SSLC -PU ವಿದ್ಯಾರ್ಥಿಗಳೇ! ಬಸ್ ವ್ಯವಸ್ಥೆ ಬಗ್ಗೆ ಚಿಂತಿಸಬೇಡಿ.. ಉಚಿತವಾಗಿ ಪ್ರಯಾಣಿಸಿ
ಬೆಂಗಳೂರು: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ವಿಚಾರವಾಗಿ ವಿಧಾನಸೌಧದಲ್ಲಿಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಮಧ್ಯೆ ಚರ್ಚೆ ನಡೆದಿದ್ದು, ಬಸ್ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳು ಚಿಂತಿಸುವುದು ಬೇಡ ಎಂದು ಸಚಿವದ್ವಯರು ಅಭಯ ನೀಡಿದ್ದಾರೆ. ಬಸ್ ವ್ಯವಸ್ಥೆ ಮಾಡುವ ಬಗ್ಗೆ ಸಚಿವ ಸವದಿಯಿಂದ ಭರವಸೆ ದೊರೆತಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿಯನ್ನು ತಾವು ಹೊರುವುದಾಗಿ ಸಚಿವ ಸವದಿ ಅಭಯ ನೀಡಿದ್ದಾರೆ […]
ಬೆಂಗಳೂರು: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ವಿಚಾರವಾಗಿ ವಿಧಾನಸೌಧದಲ್ಲಿಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಮಧ್ಯೆ ಚರ್ಚೆ ನಡೆದಿದ್ದು, ಬಸ್ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳು ಚಿಂತಿಸುವುದು ಬೇಡ ಎಂದು ಸಚಿವದ್ವಯರು ಅಭಯ ನೀಡಿದ್ದಾರೆ.
ಬಸ್ ವ್ಯವಸ್ಥೆ ಮಾಡುವ ಬಗ್ಗೆ ಸಚಿವ ಸವದಿಯಿಂದ ಭರವಸೆ ದೊರೆತಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿಯನ್ನು ತಾವು ಹೊರುವುದಾಗಿ ಸಚಿವ ಸವದಿ ಅಭಯ ನೀಡಿದ್ದಾರೆ ಎಂದು ಪ್ರಾಥಮಿಕ & ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪರೀಕ್ಷಾ ಪ್ರವೇಶ ಪತ್ರ ಅಥವಾ ವಿದ್ಯಾರ್ಥಿ ಸ್ಮಾರ್ಟ್ ಕಾರ್ಡ್ ತೋರಿಸಿ ಬಸ್ಗಳಲ್ಲಿ ಪ್ರಯಾಣಿಸಿ SSLC ಮತ್ತು PUC ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳಿಗೆ ಬಿಎಂಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಇದೆ ತಿಂಗಳ 6 ರಂದು ಬಾಕಿ ಉಳಿದಿದ್ದ ದ್ವಿತಿಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ. ಮತ್ತು ಇದೇ ತಿಂಗಳ 25 ರಿಂದ ಜುಲೈ 4 ರವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ತಮ್ಮ ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೂ ಮತ್ತು ಪರೀಕ್ಷಾ ಕೇಂದ್ರದಿಂದ ತಮ್ಮ ಮನೆಯವರಿಗೂ ಬಿಎಂಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಬಿಎಂಟಿಸಿ ಕೇಂದ್ರ ಕಚೇರಿ ಸುತ್ತೋಲೆ ಮೂಲಕ ಸೂಚಿಸಿದೆ.
Published On - 5:08 pm, Thu, 4 June 20