SSLC Exam 2021: ಎಸ್​ಎಸ್​ಎಲ್​ಸಿ ಪರೀಕ್ಷೆ: ಏನಿತ್ತು ವಿಶೇಷ? ದೋಣಿಯಲ್ಲೂ ಬಂದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು

ಕೋಲಾರದ ಕುರುಬರ ಪೇಟೆಯ ನಿವಾಸಿ ಅವರು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ 55 ವರ್ಷ ವಯಸ್ಸಿನ ಪರೀಕ್ಷೆಗೆ ಹಾಜರಾಗಿದ್ದುದು ವಿಶೇಷವಾಗಿತ್ತು. ಖಾಸಗಿ ಅಭ್ಯರ್ಥಿಯಾದ ಅವರು ಕಳೆದ ವರ್ಷ ಪರೀಕ್ಷೆಗೆ ಹಾಜರಾಗಿ ಅನುತ್ತೀರ್ಣರಾಗಿದ್ದರಿಂದ ಈ ಬಾರಿ ಪುನರಾವರ್ತಿತ ಅಭ್ಯರ್ಥಿಯಾಗಿ ಕೋಲಾರದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಿದ್ದರು.

SSLC Exam 2021: ಎಸ್​ಎಸ್​ಎಲ್​ಸಿ ಪರೀಕ್ಷೆ: ಏನಿತ್ತು ವಿಶೇಷ? ದೋಣಿಯಲ್ಲೂ ಬಂದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
ಸಾಂಕೇತಿಕ ಚಿತ್ರ
Follow us
Guruganesh Bhat
| Updated By: guruganesh bhat

Updated on:Jul 19, 2021 | 10:44 PM

ಬೆಂಗಳೂರು: ಇಂದು ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯ  (SSLC Exam 2021) ಕೋರ್ ವಿಷಯಗಳ ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು, ಪರೀಕ್ಷೆಗೆ ಸಂಬಂಧಿಸಿದ ಕೆಲವಿ ವಿಶೇಷತೆಗಳನ್ನು ವಿವರಿಸಿದ್ದಾರೆ. ಕಳೆದ ಬಾರಿಯ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದ ಮಕ್ಕಳಿಗಿಂತ ಹೆಚ್ಚಿನ ಸಂಖ್ಯೆಯ ಮಕ್ಕಳು ಹಾಜರಾಗಿದ್ದಾರೆ. ಮಕ್ಕಳ ಶೇಕಡಾ ಹಾಜರಾತಿಯೂ ಸಹ ಈ ಬಾರಿ ಹೆಚ್ಚಾಗಿದೆ ಎಂದು ಅವರು ಹೇಳಿದರು. ಮಾಸ್ಕ್ ಧರಿಸದೇ ಬಂದ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಮಾಸ್ಕ್ ನೀಡಲಾಯಿತು ಎಂದು ಅವರು ವಿವರಿಸಿದರು. ಒಟ್ಟಾರೆಯಾಗಿ ಪರೀಕ್ಷೆ ಯಾವುದೇ ವಿಘ್ನಗಳಿಲ್ಲದೇ ಯಶಸ್ವಿಯಾಗಿ ನಡೆದಿದ್ದು ಇದಕ್ಕೆ ಕಾರಣೀಭೂತರಾದ ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿ ವೃಂದಕ್ಕೆ ಸುರೇಶ್ ಕುಮಾರ್ (Education Minister S. Suresh Kumar) ಕೃತಜ್ಞತೆ ಸಲ್ಲಿಸಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರಾದ ಶಿಲ್ಪಾ ಮತ್ತು ಸಂಜನಾ ಅವರಿಗೆ ಪರೀಕ್ಷೆಗೆ ಬಂದು ಹೋಗಲು ದೋಣಿಯ ವ್ಯವಸ್ಥೆ ಮಾಡಲಾಗಿತ್ತು. ತಮ್ಮೂರು ಕುರು ದ್ವೀಪ ಪ್ರದೇಶದ ಮನೆಗಳಿಂದ ಈ ಮಕ್ಕಳು ಬೋಟ್ ಮೂಲಕ ಬಂದು ಪರೀಕ್ಷೆ ಬರೆದು ಬೋಟ್‍ನಲ್ಲಿಯೇ ಹಿಂದಿರುಗಿದರು.

ದಕ್ಷಿಣ ಕನ್ನಡದ ಮಂಗಳೂರು ತಾಲೂಕಿನ ತೊಕ್ಕಟ್ಟು ಗ್ರಾಮದ ಖಾಸಗಿ ಪ್ರೌಢಶಾಲಾ ಪರೀಕ್ಷಾ ಕೇಂದ್ರದ ಶಾಲೆಯ ವಿಜ್ಞಾನ ಪ್ರಯೋಗಾಲಯದಲ್ಲಿ ವಿದ್ಯುತ್ ಶಾರ್ಟ್ ಸ‌ರ್ಕ್ಯೂಟ್‍ನಿಂದ ಸ್ವಲ್ಪ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಆ ಪ್ರಯೋಗಾಲಯದ ಅಕ್ಕ ಪಕ್ಕದ ಮೂರು ಕೊಠಡಿಯ 36 ಅಭ್ಯರ್ಥಿಗಳನ್ನು ಅದೇ ಪರಿಸರದಲ್ಲಿರುವ ಅದೇ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ 3 ಕೊಠಡಿಗಳಿಗೆ ಸ್ಥಳಾಂತರಿಸಲಾಯಿತು. ಈ ಸ್ಥಳಾಂತರಕ್ಕೆ ತೆಗೆದುಕೊಂಡ ಸಮಯವನ್ನು ಹೆಚ್ಚುವರಿಯಾಗಿ ಈ 3 ಕೊಠಡಿಯ ಅಭ್ಯರ್ಥಿಗಳಿಗೆ ನೀಡಲಾಯಿತು. ಬೆಂಕಿ ಪ್ರಕರಣದಿಂದ ಯಾವುದೇ ತೊಂದರೆಯಾಗಲೀ ಹಾನಿಯಾಗಲಿ ಸಂಭವಿಸಿಲ್ಲ. ಸದರಿ ಪರೀಕ್ಷಾ ಕೇಂದ್ರಕ್ಕೆ ಜಿಪಂ ಸಿಇಒ ಅಗ್ನಿಶಾಮಕದಳದ ಅಧಿಕಾರಿಗಳು, ಪೊಲೀಸ್ ಆಯುಕ್ತರು, ಡಿಡಿಪಿಐ ಪರಿಶೀಲಿಸಿದರು.

ದಕ್ಷಿಣ ಕನ್ನಡ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಸೇರಿದಂತೆ ಹಲವಾರು ಗಡಿ ಭಾಗದ ಜಿಲ್ಲೆಗಳ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಕೇರಳ, ಮಹಾರಾಷ್ಟ್ರ, ಆಂಧ್ರ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಿಂದ ಒಟ್ಟು 770 ಮಕ್ಕಳು ಬಂದು ಪರೀಕ್ಷೆ ಬರೆದಿದ್ದಾರೆ. ಒಬ್ಬ ನೊಂದಾಯಿತ ಅಭ್ಯರ್ಥಿ ಗೈರು ಹಾಜರಾಗಿದ್ದಾನೆ. ಅವರಿಗೆ ಗಡಿ ಪ್ರದೇಶದಿಂದ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು.

ಕಲಬುರ್ಗಿ ಜಿಲ್ಲೆಯ ಚಿಮ್ಮನಚೋಡ ಗ್ರಾಮದಲ್ಲಿ ರಾತ್ರಿಯಿಡೀ ಸುರಿದ ತೀವ್ರ ಮಳೆಯಿಂದ ಶಾಲೆಗೆ ಹಾದು ಹೋಗುವ ರಸ್ತೆಯಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ತೊಂದರೆಯಾಗಿ ರಸ್ತೆ ಬಂದ್ ಅಗಿತ್ತು. ಅದನ್ನು ನಿಗದಿತ ಅವಧಿಯಲ್ಲಿ ಸರಿಪಡಿಸಲಾದ ಬಳಿಕ ಎಲ್ಲ ಮಕ್ಕಳು ರಸ್ತೆಯಲ್ಲಿ ಸಾಗಿ ಪರೀಕ್ಷೆ ಬರೆದರು.

ಕೋಲಾರದ ಕುರುಬರ ಪೇಟೆಯ ನಿವಾಸಿ ಅವರು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ 55 ವರ್ಷ ವಯಸ್ಸಿನ ಪರೀಕ್ಷೆಗೆ ಹಾಜರಾಗಿದ್ದುದು ವಿಶೇಷವಾಗಿತ್ತು. ಖಾಸಗಿ ಅಭ್ಯರ್ಥಿಯಾದ ಅವರು ಕಳೆದ ವರ್ಷ ಪರೀಕ್ಷೆಗೆ ಹಾಜರಾಗಿ ಅನುತ್ತೀರ್ಣರಾಗಿದ್ದರಿಂದ ಈ ಬಾರಿ ಪುನರಾವರ್ತಿತ ಅಭ್ಯರ್ಥಿಯಾಗಿ ಕೋಲಾರದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಿದ್ದರು.

ರಾಜ್ಯದ ಬಹುತೇಕ ಕಡೆಗಳಲ್ಲಿ ಸಂಘ ಸಂಸ್ಥೆಗಳು ಮತ್ತು ಜನಪ್ರತಿನಿಧಿಗಳು ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಉಪಹಾರ ವ್ಯವಸ್ಥೆ ಮಾಡಿದ್ದರು. ಕೊವಿಡ್ ಕೇರ್ ಸೆಂಟರ್ ಗಳಲ್ಲಿ ಪರೀಕ್ಷೆ ಬರೆದ ಮಕ್ಕಳ ಉತ್ತರ ಪತ್ರಿಕೆಗಳನ್ನು ಪೊಲೀಸ್ ಕಣ್ಗಾವಲಿನಲ್ಲಿ ನಿಗದಿತ ಪರೀಕ್ಷಾ ಕೇಂದ್ರಕ್ಕೆ ತಂದು ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡಲಾಗಿದೆ.

ಹಲವಾರು ಕಡೆಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಳಿರು ತೋರಣ ಕಟ್ಟಲಾಗಿತ್ತು. ನಂಜನಗೂಡು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಪರೀಕ್ಷಾ ಕೇಂದ್ರವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಹಲವಾರು ಕಡೆಗಳಲ್ಲಿ ರಂಗೋಲಿ ಹಾಕಲಾಗಿತ್ತು.

ಹಲವಾರು ಕಡೆಗಳಲ್ಲಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಕೆಲವೆಡೆ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ಸಾರಿಗೆ ಸೌಲಭ್ಯವಿಲ್ಲದೇ ಯಾವೊಬ್ಬ ಅಭ್ಯರ್ಥಿಯೂ ಪರೀಕ್ಷೆಗೆ ಗೈರು ಹಾಜರಾಗಿಲ್ಲ. ನಾಲ್ಕು ಪರೀಕ್ಷಾ ಕೇಂದ್ರಗಳಿಗೆ ಮಹಾರಾಷ್ಟ್ರ ಭಾಗದ 152 ವಿದ್ಯಾರ್ಥಿಗಳು ಬಂದು ಪರೀಕ್ಷೆ ಬರೆದರು. ಅವರೆಲ್ಲರಿಗೂ ಗಡಿ ಭಾಗದಿಂದ ವಾಹನ ವ್ಯವಸ್ಥೆ ಮಾಡಲಾಗಿತ್ತು.

ಹಾವೇರಿ ಜಿಲ್ಲೆಯ ಚಿಕ್ಕೇರೂರು ಶಾಲೆಯ 30 ವಿದ್ಯಾರ್ಥಿಗಳು ಪರೀಕ್ಷಾ ಅರ್ಜಿ ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಿದ್ದರೂ ಶಾಲೆಯ ಶಿಕ್ಷಕರೊಬ್ಬರು ಶುಲ್ಕವನ್ನು ಮಂಡಳಿಗೆ ಪಾವತಿಸದೇ ಇರುವುದರಿಂದ 30 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಾಗಿಲ್ಲ. ಆ 30 ವಿದ್ಯಾರ್ಥಿಗಳು, ಬಾಗಲಕೋಟೆ ಜಿಲ್ಲೆಯ 3 ಮತ್ತು ಕೊರಟಗೆರೆ ವಿದ್ಯಾರ್ಥಿನಿ ಗ್ರೀಷ್ಮಾ ಎನ್. ನಾಯಕ್ ಅವರಿಗೆ ಮುಂದೆ ಅಗಸ್ಟ್​ನಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು.

ಪರೀಕ್ಷಾ ಪ್ರಕ್ರಿಯೆಯಲ್ಲಿ ನಿಯೋಜಿತರಾಗುವ 1,19,469 ಮಂದಿ ಎಲ್ಲ ಸ್ತರದ ಸಿಬ್ಬಂದಿ ಲಸಿಕೆ ಪಡೆದಿದ್ದರು. ಹಲವಾರು ಕಡೆಗಳಲ್ಲಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಕೆಲವೆಡೆ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ಸಾರಿಗೆ ಸೌಲಭ್ಯವಿಲ್ಲದೇ ಯಾವೊಬ್ಬ ಅಭ್ಯರ್ಥಿಯೂ ಪರೀಕ್ಷೆಗೆ ಗೈರು ಹಾಜರಾಗಿಲ್ಲ. ಯಾವುದೇ ಅಭ್ಯರ್ಥಿ ಪರೀಕ್ಷಾ ಅವ್ಯವಹಾರದಲ್ಲಿ ತೊಡಗಿಲ್ಲ.

ಇದನ್ನೂ ಓದಿ: 

Explainer: ಏನಿದು ಪೆಗಾಸಸ್ ಗೂಢಚರ್ಯೆ ತಂತ್ರಾಂಶ? ಇದು ಹೇಗೆ ಕಾರ್ಯನಿರ್ವಹಿಸುತ್ತದೆ? 

Tv9 Digital Exclusive: ಕಾವೇರಿಯ ಮತ್ತಷ್ಟು ನೀರು ಬಳಕೆಗೆ ತಮಿಳುನಾಡು ಯೋಜನೆ: ಸುಪ್ರೀಂಕೋರ್ಟ್​ಗೆ ಕರ್ನಾಟಕ ತಕರಾರು ಅರ್ಜಿ

(SSLC Exam 2021 Special Heres the full details of the entire state informs Education Minister Suresh Kumar)

Published On - 10:29 pm, Mon, 19 July 21