ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಲ್ಲಿ ಆತಂಕ: ಪರೀಕ್ಷೆಗೆ ಹಾಲ್ ಟಿಕೆಟ್ ಸಿಗದೆ 11 ವಿದ್ಯಾರ್ಥಿಗಳು ಕಂಗಾಲು
SSLC Exam 2021: ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದ ಮಹಾತ್ಮಾ ಗಾಂಧಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ಪರೀಕ್ಷೆಯ ಅರ್ಜಿ ಫಾರಂ ತುಂಬದೆ ವಿದ್ಯಾರ್ಥಿಗಳನ್ನ ಪರೀಕ್ಷೆಯಿಂದ ವಂಚಿತರಾಗುವಂತೆ ಮಾಡಿದ್ದಾರೆ. ಈ ಮಧ್ಯೆ, ಶಾಲೆಯ ಮುಖ್ಯ ಶಿಕ್ಷಕರು ಪರೀಕ್ಷಾ ಫಾರಂ ತುಂಬಿಲ್ಲ. ಹಾಗಾಗಿ ಪೂರಕ ಪರೀಕ್ಷೆಗೆ ಅವಕಾಶ ಕಲ್ಪಿಸುವ ಮಾತುಗಳನ್ನಾಡುತ್ತಿದ್ದಾರೆ.
ಹಾವೇರಿ: ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಇದೇ ಜುಲೈ 19ರಿಂದ ಆರಂಭವಾಗಲಿದೆ. ಆದರೆ ಈ ಮಧ್ಯೆ, ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿ ಕಡೆಯಿಂದ ಯಡವಟ್ಟುಗಳು ನಡೆಯುತ್ತಿದ್ದು ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದೆ. ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಲ್ ಟಿಕೆಟ್ ಸಿಗದೆ ಹನ್ನೊಂದು ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ.
ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿರೋ ಮಹಾತ್ಮಾ ಗಾಂಧಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಈಗ ಪೇಚಿಗೆ ಸಿಲುಕಿದ್ದಾರೆ. ಸದರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ಪರೀಕ್ಷೆಯ ಅರ್ಜಿ ಫಾರಂ ತುಂಬದೆ ವಿದ್ಯಾರ್ಥಿಗಳನ್ನ ಪರೀಕ್ಷೆಯಿಂದ ವಂಚಿತರಾಗುವಂತೆ ಮಾಡಿದ್ದಾರೆ. ಈ ಮಧ್ಯೆ, ಶಾಲೆಯ ಮುಖ್ಯ ಶಿಕ್ಷಕರು ಪರೀಕ್ಷಾ ಫಾರಂ ತುಂಬಿಲ್ಲ. ಹಾಗಾಗಿ ಪೂರಕ ಪರೀಕ್ಷೆಗೆ ಅವಕಾಶ ಕಲ್ಪಿಸುವ ಮಾತುಗಳನ್ನಾಡುತ್ತಿದ್ದಾರೆ.
ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿಯು ಇಬ್ಬರು ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ತುಂಬಿದ್ದರೂ ಪರೀಕ್ಷಾ ಫಾರಂ ತುಂಬದೆ ನಿರ್ಲಕ್ಷ್ಯ ವಹಿಸಿದ್ದಾರೆ. ಇನ್ನು, ಒಂಬತ್ತು ವಿದ್ಯಾರ್ಥಿಗಳಿಗೆ ಪರೀಕ್ಷಾ ಫಾರಂ ತುಂಬೋ ಬಗ್ಗೆ ಮಾಹಿತಿಯನ್ನೇ ನೀಡಿಲ್ಲ.
ಮಹಾತ್ಮಾ ಗಾಂಧಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿಯ ಬಳಿ ವಿದ್ಯಾರ್ಥಿಗಳು ಪರೀಕ್ಷೆಗೆ ಕೂರಲು ಅವಕಾಶ ಮಾಡಿಕೊಡಿ ಅಂತಾ ಮನವಿ ಮಾಡುತ್ತಿದ್ದಾರೆ. ಮಕ್ಕಳನ್ನ ಪರೀಕ್ಷೆಯಿಂದ ವಂಚಿತರಾಗಿಸಿದ್ದಕ್ಕೆ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿ ವಿರುದ್ಧ ಪೋಷಕರು ಆಕ್ರೋಶಗೊಂಡಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರ ಹೋರಾಟಕ್ಕೆ ಎಸ್ಎಫ್ಐ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಬಲ ನೀಡಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಮುಖ್ಯ ಎಂದ ಹೈಕೋರ್ಟ್; ಶಿಕ್ಷಣ ಸಚಿವ ಸುರೇಶ್ ಕುಮಾರ್ಗೆ ಆನೆ ಬಲ!
(SSLC students of mahatma gandhi high scholl in chikkeruru village in hireeruru taluk unable to take sslc exam 2021 due to staff negligence)
Published On - 3:55 pm, Thu, 15 July 21