ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಚಿಕ್ಕಯರನಕೇರಿ ಗ್ರಾಮದ ಬಳಿ ಬಾವಿಯಲ್ಲಿ ಶಾಲಾ ಸಮವಸ್ತ್ರದಲ್ಲೇ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. SSLC ವಿದ್ಯಾರ್ಥಿನಿ ಶನಿವಾರದಿಂದ ನಾಪತ್ತೆಯಾಗಿದ್ದಳು. ವಿದ್ಯಾರ್ಥಿನಿಯನ್ನು ಬೇರೆಲ್ಲೋ ಹತ್ಯೆಗೈದು ಶವ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಮೃತ ವಿದ್ಯಾರ್ಥಿನಿಯ ಪೋಷಕರಿಂದ ಕೊಲೆ ಆರೋಪ ಕೇಳಿಬಂದಿದೆ. ಹುನಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿಯ ಹತ್ಯೆ
ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಹೊಸಪಾಳ್ಯದಲ್ಲಿ ಯುವತಿ ಅನುಮಾನಾಸ್ಪದ ಸಾವಿಗೀಡಾಗಿದ್ದಾರೆ. 19 ವರ್ಷದ ಪ್ರಿಯಾಂಕಾ ಸಾವಿಗೀಡಾದ ಯುವತಿ. ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಹೊಸಪಾಳ್ಯದಲ್ಲಿರುವ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪರಿಚಿತರು ಪ್ರಿಯಾಂಕಾ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮುಳಬಾಗಿಲು ಟೌನ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.