ಚಿಕ್ಕಬಳ್ಳಾಪುರ: ಇಂದು ನಾಡಿನಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮ ಚಂದ್ರನ ಜನ್ಮ ದಿನ. ಎಲ್ಲೆಡೆ ಸರಳವಾಗಿ ರಾಮನವಮಿ ಆಚರಿಸಲಾಗುತ್ತಿದೆ. ಕೊರೊನಾ ಹರಡುವ ಭೀತಿ ಹಿನ್ನೆಲೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. ಶ್ರೀರಾಮನವಮಿ ಪ್ರಯುಕ್ತ ಚಿಕ್ಕಬಳ್ಳಾಪುರದ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ವಿಶೇಷ ಪೂಜೆಯಲ್ಲಿ ತೊಡಗಿದ್ದಾರೆ.
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ದೇವಸ್ಥಾನದಲ್ಲಿ ಹೋಮ ಅಭಿಷೇಕ ಸೇರಿದಂತೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ
ನಗರದಲ್ಲಿರುವ ಈ ವೀರಾಂಜನೇಯಸ್ವಾಮಿ ದೇವಸ್ಥಾನವು ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಸೇರಿದ ದೇವಸ್ಥಾನವಾಗಿದೆ. ಪೂಜೆಯಲ್ಲಿ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀಮಂಗಳಾನಾಥ ಸ್ವಾಮೀಜಿ ಉಪಸ್ಥಿತರಿದ್ದರು.
ವೀರಾಂಜನೇಯಸ್ವಾಮಿ ದೇವಸ್ಥಾನವು ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಸೇರಿದ ದೇವಸ್ಥಾನವಾಗಿದೆ. ಪೂಜೆಯಲ್ಲಿ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀಮಂಗಳಾನಾಥ ಸ್ವಾಮೀಜಿ ಉಪಸ್ಥಿತರಿದ್ದರು.
(Sri Rama Navami 2021 Adichunchanagiri mahasamsthana seer dr nirmalananda swamiji perform special puja at chikkaballapur)