೊಳ್ಳಬಹುದಾಗಿದೆ ಎಂದು ಯುನೈಟೆಡ್‌ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಶಾಂತಕುಮಾರ್‌ ಮುರುಡಾ ಹೇಳಿದ್ದಾರೆ.

ಲಸಿಕೆಯನ್ನು ಪಡೆದುಕೊಳ್ಳಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು. ಅಲ್ಲದೆ, ವಾಟ್ಸಾಪ್‌ ನಲ್ಲಿ ಅತ್ಯಂತ ಸುಲಭವಾಗಿ ಲಸಿಕೆ ಪಡೆದುಕೊಳ್ಳುವ ಸ್ಲಾಟ್‌ ಬುಕ್‌ ಮಾಡಬಹುದಾಗಿದೆ.

ವಾಟ್ಸಾಪ್‌ ನಂ: 99169 77777

ಹೆಚ್ಚಿನ ಮಾಹಿತಿಗೆ ಯುನೈಟೆಡ್ ಆಸ್ಪತ್ರೆಯ ದೂರವಾಣಿಯನ್ನು ಸಂಪರ್ಕಿಸಬಹುದು. ದೂ.ಸಂ.: 080 4566 6666 / 080 6933 3333/ Toll No: 1860 419 4444 ಇ-ಮೈಲ್ ವಿಳಾಸ್- info@unitedhospital.in

ಇದನ್ನೂ ಓದಿ: ಗರ್ಭಿಣಿಯರು ಕೊರೊನಾ ಲಸಿಕೆ ಪಡೆಯಬಹುದು: ಕೇಂದ್ರ ಆರೋಗ್ಯ ಇಲಾಖೆ ನಿರ್ಧಾರ

(Fom now on Sputnik Vaccine is available in Bengaluru)

Published On - 5:52 pm, Sat, 3 July 21

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು