AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆಗೆ ಹೆದರಿ ವಸತಿ ಶಾಲೆಯ ಕಾಂಪೌಂಡ್​​ ಹಾರಿ 5 ಮಂದಿ SSLC ವಿದ್ಯಾರ್ಥಿಗಳು ಪರಾರಿ!

ಹಾವೇರಿ ಜಿಲ್ಲೆಯ ಮೊರಾರ್ಜಿ ವಸತಿ ಶಾಲೆಯ ಐವರು ವಿದ್ಯಾರ್ಥಿಗಳು SSLC ಪರೀಕ್ಷೆಯ ಭಯಕ್ಕೆ ನಾಪತ್ತೆಯಾಗಿದ್ದಾರೆ. ಮಾರ್ಚ್ 18ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯುತ್ತಿರುವ ಹೊತ್ತಲ್ಲೇ ಹಾಸ್ಟೆಲ್‌ನಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿ ಮುಚ್ಚಿಟ್ಟಿರುವ ಆರೋಪವಿದ್ದು, ಮಕ್ಕಳಿಗಾಗಿ ಹುಡುಕಾಟ ನಡೆಯುತ್ತಿದೆ ಎನ್ನಲಾಗಿದೆ.

ಪರೀಕ್ಷೆಗೆ ಹೆದರಿ ವಸತಿ ಶಾಲೆಯ ಕಾಂಪೌಂಡ್​​ ಹಾರಿ 5 ಮಂದಿ SSLC ವಿದ್ಯಾರ್ಥಿಗಳು ಪರಾರಿ!
ಸಾಂದರ್ಭಿಕ ಚಿತ್ರImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:Feb 27, 2026 | 5:37 PM

Share

ಹಾವೇರಿ, ಫೆಬ್ರವರಿ 27: ರಾಜ್ಯದಲ್ಲಿ ಮಾರ್ಚ್ 18ರಿಂದ SSLC ಪರೀಕ್ಷೆಗಳು ಆರಂಭವಾಗಲಿದ್ದು, ಪೂರ್ವ ಸಿದ್ಧತಾ ಪರೀಕ್ಷೆ ಸೇರಿ ಅಂತಿಮ ಹಂತದ ತಯಾರಿ ನಡೆಯುತ್ತಿವೆ. ಉತ್ತಮ ಅಂಕಗಳೊಂದಿಗೆ ವಿದ್ಯಾರ್ಥಿಗಳು ತೇರ್ಗಡೆ ಹೊಂದಬೇಕೆಂಬ ಉದ್ದೇಶದಿಂದ ಶಿಕ್ಷಕರು ಮಾತ್ರವಲ್ಲದೆ ಶಿಕ್ಷಣ ಅಧಿಕಾರಿಗಳು, ತಹಶೀಲ್ದಾರ್​​ಗಳೂ ಕೆಲವೆಡೆ ತಮ್ಮದೇ ಆದ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಕೆಲಸ ಮಾಡುತ್ತಿದ್ದಾರೆ. ಪರೀಕ್ಷೆ ಬಗ್ಗೆ ಮಕ್ಕಳು ಆತಂಕಕ್ಕೆ ಒಳಗಾಗಬಾರದು ಎಂದು ಹಲವು ಕಾರ್ಯಕ್ರಮಗಳನ್ನು ನಡೆಸಿ ಅವರಿಗೆ ಧೈರ್ಯ ತುಂಬುವ ಕೆಲಸ ಆಗುತ್ತಿವೆ. ಹೀಗಿದ್ದರೂ ಹತ್ತನೇ ತರಗತಿ ಪರೀಕ್ಷೆಗೆ ಹೆದರಿ ಅಲ್ಪ ಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯ 5 ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಆತಂಕಕಾರಿ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ರಾಣೆಬೆನ್ನೂರು ತಾಲೂಕು ಸುಣಕಲಬಿದರಿ ವಸತಿ ಶಾಲೆಯ ವಿದ್ಯಾರ್ಥಿಗಳು ಪರೀಕ್ಷೆಗೆ ಅಂಜಿ ಹಾಸ್ಟೆಲ್​​ನಿಂದ ನಾಪತ್ತೆಯಾಗಿದ್ದು, ವಿದ್ಯಾರ್ಥಿಗಳ ಕುರಿತ ಮಾಹಿತಿಯನ್ನು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಮುಚ್ಚಿಟ್ಟಿರುವ ಆರೋಪ ಕೇಳಿಬಂದಿದೆ. ಮಕ್ಕಳು ಇದ್ದಾರೆ, ಸಿಕ್ಕಿದ್ದಾರೆ ಎಂದು ವಸತಿ ಶಾಲೆಯವರು ಹೇಳುತ್ತಿದ್ದು, ಅವರು ಬೇರೆಡೆ ಇದ್ದಾರೆಂದು ಹಾರಿಕೆ ಉತ್ತರ ನೀಡುತ್ತಿರುವ ಬಗ್ಗೆಯೂ ದೂರಲಾಗಿದೆ. ರಾತ್ರಿ ವೇಳೆ ವಾಚ್​​ಮೆನ್​​ ಇಲ್ಲದಿರೋದನ್ನು ಗಮನಿಸಿದ್ದ ವಿದ್ಯಾರ್ಥಿಗಳು, ಇಂದು ನಸುಕಿನ ಜಾವ ವಸತಿ ಶಾಲೆ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ. ಶಾಲೆಯಲ್ಲಿ ಪೂರ್ವಸಿದ್ಧತಾ ಪರೀಕ್ಷೆಗಳು ನಡೆಯುತ್ತಿದ್ದ ಹಿನ್ನೆಲೆ ಇವುಗಳಿಗೆ ಹೆದರಿ ಅವರು ವಸತಿಶಾಲೆಯಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ಓದಿ: ನಕಲಿ ಪ್ರಶ್ನೆಪತ್ರಿಕೆ ಹಾವಳಿ; ವಿದ್ಯಾರ್ಥಿಗಳೇ ನಂಬಿ ಮೋಸ ಹೋಗದಿರಿ ಎಂದ KSEAB

ಪರೀಕ್ಷೆ ಬರೆಯಲಿರುವ 9,02,889 ವಿದ್ಯಾರ್ಥಿಗಳು

SSLC ಪರೀಕ್ಷೆ ಈ ವರ್ಷ 2,871 ಕೇಂದ್ರಗಳಲ್ಲಿ ನಡೆಯಲಿದ್ದು, 15,941 ಶಾಲೆಗಳಿಂದ ದಾಖಲೆ ಪ್ರಮಾಣದ 9,02,889 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪೂರ್ವ ಸಿದ್ಧತಾ ಪರೀಕ್ಷೆಗಳ ವೇಳೆ ಪ್ರಶ್ನೆ ಪತ್ರಿಕೆಗಳು ಲೀಕ್​​ ಆಗಿದ್ದ ಹಿನ್ನೆಲೆ, ಮುಖ್ಯ ಪರೀಕ್ಷೆಯ ವೇಳೆ ಇಂತಹ ಯಾವುದೇ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಲಿಗೆ ಖಡಕ್​​ ಸೂಚನೆಯೂ ಇಲಾಖೆಯಿಂದ ಹೋಗಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:58 pm, Fri, 27 February 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ