ಕೆಸರು ಗದ್ದೆಯಂತಿದ್ದ 2 ಕಿ.ಮೀ ರಸ್ತೆ ದಾಟಿ ಪರೀಕ್ಷೆ ಬರೆದ ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳು, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ

ನಿನ್ನೆ ಎಸ್ಎಸ್ಎಲ್ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದಿದೆ. ಆದರೆ ಈ ಯಶಸ್ಸಿಗೆ ಕಾರಣರಾದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರಲು ಎಷ್ಟು ಪರದಾಡಿದ್ದಾರೆ ಎಂಬ ವಿಡಿಯೋವೊಂದು ವೈರಲ್ ಆಗಿದೆ.

ಕೆಸರು ಗದ್ದೆಯಂತಿದ್ದ 2 ಕಿ.ಮೀ ರಸ್ತೆ ದಾಟಿ ಪರೀಕ್ಷೆ ಬರೆದ ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳು, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ
ಕೆಸರು ಗದ್ದೆಯಂತಿದ್ದ 2 ಕಿ.ಮೀ ರಸ್ತೆ ದಾಟಿ ಪರೀಕ್ಷೆ ಬರೆದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು
Follow us
TV9 Web
| Updated By: ಆಯೇಷಾ ಬಾನು

Updated on: Jul 20, 2021 | 11:06 AM

ಮೈಸೂರು: ಜುಲೈ 19ರಂದು ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು(SSLC Exam 2021) ಯಶಸ್ವಿಯಾಗಿ ನಡೆದಿವೆ. ಗಣಿತ, ಸಮಾಜ ವಿಜ್ಞಾನ ಮತ್ತು ವಿಜ್ಞಾನ ಪರೀಕ್ಷೆ ಮುಗಿದಿದ್ದು, ಜುಲೈ 22 ರಂದು ಕನ್ನಡ, ಹಿಂದಿ, ಇಂಗ್ಲಿಷ್ ಸೇರಿದಂತೆ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ. ಸದ್ಯ ನಿನ್ನೆ ನಡೆದ ಪರೀಕ್ಷೆ ವೇಳೆ ಆದ ಘಟನೆಯೊಂದು ಭಾರಿ ಸುದ್ದಿಯಾಗಿದೆ. ಶಿಕ್ಷಣ ಸಚಿವರು, ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ನಿನ್ನೆ ಎಸ್ಎಸ್ಎಲ್ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದಿದೆ. ಆದರೆ ಈ ಯಶಸ್ಸಿಗೆ ಕಾರಣರಾದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರಲು ಎಷ್ಟು ಪರದಾಡಿದ್ದಾರೆ ಎಂಬ ವಿಡಿಯೋವೊಂದು ವೈರಲ್ ಆಗಿದೆ. ಮೊರಾರ್ಜಿ‌ ದೇಸಾಯಿ‌ ವಸತಿ ಶಾಲೆಯ ವಿದ್ಯಾರ್ಥಿಗಳು ಮೈಸೂರು ಹೆಚ್.ಡಿ. ಕೋಟೆ ತಾಲೂಕಿನ ಶಿರಮಳ್ಳಿಗೆ ಪರೀಕ್ಷೆ ಬರೆಯಲು ಸುಮಾರು 2 ಕಿ.ಮೀ ಕೆಸರು ಗದ್ದೆಯಂತಿದ್ದ ರಸ್ತೆಯಲ್ಲಿ ನಡೆದು ಬಂದಿದ್ದಾರೆ. ವಿದ್ಯಾರ್ಥಿಗಳು ಕೆಸರಂತಾಗಿದ್ದ ರಸ್ತೆಯಲ್ಲಿ ನಡೆದಾಡಿದ ವಿಡಿಯೋ ವೈರಲ್ ಆಗಿದ್ದು, ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಜಿಲ್ಲೆಯಲ್ಲಿ ಸುರಿದ ಮಳೆಯಿಂದ ರಸ್ತೆ ಹಾಳಾಗಿದ್ದು ರಸ್ತೆಯಲ್ಲಿ ಸಂಚಾರಿಸಲು ವಿದ್ಯಾರ್ಥಿಗಳು ಪರದಾಡಿದ್ದಾರೆ. ಕೊಂಚ ಯಾಮಾರಿದರೂ ಜಾರಿ ಬೀಳುವಂತಹ ಅಪಾಯದಲ್ಲೂ ಎಚ್ಚರದಿಂದ ಹೆಜ್ಜೆ ಹಾಕಿ ಎಸ್ಎಸ್ಎಲ್ಸಿ ಪರೀಕ್ಷೆ ಯಶಸ್ವಿಯಾಗಿ ಬರೆದು ಬಂದಿದ್ದಾರೆ. ರಸ್ತೆ ಬಗ್ಗೆ ಸಾಕಷ್ಟು ದೂರು ನೀಡಿದರು ಸಮಸ್ಯೆ ಬಗೆಹರಿಸದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ‌ ವಿರುದ್ಧ ಜನರು ಸಿಡಿದೆದ್ದಿದ್ದಾರೆ.

SSLC Student walks 2 km in Sludge road

ಕೆಸರು ಗದ್ದೆಯಂತಿದ್ದ 2 ಕಿ.ಮೀ ರಸ್ತೆ ದಾಟಿ ಪರೀಕ್ಷೆ ಬರೆದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು

ಇದನ್ನೂ ಓದಿ: SSLC Exam 2021: ಎಸ್​ಎಸ್​ಎಲ್​ಸಿ ಪರೀಕ್ಷೆ: ಏನಿತ್ತು ವಿಶೇಷ? ದೋಣಿಯಲ್ಲೂ ಬಂದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?