ಬೆಳಗಾವಿ: ಕೊರೊನಾ ನಿಯಂತ್ರಣಕ್ಕೆ ಬಂದ್ರೆ ಮಾತ್ರ SSLC ಪರೀಕ್ಷೆ ಇಲ್ಲವಾದರೆ SSLC ಪರೀಕ್ಷೆ ಮಾಡಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಳಗಾವಿಯಲ್ಲಿ ಹೇಳಿದ್ದಾರೆ. SSLC ವಿದ್ಯಾರ್ಥಿಗಳಿಗೆ ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಹೇಳಿದ ಬೆನ್ನಿಗೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಈ ಪ್ರತಿಕ್ರಿಯೆ ನೀಡಿದ್ದಾರೆ.
ಇದಕ್ಕೂ ಮುನ್ನ, SSLC ಪರೀಕ್ಷೆ ನಡೆಸುವುದೇ ಅಂತಿಮ ತೀರ್ಮಾನವಲ್ಲ. ಪರೀಕ್ಷೆ ನಡೆಸುವ ಸಮಯದಲ್ಲಿ ಕೊರೊನಾ 3ನೇ ಅಲೆ ಬಂದರೆ ಆಗಲೂ ಆ ತಕ್ಷಣಕ್ಕೆ ನಿರ್ಧಾರ ಮರುಪರಿಶೀಲಿಸುತ್ತೇವೆ. ಪರೀಕ್ಷೆ ನಡೆಸಬೇಕಾ, ಬೇಡವಾ ಎಂದು ನಿರ್ಧರಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯ ಬಿಮ್ಸ್ಗೆ ಸಿಎಂ ಚುಚ್ಚುಮದ್ದು:
ಬೆಳಗಾವಿ ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆಯ ಬಗ್ಗೆ ಗೊತ್ತಿದೆ. ಬಿಮ್ಸ್ ನಿರ್ದೇಶಕ ವಿನಯ್ ದಾಸ್ತಿಕೊಪ್ಪ ರಜೆಯಲ್ಲಿದ್ದಾರೆ. ಬೆಳಗಾವಿಯ ಬಿಮ್ಸ್ಗೆ ಶೀಘ್ರವೇ ಆಡಳಿತಾಧಿಕಾರಿಯನ್ನಾಗಿ ಐಎಎಸ್ ಅಧಿಕಾರಿಯನ್ನ ನೇಮಕ ಮಾಡ್ತೇವಿ ಎಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
( SSLC Exam 2021 to be conducted only of coronavirus reduces clarifies cm bs yediyurappa)
Published On - 11:26 am, Fri, 4 June 21