ಜುಲೈ ತಿಂಗಳ 3ನೇ ವಾರದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ, ಹೇಗಿದೆ ಗೊತ್ತಾ ಶಿಕ್ಷಣ ಇಲಾಖೆ ತಯಾರಿ

ಪರೀಕ್ಷೆಗಾಗಿ ಈಗಾಗಲೇ 6000 ಸಾವಿರ ಪರೀಕ್ಷಾ ಕೇಂದ್ರಗಳನ್ನ ನಿಗದಿ ಮಾಡಲಾಗಿದೆ. ಜುಲೈ 17 ರಿಂದ 21ರೊಳಗೆ ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಪರೀಕ್ಷಾ ತುರ್ತು ಸಿದ್ದತೆ ಮಾಡಿಕೊಳ್ಳುವಂತೆ ಕರ್ನಾಟಕ ಫ್ರೌಢ ಪರೀಕ್ಷಾ ಮಂಡಳಿಯಿಂದ ಸುತ್ತೋಲೆ ಕಳಿಸಲಾಗಿದೆ.

ಜುಲೈ ತಿಂಗಳ 3ನೇ ವಾರದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ, ಹೇಗಿದೆ ಗೊತ್ತಾ ಶಿಕ್ಷಣ ಇಲಾಖೆ ತಯಾರಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Jun 17, 2021 | 10:21 AM

ಬೆಂಗಳೂರು: ಮಹಾಮಾರಿ ಕೊರೊನಾದಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗುತ್ತಿದೆ. ಸದ್ಯ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಲು ತಯಾರಿ ಮಾಡಿಕೊಳ್ಳುತ್ತಿದೆ. ಜುಲೈ ತಿಂಗಳ 3ನೇ ವಾರದಲ್ಲಿ ಎರಡು ದಿನಗಳ ಕಾಲ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಇದೇ ಬೆನ್ನಲ್ಲೆ ಎಸ್ಎಸ್ಎಲ್ಸಿ ಪರೀಕ್ಷೆಗೆ ಶಿಕ್ಷಣ ಇಲಾಖೆಯಿಂದ ಕಂಪ್ಲೀಟ್ ತಯಾರಿ ಆರಂಭವಾಗಿದೆ.

ಎಸ್ಎಸ್ಎಲ್ಸಿ ಪರೀಕ್ಷೆಗೆ ಹೇಗಿದೆ ಗೊತ್ತಾ ಶಿಕ್ಷಣ ಇಲಾಖೆಯ ತಯಾರಿ ಪರೀಕ್ಷೆಗಾಗಿ ಈಗಾಗಲೇ 6000 ಸಾವಿರ ಪರೀಕ್ಷಾ ಕೇಂದ್ರಗಳನ್ನ ನಿಗದಿ ಮಾಡಲಾಗಿದೆ. ಜುಲೈ 17 ರಿಂದ 21ರೊಳಗೆ ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಪರೀಕ್ಷಾ ತುರ್ತು ಸಿದ್ದತೆ ಮಾಡಿಕೊಳ್ಳುವಂತೆ ಕರ್ನಾಟಕ ಫ್ರೌಢ ಪರೀಕ್ಷಾ ಮಂಡಳಿಯಿಂದ ಸುತ್ತೋಲೆ ಕಳಿಸಲಾಗಿದೆ. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಕೊವಿಡ್ ರೂಲ್ಸ್ ಪಾಲನೆ. ಪರೀಕ್ಷಾ ಕೇಂದ್ರಗಳ ಪುನರ್ ರಚನೆ ಮಾಡಿ ಪ್ರಸ್ತಾವನೆ ಸಲ್ಲಿಸುವಂತೆ ಬಿಇಒ ಗಳಿಗೆ ಆದೇಶ ನೀಡಲಾಗಿದೆ.

ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಆರು ಅಡಿಗೊಂದರಂತೆ ಆಸನ ವ್ಯವಸ್ಥೆ. ಎಕ್ಸಾಂ ಕೊಠಡಿಗಳನ್ನ ಸಿದ್ದಪಡಿಕೊಳುವುದು, ಕೊಠಡಿಯಲ್ಲಿ ಗಾಳಿ ಬೆಳಕಿನ ವ್ಯವಸ್ಥೆ, ಸಿಸಿಟಿವಿ ಕ್ಯಾಮೆರಾ ಅಳವಡಿಕೆ ವ್ಯವಸ್ಥೆ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕೊಠಡಿ ಸಿದ್ದತೆ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪರೀಕ್ಷಾ ಕೇಂದ್ರದ ಸಿದ್ಧತೆ, ತುರ್ತಾಗಿ ಪರೀಕ್ಷಾ ಕೇಂದ್ರಗಳ ರಚನೆ ಮಾಡಿ ಮಾಹಿತಿ ನೀಡುವಂತೆ ರಾಜ್ಯದ ಎಲ್ಲಾ ನೂಡಲ್ ಅಧಿಕಾರಿಗಳು, ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕರ್ನಾಟಕ ಫ್ರೌಢ ಪರೀಕ್ಷಾ ಮಂಡಳಿ ನಿರ್ದೇಶಕರಿಂದ ಸೂಚನೆ ನೀಡಲಾಗಿದೆ.

ಎಸ್ಎಸ್ಎಲ್ಸಿ ಪರೀಕ್ಷೆಗೆ ಹೆಚ್ಚಿನ ಶಿಕ್ಷಕರ ಅಗತ್ಯ ಹಿನ್ನೆಲೆಯಲ್ಲಿ ಕೊವಿಡ್-19 ಕಾರ್ಯಕ್ಕೆ ನಿಯೋಜನೆಗೊಂಡಿರುವ ಶಿಕ್ಷಕ ಹಾಗೂ ಸಿಬ್ಬಂದಿ ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಪತ್ರ ಬರೆಯಲಾಗಿದೆ. ಜುಲೈ ಮೂರನೇ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಕಳೆದ ಭಾರಿಗಿಂತ ಹೆಚ್ಚಿನ ಶಿಕ್ಷಕರ ಅವಶ್ಯಕತೆ ಇದೆ. ಹೀಗಾಗಿ ಎಲ್ಲ ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಪತ್ರ ಬರೆದಿದ್ದಾರೆ.

ಜುಲೈ 17/19 ಅಥವಾ 19/21 ಎರಡು ದಿನಗಳಂದು ಪರೀಕ್ಷೆ ನಡೆಸಲು ಕೊವಿಡ್ ತಾಂತ್ರಿಕ ಇಲಾಖೆ ಸಲಹೆ ನೀಡಿದೆ. ಆರೋಗ್ಯ ಇಲಾಖೆಗೆ ಕಳೆದ ಭಾರಿಯಂತೆ ಉತ್ತಮ ಎಸ್ಎಸ್ಎಲ್ಸಿ ಎಕ್ಸಾಂ ಮಾರ್ಗಸೂಚಿ ನೀಡುವಂತೆ ಶಿಕ್ಷಣ ಇಲಾಖೆ ಪ್ರಸ್ತಾವನೆ ಮಾಡಿದೆ. ಈಗಾಗಲೇ ಮಾದರಿ ಪ್ರಶ್ನೆ ಪತ್ರಿಕೆ ನೀಡಿ ವಿದ್ಯಾರ್ಥಿಗಳನ್ನ ಎಕ್ಸಾಂಗೆ ಸಿದ್ಧತೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ತಿಳಿಸಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು ಸಿಬ್ಬಂದಿಗೆ ಲಸಿಕೆ ಕಡ್ಡಾಯ ಮಾಡಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಗೆ ಕಂಪ್ಲೀಟ್ ಸಿದ್ಧತೆ ವರದಿ ಸಲ್ಲಿಸುವಂತೆ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲ ನೂಡಲ್ ಅಧಿಕಾರಿಗಳು, ಉಪ ನಿರ್ದೇಶಕರು ಹಾಗೂ ಬಿಇಒ ಗಳಿಗೆ ಸೂಚನೆ ನೀಡಿದೆ.

ಇದನ್ನೂ ಓದಿ: ಎಸ್ಎಸ್ಎಲ್​ಸಿ ಪರೀಕ್ಷೆಗೆ ಸಿದ್ಧರಾಗಿ.. ಬೋರ್ಡ್‌ ವೆಬ್‌ಸೈಟ್‌ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

Published On - 10:19 am, Thu, 17 June 21

ಬಿಗ್ ಬಾಸ್ ಮನೆಗೆ ‘ರಾಮಾಚಾರಿ’ ಜೋಡಿ; ಕುರಿನ ಕರೆದಂತೆ ಚಾರುನ ಕರೆದ ಹನುಮಂತ
ಬಿಗ್ ಬಾಸ್ ಮನೆಗೆ ‘ರಾಮಾಚಾರಿ’ ಜೋಡಿ; ಕುರಿನ ಕರೆದಂತೆ ಚಾರುನ ಕರೆದ ಹನುಮಂತ
ಪದೇ ಪದೇ ಹಾವುಗಳು ಕಣ್ಣಿಗೆ ಕಾಣಿಸುತ್ತಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಪದೇ ಪದೇ ಹಾವುಗಳು ಕಣ್ಣಿಗೆ ಕಾಣಿಸುತ್ತಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಕೊಂಡುಕೊಳ್ಳುವ ಯೋಗವಿದೆ
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಕೊಂಡುಕೊಳ್ಳುವ ಯೋಗವಿದೆ
4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ
4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ
ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್​ನಲ್ಲಿ ಸೆರೆ​
ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್​ನಲ್ಲಿ ಸೆರೆ​
ನನ್ನನ್ನು ಕೆಳಗಿಳಿಸುವ ಪ್ರಯತ್ನಗಳಿಗೆ ಜನರೇ ಉತ್ತರ ನೀಡಬೇಕು: ಸಿದ್ದರಾಮಯ್ಯ
ನನ್ನನ್ನು ಕೆಳಗಿಳಿಸುವ ಪ್ರಯತ್ನಗಳಿಗೆ ಜನರೇ ಉತ್ತರ ನೀಡಬೇಕು: ಸಿದ್ದರಾಮಯ್ಯ
ಜೋಡಿ ಬದಲಾಯಿಸಲು ಅನುಷಾ ರೈಗೆ ಆಫರ್​ ನೀಡಿದ ಬಿಗ್ ಬಾಸ್; ಕಾದಿದೆ ಟ್ವಿಸ್ಟ್
ಜೋಡಿ ಬದಲಾಯಿಸಲು ಅನುಷಾ ರೈಗೆ ಆಫರ್​ ನೀಡಿದ ಬಿಗ್ ಬಾಸ್; ಕಾದಿದೆ ಟ್ವಿಸ್ಟ್
ಕಾಮಗಾರಿಗಳಲ್ಲಿ ಮೀಸಲಾತಿಯ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ: ಖರ್ಗೆ
ಕಾಮಗಾರಿಗಳಲ್ಲಿ ಮೀಸಲಾತಿಯ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ: ಖರ್ಗೆ
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗಲೇ ಹೃದಯಾಘಾತದಿಂದ ಸಾವು!
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗಲೇ ಹೃದಯಾಘಾತದಿಂದ ಸಾವು!
ಮೈಸೂರಿನ ಎಲ್ಲ ಕಾರ್ಯಕ್ರಮಗಳಲ್ಲಿ ತಂದೆಯನ್ನು ಹಿಂಬಾಲಿಸುತ್ತಿರುವ ಯತೀಂದ್ರ
ಮೈಸೂರಿನ ಎಲ್ಲ ಕಾರ್ಯಕ್ರಮಗಳಲ್ಲಿ ತಂದೆಯನ್ನು ಹಿಂಬಾಲಿಸುತ್ತಿರುವ ಯತೀಂದ್ರ