ಕೊರೊನಾ ನಿಯಂತ್ರಣಕ್ಕೆ ಬಂದ್ರೆ ಮಾತ್ರ SSLC ಪರೀಕ್ಷೆ, ಬೆಳಗಾವಿ ಬಿಮ್ಸ್​ಗೆ ಶೀಘ್ರವೇ IAS ಆಡಳಿತಾಧಿಕಾರಿ: ಸಿಎಂ ಯಡಿಯೂರಪ್ಪ

BS Yediyurappa in Belagavi: ಬೆಳಗಾವಿ ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆಯ ಬಗ್ಗೆ ಗೊತ್ತಿದೆ. ಬಿಮ್ಸ್ ನಿರ್ದೇಶಕ ವಿನಯ್ ದಾಸ್ತಿಕೊಪ್ಪ ರಜೆಯಲ್ಲಿದ್ದಾರೆ. ಬೆಳಗಾವಿಯ ಬಿಮ್ಸ್​ಗೆ ಶೀಘ್ರವೇ ಆಡಳಿತಾಧಿಕಾರಿಯನ್ನಾಗಿ ಐಎಎಸ್ ಅಧಿಕಾರಿಯನ್ನ ನೇಮಕ ಮಾಡ್ತೇವಿ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಬಂದ್ರೆ ಮಾತ್ರ SSLC ಪರೀಕ್ಷೆ, ಬೆಳಗಾವಿ ಬಿಮ್ಸ್​ಗೆ ಶೀಘ್ರವೇ IAS ಆಡಳಿತಾಧಿಕಾರಿ: ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಯಡಿಯೂರಪ್ಪ

ಬೆಳಗಾವಿ: ಕೊರೊನಾ ನಿಯಂತ್ರಣಕ್ಕೆ ಬಂದ್ರೆ ಮಾತ್ರ SSLC ಪರೀಕ್ಷೆ ಇಲ್ಲವಾದರೆ SSLC ಪರೀಕ್ಷೆ ಮಾಡಲ್ಲ ಎಂದು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಬೆಳಗಾವಿಯಲ್ಲಿ ಹೇಳಿದ್ದಾರೆ. SSLC ವಿದ್ಯಾರ್ಥಿಗಳಿಗೆ ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಹೇಳಿದ ಬೆನ್ನಿಗೇ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಈ ಪ್ರತಿಕ್ರಿಯೆ ನೀಡಿದ್ದಾರೆ.

ಇದಕ್ಕೂ ಮುನ್ನ, SSLC ಪರೀಕ್ಷೆ ನಡೆಸುವುದೇ ಅಂತಿಮ ತೀರ್ಮಾನವಲ್ಲ. ಪರೀಕ್ಷೆ ನಡೆಸುವ ಸಮಯದಲ್ಲಿ ಕೊರೊನಾ 3ನೇ ಅಲೆ ಬಂದರೆ ಆಗಲೂ ಆ ತಕ್ಷಣಕ್ಕೆ ನಿರ್ಧಾರ ಮರುಪರಿಶೀಲಿಸುತ್ತೇವೆ. ಪರೀಕ್ಷೆ ನಡೆಸಬೇಕಾ, ಬೇಡವಾ ಎಂದು ನಿರ್ಧರಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿಯ ಬಿಮ್ಸ್​ಗೆ ಸಿಎಂ ಚುಚ್ಚುಮದ್ದು:

ಬೆಳಗಾವಿ ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆಯ ಬಗ್ಗೆ ಗೊತ್ತಿದೆ. ಬಿಮ್ಸ್ ನಿರ್ದೇಶಕ ವಿನಯ್ ದಾಸ್ತಿಕೊಪ್ಪ ರಜೆಯಲ್ಲಿದ್ದಾರೆ. ಬೆಳಗಾವಿಯ ಬಿಮ್ಸ್​ಗೆ ಶೀಘ್ರವೇ ಆಡಳಿತಾಧಿಕಾರಿಯನ್ನಾಗಿ ಐಎಎಸ್ ಅಧಿಕಾರಿಯನ್ನ ನೇಮಕ ಮಾಡ್ತೇವಿ ಎಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

( SSLC Exam 2021 to be conducted only of coronavirus reduces clarifies cm bs yediyurappa)