ನಾಳೆಯೇ ಎಸ್ಎಸ್ಎಲ್​ಸಿ ಪರೀಕ್ಷೆ ದಿನಾಂಕ ಪ್ರಕಟ ಸಾಧ್ಯತೆ; ಸುರೇಶ್ ಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ

ಕೊರೊನಾ ನಡುವೆಯೂ ಪರೀಕ್ಷೆ ನಡೆಸಲು ಮಹತ್ವದ ಚರ್ಚೆ ನಡೆಯಲಿದ್ದು, ಅಧಿಕಾರಿಗಳ ಸಲಹೆ, ಸೂಚನೆಯೊಂದಿಗೆ ನಾಳೆಯೇ ಎಸ್ಎಸ್ಎಲ್​ಸಿ ಪರೀಕ್ಷಾ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಜುಲೈ ಮೂರನೇ ವಾರದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ ನಡೆಯುವ ಹಿನ್ನೆಲೆ ಈಗಾಗಲೇ ಎಸ್ಎಸ್ಎಲ್​ಸಿ ಪರೀಕ್ಷೆಗೆ ಶಿಕ್ಷಣ ಇಲಾಖೆಯಿಂದ ಎಲ್ಲಾ ತಯಾರಿ ಆರಂಭವಾಗಿದೆ.

ನಾಳೆಯೇ ಎಸ್ಎಸ್ಎಲ್​ಸಿ ಪರೀಕ್ಷೆ ದಿನಾಂಕ ಪ್ರಕಟ ಸಾಧ್ಯತೆ; ಸುರೇಶ್ ಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ
ಸಾಂಕೇತಿಕ ಚಿತ್ರ
Follow us
TV9 Web
| Updated By: sandhya thejappa

Updated on: Jun 27, 2021 | 8:36 AM

ಬೆಂಗಳೂರು: ಮುಂದಿನ ತಿಂಗಳು ಅಂದರೆ ಜುಲೈನಲ್ಲಿ ನಡೆಯಲಿರುವ 2021ನೇ ಸಾಲಿನ ಎಸ್ಎಸ್ಎಲ್​ಸಿ ಪರೀಕ್ಷೆಗೆ ನಾಳೆಯೇ (ಜೂನ್ 28) ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಸುರಕ್ಷಿತ ವಾತಾವರಣದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿ ನಾಳೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಜಿಲ್ಲಾಧಿಕಾರಿಗಳು, ಸಿಇಒ, ಎಸ್​ಪಿ, ಡಿಎಚ್ಒಗಳು ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ರಾಜ್ಯದ ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯ ಜೊತೆ ಮಹತ್ವದ ಸಭೆ ನಡೆಯಲಿದೆ.

ಕೊರೊನಾ ನಡುವೆಯೂ ಪರೀಕ್ಷೆ ನಡೆಸಲು ಮಹತ್ವದ ಚರ್ಚೆ ನಡೆಯಲಿದ್ದು, ಅಧಿಕಾರಿಗಳ ಸಲಹೆ, ಸೂಚನೆಯೊಂದಿಗೆ ನಾಳೆಯೇ ಎಸ್ಎಸ್ಎಲ್​ಸಿ ಪರೀಕ್ಷಾ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಜುಲೈ ಮೂರನೇ ವಾರದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ ನಡೆಯುವ ಹಿನ್ನೆಲೆ ಈಗಾಗಲೇ ಎಸ್ಎಸ್ಎಲ್​ಸಿ ಪರೀಕ್ಷೆಗೆ ಶಿಕ್ಷಣ ಇಲಾಖೆಯಿಂದ ಎಲ್ಲಾ ತಯಾರಿ ಆರಂಭವಾಗಿದೆ.

ಶಿಕ್ಷಣ ಇಲಾಖೆಯ ತಯಾರಿಗಳು ಈಗಾಗಲೇ 6,000 ಪರೀಕ್ಷಾ ಕೇಂದ್ರಗಳು ನಿಗದಿಯಾಗಿದೆ. ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಪರೀಕ್ಷಾ ತುರ್ತು ಸಿದ್ಧತೆಯನ್ನು ಆರಂಭಿಸಿದೆ. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಕೊರೊನಾ ನಿಯಮಗಳನ್ನು ಪಾಲಿಸಲು ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಆರು ಆಡಿಗೆ ಒಂದರಂತೆ ಆಸನ ವ್ಯವಸ್ಥೆ ಮಾಡಲಾಗುವುದು. ಕೊಠಡಿಯಲ್ಲಿ ಗಾಳಿ, ಬೆಳಕಿನ ವ್ಯವಸ್ಥೆ ಮಾಡಲಾಗುತ್ತದೆ. ಸಿಸಿಟಿವಿ ಕ್ಯಾಮರಾ ಅಳವಡಿಕೆ ವ್ಯವಸ್ಥೆ ಮಾಡಿಕೊಳ್ಳಲಾಗುವುದು.

ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪರೀಕ್ಷಾ ಕೇಂದ್ರಗಳ ಸಿದ್ಧತೆ ನಡೆಯುತ್ತಿದೆ. ತುರ್ತಾಗಿ ಪರೀಕ್ಷಾ ಕೇಂದ್ರಗಳ ರಚನೆ ಮಾಡಿ ಮಾಹಿತಿ ನೀಡುವಂತೆ ರಾಜ್ಯದ ಎಲ್ಲ ನೋಡಲ್ ಅಧಿಕಾರಿಗಳು, ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ನಿರ್ದೇಶಕರು ಸೂಚನೆ ನೀಡಿದ್ದಾರೆ.

ಜುಲೈ ಮೂರನೇ ವಾರದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆಗೆ ಕಳೆದ ಭಾರಿಗಿಂತ ಹೆಚ್ಚಿನ ಶಿಕ್ಷಕರ ಅವಶ್ಯಕತೆ ಇದೆ. ಹೀಗಾಗಿ ಕೊವಿಡ್ ಕಾರ್ಯಕ್ಕೆ ನಿಯೋಜನೆಗೊಂಡಿರುವ ಶಿಕ್ಷಕ ಹಾಗು ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಪತ್ರ ಬರೆದಿದ್ದಾರೆ.

ಇದನ್ನೂ ಓದಿ

SSLC Exam 2021: ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಸಂಬಂಧಿಸಿದ ಮಹತ್ವದ ಮಾರ್ಗಸೂಚಿ ಬಿಡುಗಡೆ: ವಿವರ ಇಲ್ಲಿದೆ

ಎಸ್​ಎಸ್​ಎಲ್​ಸಿ ಪರೀಕ್ಷಾ ಕೇಂದ್ರ ಆಯ್ಕೆಗೆ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ ಮಂಡಳಿ

(SSLC exam date is likely to be announced monday)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ