ವಸತಿ ಶಾಲೆಯಲ್ಲಿ SSLC ವಿದ್ಯಾರ್ಥಿನಿ ನೇಣಿಗೆ ಶರಣು: ನದಿಯಲ್ಲಿ ಮುಳುಗಿ ಗ್ರಾ.ಪಂ ಸದಸ್ಯ ಸಾವು

ಹಾವೇರಿ ಜಿಲ್ಲೆ ಬ್ಯಾಡಗಿ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ಎಸ್​​ಎಸ್​ಎಲ್​ಸಿ ವಿದ್ಯಾರ್ಥಿನಿ ಕೊಠಡಿಯಲ್ಲಿ ನೇಣಿಗೆ ಶರಣಾಗಿರುವಂತಹ ಘಟನೆ ನಡೆದಿದೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನದಿಯಲ್ಲಿ ಮುಳುಗಿ ಬರ್ಗಿ ಗ್ರಾಮ ಪಂಚಾಯತ್​ ಸದಸ್ಯ ಸಾವನ್ನಪ್ಪಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ನಡೆದಿದೆ.

ವಸತಿ ಶಾಲೆಯಲ್ಲಿ SSLC ವಿದ್ಯಾರ್ಥಿನಿ ನೇಣಿಗೆ ಶರಣು: ನದಿಯಲ್ಲಿ ಮುಳುಗಿ ಗ್ರಾ.ಪಂ ಸದಸ್ಯ ಸಾವು
ವಸತಿ ಶಾಲೆಯಲ್ಲಿ SSLC ವಿದ್ಯಾರ್ಥಿನಿ ನೇಣಿಗೆ ಶರಣು, ನದಿಯಲ್ಲಿ ಮುಳುಗಿ ಗ್ರಾ.ಪಂ ಸದಸ್ಯ ಸಾವು

Updated on: Sep 02, 2024 | 2:56 PM

ಹಾವೇರಿ, ಸೆಪ್ಟೆಂಬರ್​​ 02: ಎಸ್​​ಎಸ್​ಎಲ್​ಸಿ ವಿದ್ಯಾರ್ಥಿನಿ (SSLC student) ವಸತಿ ಶಾಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಹಾವೇರಿ ತಾಲೂಕಿನ ಭರಡಿ ಗ್ರಾಮದ ರೇಖಾ ಗೌಡರ(15) ಆತ್ಮಹತ್ಯೆ ಮಾಡಿಕೊಂಡ ಎಸ್​​ಎಸ್​ಎಲ್​ಸಿ ವಿದ್ಯಾರ್ಥಿನಿ. ಮೃತ ರೇಖಾ ಗೌಡರ ಬೆಳಗ್ಗೆ ಗೆಳತಿಯರೊಂದಿಗೆ ತಿಂಡಿ ತಿನ್ನಲು ಹೋಗಿದ್ದಾಳೆ. ವಾಪಸ್ ಬಂದು ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಆದರೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನದಿಯಲ್ಲಿ ಮುಳುಗಿ ಬರ್ಗಿ ಗ್ರಾಮ ಪಂಚಾಯತ್​ ಸದಸ್ಯ ಸಾವು

ಕಾರವಾರ: ನದಿಯಲ್ಲಿ ಮುಳುಗಿ ಬರ್ಗಿ ಗ್ರಾಮ ಪಂಚಾಯತ್​ ಸದಸ್ಯ ಸಾವನ್ನಪ್ಪಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮ ಬಳಿಯ ಅಘನಾಶಿನಿ ನದಿ ಹಿನ್ನೀರಿನಲ್ಲಿ ಘಟನೆ ನಡೆದಿದೆ. ಮೀನು ಹಿಡಿಯಲು ಹೋಗಿದ್ದ ವೇಳೆ ಘಟನೆ ನಡೆದಿದೆ. ದಾವುದ್ ಘಾರಿಯಾ(67) ಮೃತ ಗ್ರಾಮ ಪಂಚಾಯತ್​ ಸದಸ್ಯ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹುಬ್ಬಳ್ಳಿಯಲ್ಲಿ ಹಾಡಹಗಲೇ ವ್ಯಕ್ತಿಯ ಕತ್ತು ಸೀಳಿ ಬರ್ಬರ ಹತ್ಯೆ

ಹುಬ್ಬಳ್ಳಿ: ಹಾಡಹಗಲೇ ವ್ಯಕ್ತಿಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಗರದ ಇಂದಿರಾ ಗ್ಲಾಸ್ ಹೌಸ್ ಬಳಿ ನಡೆದಿದೆ. ಹುಲ್ಲೇಶ್ ಹಣಮಂತಪ್ಪ ಹಾಲರವಿ ಕೊಲೆಯಾದ ವ್ಯಕ್ತಿ. ಗಣೇಶ ಮೂರ್ತಿಗಳ ವಿಸರ್ಜನೆ ಮಾಡುವ ಬಾವಿಗೆ ಶವ ಎಸೆದು ಪರಾರಿ ಆಗಿದ್ದಾರೆ. ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡದ ಇಬ್ಬರು ಡಿಸಿಪಿಗಳ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆ ಗೋಡೆ ಕುಸಿದು ವೃದ್ಧೆ ಸಾವು

ಯಾದಗಿರಿ: ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಹುರಸಗುಂಡಗಿ ಗ್ರಾಮದಲ್ಲಿ ನಡೆದಿದೆ. ಸಕೀನಾಬಿ ನದಾಫ್(70) ಮೃತ ವೃದ್ಧೆ. ಮನೆಗೋಡೆ ಕುಸಿದು ಗಂಭೀರ ಗಾಯಗೊಂಡಿದ್ದ ಸಕೀನಾಬಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಉಪನ್ಯಾಸಕ ವಶಕ್ಕೆ

ಘಟನೆಯಲ್ಲಿ ಇಬ್ಬರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವರದಿ: ಅಣ್ಣಪ್ಪ ಬಾರ್ಕಿ

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us