AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exam 2021: ಕೊವಿಡ್​ ಸೋಂಕಿತ 58 ವಿದ್ಯಾರ್ಥಿಗಳು ಇಂದು ಕೊವಿಡ್​ ಕೇರ್​ ಸೆಂಟರ್​ನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ: ಸಚಿವ ಸುರೇಶ್ ಕುಮಾರ್ ಮಾಹಿತಿ

ಸಮಾಜ ವಿಜ್ಞಾನ ಪರೀಕ್ಷೆಗೆ 8,24,689 ಮಕ್ಕಳ ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 2867 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಅವರು ಇದೇ ವೇಳೆ ತಿಳಿಸಿದರು.

SSLC Exam 2021: ಕೊವಿಡ್​ ಸೋಂಕಿತ 58 ವಿದ್ಯಾರ್ಥಿಗಳು ಇಂದು ಕೊವಿಡ್​ ಕೇರ್​ ಸೆಂಟರ್​ನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ: ಸಚಿವ ಸುರೇಶ್ ಕುಮಾರ್ ಮಾಹಿತಿ
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
TV9 Web
| Updated By: guruganesh bhat|

Updated on:Jul 19, 2021 | 5:46 PM

Share

ಬೆಂಗಳೂರು: ರಾಜ್ಯದಲ್ಲಿ ಇಂದು ಯಾವುದೇ ಗೊಂದಲಗಳು ಇಲ್ಲದೇ ಅತ್ಯಂತ ಸುಸೂತ್ರವಾಗಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿದೆ. ಇಂದು ಕೊರೊನಾ ಸೋಂಕಿತ 58 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅನಾರೋಗ್ಯದ ಕಾರಣ 111 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ.

ಇಂದು ಒಟ್ಟು 3 ವಿಷಯಗಳಿಗೆ ಪರೀಕ್ಷೆ ನಡೆಸಲಾಗಿದೆ. ಗಣಿತ ವಿಷಯದಲ್ಲಿ 7,83,882 ವಿದ್ಯಾರ್ಥಿಗಳ ನೋಂದಣಿ ಮಾಡಿದ್ದರು. 7,81,530 ವಿದ್ಯಾರ್ಥಿಗಳು ಹಾಜರಾಗಿದ್ದರು. ಗಣಿತ ವಿಷಯದ ಪರೀಕ್ಷೆಗೆ ಒಟ್ಟು 2,352 ವಿದ್ಯಾರ್ಥಿಗಳು ಗೈರಾಗಿದ್ದರು. ವಿಜ್ಞಾನ ವಿಷಯದಲ್ಲಿ 8,43,976 ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದು, 3127 ವಿದ್ಯಾರ್ಥಿಗಳು ಗೈರಾಗಿದ್ದರು. ಸಮಾಜ ವಿಜ್ಞಾನ ಪರೀಕ್ಷೆಗೆ 8,24,689 ಮಕ್ಕಳ ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 2867 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಅವರು ಇದೇ ವೇಳೆ ತಿಳಿಸಿದರು.

ಬೆಂಗಳೂರು ಉತ್ತರ 1, ಬೆಂಗಳೂರು ದಕ್ಷಿಣ 2, ಮೈಸೂರು 1, ಮಂಡ್ಯ 4, ಉಡುಪಿ 3, ಮಂಗಳೂರು 16, ಕೊಡಗು 5, ಚಿತ್ರದುರ್ಗ 7, ಚಿಕ್ಕಮಗಳೂರು 7, ಶಿವಮೊಗ್ಗ 1, ಹಾಸನ 1, ಗದಗ1, ಬೆಳಗಾವಿ 2, ಉತ್ತರ ಕನ್ನಡ1, ಕೊಪ್ಪಳದ 1 ವಿದ್ಯಾರ್ಥಿ ಕೊವಿಡ್​ ಇದ್ದರೂ 2870 ವಸತಿ ನಿಲಯದಿಂದ ಬಂದು ಎಕ್ಸಾಂ ಬರೆದ ಪರೀಕ್ಷೆ ಬರೆದಿದ್ದಾರೆ. 10,693 ವಲಸೆ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ನೆರೆ ರಾಜ್ಯದ 761 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 2870 ವಿದ್ಯಾರ್ಥಿಗಳು ಹಾಸ್ಟೆಲ್​ಗಳಲ್ಲಿದ್ದು ಪರೀಕ್ಷೆ ಬರೆದಿದ್ದಾರೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಇದನ್ನೂ ಓದಿ: 

ಸೆಮಿಸ್ಟರ್ ಪರೀಕ್ಷೆ ರದ್ದು ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ, ನಿಮ್ಮ ಮೇಲೆ ಕೇಸ್ ಹಾಕಿದ್ರೆ ಏನ್ ಮಾಡ್ತೀರಾ? ಗರಂ ಆದ ಇನ್ಸ್​​ಪೆಕ್ಟರ್

CET 2021: ಈ ಬಾರಿ ವಿದ್ಯಾರ್ಥಿಗಳಿಗೆ ಸಿಇಟಿ ಮೇಲೆ ಹೆಚ್ಚು ಒಲವು, ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚು ವಿದ್ಯಾರ್ಥಿಗಳಿಂದ ನೊಂದಣಿ

(SSLC Exam 2021 58 students who tested Covid Positive wrote SSLC exams today says Education Minister Suresh Kumar )

Published On - 5:35 pm, Mon, 19 July 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ