Karnataka SSLC Exam 2021: ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ (SSLC Examination) ಪ್ರಶ್ನೆಪತ್ರಿಕೆ ಮಾದರಿಯಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳಲಾಗಿದೆ. ಬಹುಆಯ್ಕೆಗಳ (ಮಲ್ಟಿಪಲ್ ಚಾಯ್ಸ್) ಪ್ರಶ್ನೆಗಳ ಸಂಖ್ಯೆಯಲ್ಲಿ ವ್ಯತ್ಯಾಸವಾಗಿದ್ದು ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ. ಪ್ರತಿವರ್ಷ 20 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಇರುತ್ತಿತ್ತು. ಆದರೆ, ಈ ಬಾರಿ 30 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳು ಇರುತ್ತವೆ. ಪ್ರಸ್ತುತ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಪರೀಕ್ಷಾ ಮಾದರಿ ಬದಲಾವಣೆ ವಿಚಾರವಾಗಿ ಅನ್ಬುಕುಮಾರ್ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಅಂಕಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಎಸ್ಎಸ್ಎಲ್ಸಿ ಬೋರ್ಡ್ ಸ್ಟ್ಯಾಂಡರ್ಡ್ನಂತೆಯೇ ಪರೀಕ್ಷೆ ನಡೆಯಲಿದೆ. ಒಟ್ಟು ನೂರು ಅಂಕಗಳಲ್ಲಿ 20 ಇಂಟರ್ನಲ್ ಅಂಕ ಮತ್ತು 80 ಮುಖ್ಯಪರೀಕ್ಷೆಯ ಅಂಕಗಳು ಇರುತ್ತವೆ. ಅದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಮುಖ್ಯಪರೀಕ್ಷೆಯ 80 ಅಂಕಗಳಲ್ಲಿ ಪ್ರತಿಬಾರಿ 20 ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳಿರುತ್ತಿದ್ದವು. ಆದರೆ ಈ ಬಾರಿ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಜೂ.21 ರಿಂದ ಜುಲೈ 5 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಮೊದಲು, ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಸಲಹೆ, ಮನವಿಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಪರೀಕ್ಷಾ ಅಂತಿಮ ವೇಳಾಪಟ್ಟಿ ವಿವರ ಹೀಗಿದೆ
1. ಜೂನ್ 21: ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ಪರೀಕ್ಷೆ
2. ಜೂನ್ 24: ಗಣಿತ
3. ಜೂನ್ 28: ವಿಜ್ಞಾನ ಪರೀಕ್ಷೆ
4. ಜೂನ್ 30: ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು
5. ಜುಲೈ 2: ದ್ವಿತೀಯ ಭಾಷೆ ಇಂಗ್ಲಿಷ್/ ಕನ್ನಡ
6. ಜುಲೈ 5: ಸಮಾಜ ವಿಜ್ಞಾನ ಪರೀಕ್ಷೆ
ಇದನ್ನೂ ಓದಿ: SSLC ಅಂತಿಮ ವೇಳಾಪಟ್ಟಿ ಪ್ರಕಟ; ಜೂ.21 ರಿಂದ ಎಕ್ಸಾಂ ಶುರು
Published On - 3:23 pm, Wed, 3 March 21