Karnataka SSLC Exam 2021: ಪ್ರಶ್ನೆಪತ್ರಿಕೆ ಮಾದರಿಯಲ್ಲಿ ಕೊಂಚ ಬದಲಾವಣೆ; ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳ ಸಂಖ್ಯೆ ಹೆಚ್ಚಳ

SSLC Exam 2021 Question Paper: ಮುಖ್ಯಪರೀಕ್ಷೆಯ 80 ಅಂಕಗಳಲ್ಲಿ ಪ್ರತಿಬಾರಿ 20 ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳಿರುತ್ತಿದ್ದವು. ಆದರೆ ಈ ಬಾರಿ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.

Karnataka SSLC Exam 2021: ಪ್ರಶ್ನೆಪತ್ರಿಕೆ ಮಾದರಿಯಲ್ಲಿ ಕೊಂಚ ಬದಲಾವಣೆ; ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳ ಸಂಖ್ಯೆ ಹೆಚ್ಚಳ
ಸಾಂದರ್ಭಿಕ ಚಿತ್ರ
Follow us
| Updated By: ganapathi bhat

Updated on:Apr 06, 2022 | 7:28 PM

Karnataka SSLC Exam 2021: ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Examination) ಪ್ರಶ್ನೆಪತ್ರಿಕೆ ಮಾದರಿಯಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳಲಾಗಿದೆ. ಬಹುಆಯ್ಕೆಗಳ (ಮಲ್ಟಿಪಲ್ ಚಾಯ್ಸ್) ಪ್ರಶ್ನೆಗಳ ಸಂಖ್ಯೆಯಲ್ಲಿ ವ್ಯತ್ಯಾಸವಾಗಿದ್ದು ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ. ಪ್ರತಿವರ್ಷ 20 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಇರುತ್ತಿತ್ತು. ಆದರೆ, ಈ ಬಾರಿ 30 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳು ಇರುತ್ತವೆ. ಪ್ರಸ್ತುತ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಪರೀಕ್ಷಾ ಮಾದರಿ ಬದಲಾವಣೆ ವಿಚಾರವಾಗಿ ಅನ್ಬುಕುಮಾರ್ ತಿಳಿಸಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆ ಅಂಕಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಎಸ್ಎಸ್ಎಲ್​ಸಿ ಬೋರ್ಡ್ ಸ್ಟ್ಯಾಂಡರ್ಡ್​ನಂತೆಯೇ ಪರೀಕ್ಷೆ ನಡೆಯಲಿದೆ. ಒಟ್ಟು ನೂರು ಅಂಕಗಳಲ್ಲಿ 20 ಇಂಟರ್ನಲ್ ಅಂಕ ಮತ್ತು 80 ಮುಖ್ಯಪರೀಕ್ಷೆಯ ಅಂಕಗಳು ಇರುತ್ತವೆ. ಅದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಮುಖ್ಯಪರೀಕ್ಷೆಯ 80 ಅಂಕಗಳಲ್ಲಿ ಪ್ರತಿಬಾರಿ 20 ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳಿರುತ್ತಿದ್ದವು. ಆದರೆ ಈ ಬಾರಿ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.

SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಜೂ.21 ರಿಂದ ಜುಲೈ 5 ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಮೊದಲು, ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಸಲಹೆ, ಮನವಿಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಪರೀಕ್ಷಾ ಅಂತಿಮ ವೇಳಾಪಟ್ಟಿ ವಿವರ ಹೀಗಿದೆ 1. ಜೂನ್ 21: ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ಪರೀಕ್ಷೆ 2. ಜೂನ್​ 24: ಗಣಿತ 3. ಜೂನ್​ 28: ವಿಜ್ಞಾನ ಪರೀಕ್ಷೆ 4. ಜೂನ್ 30: ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು 5. ಜುಲೈ 2: ದ್ವಿತೀಯ ಭಾಷೆ ಇಂಗ್ಲಿಷ್/ ಕನ್ನಡ 6. ಜುಲೈ 5: ಸಮಾಜ ವಿಜ್ಞಾನ ಪರೀಕ್ಷೆ

ಇದನ್ನೂ ಓದಿ: SSLC ಅಂತಿಮ ವೇಳಾಪಟ್ಟಿ ಪ್ರಕಟ; ಜೂ.21 ರಿಂದ ಎಕ್ಸಾಂ ಶುರು

Published On - 3:23 pm, Wed, 3 March 21

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ