AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಎಂ ಗೋವಿಂದ ಕಾರಜೋಳ ಹೇಳಿಕೆಗೆ ವ್ಯಂಗ್ಯವಾಡಿದ ಮಾಜಿ ಸಚಿವ ಮಲ್ಲಿಕಾರ್ಜುನ್

ಸಿಎಂ ಆಗುವುದಕ್ಕೆ ಎಲ್ಲರಿಗೂ ಆಸೆ ಇರುತ್ತೆ. ಆದರೆ ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಒಂದು ಸಂಸ್ಕೃತಿ ಇದೆ. ಹಿರಿಯರು ಹಾಗೂ ಶಾಸಕರು ಆರಿಸಿದ ವ್ಯಕ್ತಿ ಮುಖ್ಯಮಂತ್ರಿ ಆಗುತ್ತಾರೆ. ಶಾಸಕರು ಕೆಲವರ ಹೆಸರನ್ನು ಸಿಎಂ ಅಭ್ಯರ್ಥಿ ಎಂದು ಸೂಚಿಸುವುದು ಅವರವರ ವೈಯಕ್ತಿಕ.

ಡಿಸಿಎಂ ಗೋವಿಂದ ಕಾರಜೋಳ ಹೇಳಿಕೆಗೆ ವ್ಯಂಗ್ಯವಾಡಿದ ಮಾಜಿ ಸಚಿವ ಮಲ್ಲಿಕಾರ್ಜುನ್
ಮಾಜಿ ಸಚಿವ ಮಲ್ಲಿಕಾರ್ಜುನ್
TV9 Web
| Edited By: |

Updated on: Jun 27, 2021 | 1:10 PM

Share

ದಾವಣಗೆರೆ: ಕಾಂಗ್ರೆಸ್​ನಲ್ಲಿ ಶಾಮನೂರು ಶಿವಶಂಕರಪ್ಪ ಕೂಡಾ ಮುಖ್ಯಮಂತ್ರಿಯಾಗಲು ಇಣುಕಿ ನೋಡುತ್ತಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿಕೆಗೆ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವ್ಯಂಗ್ಯವಾಡಿದ್ದಾರೆ. ಬಿಜೆಪಿಯವರು ಕಾಂಗ್ರೆಸ್​ಗೆ ಸಪೋರ್ಟ್ ಮಾಡುತ್ತೀವಿ ಸಿಎಂ ಆಗಿ ಎಂದಿದ್ದಾರಾ? ಎಂದು ವ್ಯಂಗ್ಯವಾಡಿದ ಮಲ್ಲಿಕಾರ್ಜುನ್, ಮಲ್ಲಿಕಾರ್ಜುನ್ ನಮ್ಮ ಅಪ್ಪಾಜ್ಜಿ ಮುಖ್ಯಮಂತ್ರಿ ಆಗುವುದಕ್ಕೆ ಬಿಜೆಪಿಯವರು ಕಾಂಗ್ರೆಸ್​ಗೆ ಸಪೋರ್ಟ್ ಮಾಡ್ತಾರಂತಾ? ಎಂದು ನಗೆ ಚಟಾಕಿ ಹಾರಿಸಿದ್ದಾರೆ.

ಸಿಎಂ ಆಗುವುದಕ್ಕೆ ಎಲ್ಲರಿಗೂ ಆಸೆ ಇರುತ್ತೆ. ಆದರೆ ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಒಂದು ಸಂಸ್ಕೃತಿ ಇದೆ. ಹಿರಿಯರು ಹಾಗೂ ಶಾಸಕರು ಆರಿಸಿದ ವ್ಯಕ್ತಿ ಮುಖ್ಯಮಂತ್ರಿ ಆಗುತ್ತಾರೆ. ಶಾಸಕರು ಕೆಲವರ ಹೆಸರನ್ನು ಸಿಎಂ ಅಭ್ಯರ್ಥಿ ಎಂದು ಸೂಚಿಸುವುದು ಅವರವರ ವೈಯಕ್ತಿಕ. ಡಿ.ಕೆ.ಶಿವಕುಮಾರ್ ಎಲ್ಲಾ ಕಾಂಗ್ರೆಸ್ ಶಾಸಕ ಮುಖಂಡರ ಜೊತೆ ಮೀಟಿಂಗ್ ಮಾಡಿದ್ದಾರೆ. ಪಕ್ಷ ಅಧಿಕಾರಕ್ಕೆ ಬರಲು ನಾವೇಲ್ಲ ಒಗ್ಗಟ್ಟಿನಿಂದ ಅಧಿಕಾರಕ್ಕೆ ತರಬೇಕು. ಹೈಕಮಾಂಡ್ ಇದೆ. ಹಿರಿಯರು, ಎಲ್ಲಾ ಎಂಎಲ್ಎಗಳು ಸಿಎಂರನ್ನು ಆರಿಸುತ್ತಾರೆ. ಈಗಲೇ ಸಿಎಂ ಅಭ್ಯರ್ಥಿ ಎಂದು ನಮ್ಮ ಕಾಂಗ್ರೆಸ್​ನಲ್ಲಿ ಘೋಷಣೆ ಮಾಡಲ್ಲ ಎಂದು ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.

ಗೋವಿಂದ ಕಾರಜೋಳ ವ್ಯಂಗ್ಯ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಕೇವಲ 2 ಗುಂಪುಗಳಿಲ್ಲ, 3 ಗುಂಪುಗಳಿವೆ. (ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಡಿಸಿಎಂ ಡಾ.ಪರಮೇಶ್ವರ್) ಜತೆಗೆ ನಾಲ್ಕನೆಯ ಗುಂಪಿನ ಶ್ಯಾಮನೂರು ಶಿವಶಂಕರಪ್ಪ ಸಹ ಇಣುಕಿ ನೋಡುತ್ತಿದ್ದಾರೆ ಎಂದು ಬಾಗಲಕೋಟೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ ವ್ಯಂಗ್ಯವಾಡಿದ್ದರು.

ಹಿರಿಯ ರಾಜಕಾರಣಿ, ಕಾಂಗ್ರೆಸ್ ಶಾಸಕ ಶ್ಯಾಮನೂರು ಶಿವಶಂಕರಪ್ಪ ತಮಗೂ 5 ವರ್ಷ ಆಡಳಿತ ನಡೆಸುವ ಅವಕಾಶ ಸಿಗುವ ಬಗ್ಗೆ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಕಾಂಗ್ರೆಸ್​ನಲ್ಲಿನ ಕುಸ್ತಿ ಇಂದು ನಿನ್ನೆಯದಲ್ಲ. ಬಹಳ ಹಿಂದಿನಿಂದಲೇ ಈ ಹಗ್ಗ ಜಗ್ಗಾಟ ಕಾಂಗ್ರೆಸ್​ನಲ್ಲಿದೆ. ಈ ಹಿಂದೆ ಕಾಂಗ್ರೆಸ್​ನಲ್ಲಿ ಕುಸ್ತಿಯಾಗಿ ಪರಮೇಶ್ವರ್ ಮೂಲೆಗುಂಪು ಮಾಡಲಾಗಿತ್ತು. ಡಾ.ಜಿ.ಪರಮೇಶ್ವರ್​ರನ್ನು ಅವರ ಪಕ್ಷದವರೇ ಸೋಲಿಸಿದರು ಎಂದು ಡಿಸಿಎಂ ಗೋವಿಂದ ಕಾರಜೋಳ ವಿಶ್ಲೇಷಿಸಿದ್ದರು.

ಇದನ್ನೂ ಓದಿ

ಕಾಂಗ್ರೆಸ್​ನಲ್ಲಿ ಶಾಮನೂರು ಶಿವಶಂಕರಪ್ಪ ಅವರೂ ಮುಖ್ಯಮಂತ್ರಿಯಾಗಲು ಇಣುಕಿ ನೋಡುತ್ತಿದ್ದಾರೆ: ಡಿಸಿಎಂ ಗೋವಿಂದ ಕಾರಜೋಳ

Mann ki Baat: ಕೊವಿಡ್ ಲಸಿಕೆ ಪಡೆಯಲು ಹಿಂಜರಿಕೆ ಬೇಡ, ಲಸಿಕೆ ಪಡೆದುಕೊಳ್ಳಿ: ನರೇಂದ್ರ ಮೋದಿ

(SS Mallikarjun react to DCM Govind Karjol statement)

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ