ಚಿಕ್ಕಮಗಳೂರು: ಕೊಳಲು ನುಡಿಸುವ ಶಾಲೆಗೆ ಸೇರಿಸದಿದ್ದಕ್ಕೆ ಮನನೊಂದು SSLC ವಿದ್ಯಾರ್ಥಿ ಆತ್ಮಹತ್ಯೆ

ಪಿಜಿಯಲ್ಲಿ ನೇಣು ಬಿಗಿದುಕೊಂಡು 10ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯ ಬೀದಿಯ ಪಿಜಿಯಲ್ಲಿ ನಡೆದಿದೆ. ಕೊಳಲು ನುಡಿಸುವ ಶಾಲೆಗೆ ಸೇರಿಸದಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಚಿಕ್ಕಮಗಳೂರು: ಕೊಳಲು ನುಡಿಸುವ ಶಾಲೆಗೆ ಸೇರಿಸದಿದ್ದಕ್ಕೆ ಮನನೊಂದು SSLC ವಿದ್ಯಾರ್ಥಿ ಆತ್ಮಹತ್ಯೆ
ಚಿಕ್ಕಮಗಳೂರು: ಕೊಳಲು ನುಡಿಸುವ ಶಾಲೆಗೆ ಸೇರಿಸದಿದ್ದಕ್ಕೆ ಮನನೊಂದು SSLC ವಿದ್ಯಾರ್ಥಿ ಆತ್ಮಹತ್ಯೆ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Sep 30, 2024 | 10:33 PM

ಚಿಕ್ಕಮಗಳೂರು, ಸೆಪ್ಟೆಂಬರ್​ 30: ಕೊಳಲು ನುಡಿಸುವ ಶಾಲೆಗೆ ಸೇರಿಸದಿದ್ದಕ್ಕೆ ಮನನೊಂದು ಎಸ್​ಎಸ್​ಎಲ್​ಸಿ (SSLC) ವಿದ್ಯಾರ್ಥಿ ಆತ್ಮಹತ್ಯೆ ಮಾಡಿರುವಂತಹ ಘಟನೆ ಶೃಂಗೇರಿಯ ಹರಿಹರ ಬೀದಿಯ ಪಿಜಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಎಸ್.ಕೆ.ಧ್ರುವ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಸದ್ಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಕೊಳಲು ನುಡಿಸುವ ಶಾಲೆಗೆ ಸೇರಿಸುವಂತೆ ಪೋಷಕರಿಗೆ ಧ್ರುವ ಒತ್ತಾಯ ಮಾಡಿದ್ದಾನೆ. ಆದರೆ ಎಸ್​ಎಸ್​ಎಲ್​ಸಿ ವ್ಯಾಸಂಗ ಮುಗಿದ ನಂತರ ಸೇರಿಸುವುದಾಗಿ ಪೋಷಕರು ಹೇಳಿದ್ದಾರೆ. ಇದರಿಂದ ಬೇಸರಗೊಂಡ ಧ್ರುವ ಪರೀಕ್ಷೆಗೆ ಗೈರಾಗಿ ಪಿಜಿಯಲ್ಲಿದ್ದಾಗ ನೇಣಿಗೆ ಶರಣಾಗಿದ್ದಾನೆ.

ಸಾವಿನಲ್ಲೂ ಒಂದಾದ ದಂಪತಿ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದ ಕೆಳಗೋಟೆಯ ಸಂಗಮೇಶ್ವರ ಬಡಾವಣೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಎಸ್ ಜೆ ಎಂ ವಿದ್ಯಾಸಂಸ್ಥೆಯಲ್ಲಿ ಗ್ರಂಥ ಪಾಲಕರಾಗಿ ಸೇವೆ ಸಲ್ಲಿಸಿದ್ದ ಓಂಕಾರಮೂರ್ತಿ(66) ನಿನ್ನೆ ಮದ್ಯ ರಾತ್ರಿ ವೇಳೆ ಅಸ್ವಸ್ಥರಾಗಿದ್ದಾರೆ. ಗ್ಯಾಸ್ಟಿಕ್ ಮಾತ್ರೆ ತೆಗೆದುಕೊಂಡು ಮಲಗಿದ್ದಾರೆ.

ಇದನ್ನೂ ಓದಿ: ತಿರುಪತಿಗೆ ತೆರಳಿದ್ದ 3 ಸ್ನೇಹಿತರಲ್ಲಿ ಒಬ್ಬ ನಾಪತ್ತೆ, ಒಬ್ಬ ಆತ್ಮಹತ್ಯೆ, ಒಬ್ಬ ಜೀವಂತ: ಹುಬ್ಬಳ್ಳಿಯಲ್ಲೊಂದು ಮಿಸ್ಸಿಂಗ್ ಮಿಸ್ಟರಿ ಕಥೆ‌!

ಬೆಳಗ್ಗೆ 6ಗಂಟೆಗೆ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ದಾರೆ. ಲೋಬಿಪಿಯಿಂದ ಹೃದಯಾಘಾತ ಆಗಿದೆ ಎಂದು ತಿಳಿದಾಗ ಪತ್ನಿ ದ್ರಾಕ್ಷಾಯಿಣಿ(61) ಆಸ್ಪತ್ರೆ ಬಳಿಯೇ ಕುಸಿದು ಬಿದ್ದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇತ್ತ ಕೆಲಹೊತ್ತಿನಲ್ಲೇ ಚಿಕಿತ್ಸೆ ಫಲಿಸದೆ ಓಂಕಾರಮೂರ್ತಿ ಅವರೂ ಸಹ ಸಾವಿಗೀಡಾಗಿದ್ದಾರೆ. ಆ ಮೂಲಕ ಸುಮಾರು ನಾಲ್ಕು ದಶಕಗಳ ಕಾಲ ಅನ್ಯೋನ್ಯವಾಗಿದ್ದ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ.

ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ

ಬೆಂಗಳೂರು: ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ ಮಾಡಿರುವಂತಹ ಘಟನೆ ಜ್ಞಾನಭಾರತಿಯ ಸಣ್ಣೇನಹಳ್ಳಿಯಲ್ಲಿ ನಡೆದಿದೆ. ಮೂರ್ತಿ‌(52) ಕೊಲೆ ಮಾಡಿ ಆರೋಪಿ ಕೀರ್ತಿ ಪರಾರಿ ಆಗಿದ್ದಾನೆ. ಒಂದೇ ಏರಿಯಾದಲ್ಲಿ ಮೂರ್ತಿ, ಆರೋಪಿ ಕೀರ್ತಿ ವಾಸವಿದ್ದರು.

ಇದನ್ನೂ ಓದಿ: ಕಬಾಬ್ ತರಲು ಹೋದ ಯುವಕ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ರಾತ್ರಿ ಮಹಾಲಯ ಅಮಾವಾಸ್ಯೆ ಪೂಜೆ ಮಾಡಿ ಮದ್ಯ ಸೇವಿಸಿದ್ದರು. ಈ ವೇಳೆ ಗಲಾಟೆಯಾಗಿ ಮೂರ್ತಿಗೆ ಕೀರ್ತಿ ಚಾಕು ಇರಿದಿದ್ದಾನೆ. ಆರೋಪಿ ಕೀರ್ತಿ ಪತ್ತೆಗಾಗಿ ಪೊಲೀಸರಿಂದ ಹುಡುಕಾಟ ನಡೆಸಿದ್ದು, ಜ್ಞಾನಭಾರತಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮನೆಯಲ್ಲಿ ಬ್ರಹ್ಮ ಕಮಲ ಗಿಡ ಇದ್ದರೆ ಇದೆ ಅನೇಕ ಪ್ರಯೋಜನ!
ಮನೆಯಲ್ಲಿ ಬ್ರಹ್ಮ ಕಮಲ ಗಿಡ ಇದ್ದರೆ ಇದೆ ಅನೇಕ ಪ್ರಯೋಜನ!
Daily Horoscope: ಈ ರಾಶಿಯವರಿಗಿಂದು 5 ರಾಶಿಗಳ ಶುಭ ಫಲ
Daily Horoscope: ಈ ರಾಶಿಯವರಿಗಿಂದು 5 ರಾಶಿಗಳ ಶುಭ ಫಲ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ