ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಈಗಾಗಲೇ ತಿಳಿಸಿದಂತೆ ನಾಳೆಯಿಂದ ಶಾಲೆ, ಕಾಲೇಜುಗಳು ಆರಂಭವಾಗುತ್ತವೆ. ಆದರೆ ಮಾರ್ಚ್ ತಿಂಗಳಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆ ನಡೆಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಯ ಕೊಡುತ್ತೇವೆ. ವಿದ್ಯಾಗಮ ತರಗತಿಗಳ ಆಧಾರದ ಮೇಲೆ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಚಿಂತನೆ ನಡೆಸುತ್ತೇವೆ. ಪರೀಕ್ಷೆ ನಡೆಸದೇ ಪಾಸ್ ಮಾಡುವ ಉದ್ದೇಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
BMS ಕಾಲೇಜಿನಲ್ಲಿ ಕ್ಲಾಸ್ ರೂಮ್ ಡೆಸ್ಕ್ ಮೇಲಿದ್ದ ಬರಹ ಕಂಡು ನಸು ನಕ್ಕ ಶಿಕ್ಷಣ ಸಚಿವ!
Published On - 5:26 pm, Thu, 31 December 20