ಎಸ್​ಟಿ ನಿಗಮದ ಹಗರಣ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್

ಇಡೀ ರಾಜ್ಯದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿದ್ದ ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಸ್ಫೋಟಕ ಮಾಹಿತಿವನ್ನ ನಿಗಮ ಅಧ್ಯಕ್ಷರೇ ಬಾಯ್ಬಿಟಿದ್ದಾರೆ. ತಮ್ಮ ವಿರುದ್ಧ ಆರೋಪದ ಬಗ್ಗೆಯೂ ಸ್ಪಷ್ಟನೆ ನೀಡಿದ್ದು, ಹಗರಣದ ಕೆಲ ವಿಯಷವನ್ನು ಬಹಿರಂಗಪಡಿಸಿದ್ದಾರೆ. ಈ ಹಗರಣದಲ್ಲಿ ಅಂತರರಾಜ್ಯ ಜಾಲಗಳಿವೆ ಅನ್ನೋದರ ಬಗ್ಗೆ ಮಾಹಿತಿ ನೀಡುವ ಮೂಲಕ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ.

ಎಸ್​ಟಿ ನಿಗಮದ ಹಗರಣ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್
ಎಸ್​ಟಿ ನಿಗಮದ ಹಗರಣ: ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್​ ಬಿಚ್ಚಿಟ್ಟ ಸ್ಫೋಟಕ ಸತ್ಯ ಏನು?
Follow us
| Updated By: ಡಾ. ಭಾಸ್ಕರ ಹೆಗಡೆ

Updated on:Jun 22, 2024 | 10:35 AM

ರಾಯಚೂರು, ಜೂನ್ 21: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ  (Valmiki Development Corporation scam) ತನಿಖೆ ಚುರುಕುಗೊಂಡಿದೆ. ಒಂದು ಕಡೆ ಎಸ್​ಐಟಿ ತನಿಖೆ ನಡೆಸುತ್ತಿದ್ದರೆ, ಮತ್ತೊಂದು ಕಡೆ ಸಿಬಿಐ ಕೂಡ ಚಾರ್ಜ್ ತೆಗೆದುಕೊಂಡು ತನಿಖೆ ಕೈಗೆತ್ತಿಕೊಂಡಿದೆ. ಈಗಾಗಲೇ ಎಸ್​​ಐಟಿ ಹಲವರನ್ನ ಬಂಧಿಸಿ ವಿಚಾರಣೆ ನಡೆಸಿದ್ದು ತನಿಖೆ ಮುಂದುವರೆದಿದೆ. ಆದರೆ ಈ ಮಧ್ಯೆ ಕಾಂಗ್ರೆಸ್ ಶಾಸಕ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಸಂಗತಿ ಬಿಚ್ಚಿಟ್ಟಿದ್ದಾರೆ.

ಇಂದು ರಾಯಚೂರಿನಲ್ಲಿ ಮಾತನಾಡಿದ ಅವರು ಈ ಹಗರಣದಲ್ಲಿ ಅಂತರರಾಜ್ಯ ಜಾಲಗಳಿವೆ ಅನ್ನೋದರ ಬಗ್ಗೆ ಮಾಹಿತಿ ನೀಡುವ ಮೂಲಕ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ. ಸಿಬಿಐ ಹಾಗೂ ಎಸ್​ಐಟಿ ಜತೆ ಇಡಿ ಕೂಡ ಈ ಪ್ರಕರಣದ ತನಿಖೆ ನಡೆಸ್ತಿದೆ ಅಂತ ಹೇಳಿದ್ದಾರೆ. ಅಷ್ಟೇ ಅಲ್ಲ ದದ್ದಲ್​ ಸಹಿ ಇರೊ ಬಗ್ಗೆ ಆರೋಪಗಳು ಕೇಳಿ ಬಂದಿರೊ ಹಿನ್ನೆಲೆ ಆ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಎಸ್​ಟಿ ನಿಗಮದ ಹಗರಣ: ಚಂದ್ರಶೇಖರ್​ ಆತ್ಮಹತ್ಯೆಯಿಂದ ನಾಗೇಂದ್ರ ರಾಜೀನಾಮೆ ತನಕ ಏನೇನು ಆಯ್ತು? ಇಲ್ಲಿದೆ ವರದಿ

ಮೂರು ನಾಲ್ಕು ದಿನ ಮಾತ್ರ ಆಫೀಸ್​ಗೆ ಹೋಗಿದ್ದೆ. ಬಳಿಕ ಮಾರ್ಚ್​​ನಿಂದ ಇಲೆಕ್ಷನ್ ಮುಗೆಯೋವರೆಗೂ ಹೋಗಿಲ್ಲ. ಮಾರ್ಚ್​ನಿಂದ ಅಕ್ರಮ ಮಾಡಲಾಗ್ತಿದೆ. ಅಂತರರಾಜ್ಯಗಳು, ಜಾಲದಿಂದ ಇದನ್ನೆಲ್ಲಾ ಮಾಡಲಾಗಿದೆ. ಎಂಡಿ‌ ಸೇರಿ ಹಲವರ ಸಹಿ ಫೋರ್ಜರಿ ಮಾಡಲಾಗಿದೆ ಅಂತ ಬ್ಯಾಂಕ್​ಗಳಿಗೆ ದೂರು ನೀಡಲಾಗಿದೆ ಈ ಬಗ್ಗೆ ತನಿಖೆ ನಡೀತಿದೆ. ಇದಷ್ಟೇ ಅಲ್ಲ, ವಾಲ್ಮೀಕಿ ನಿಗಮದ ಹಗರಣದಲ್ಲಿ ಸತ್ಯ ಹೊರ ಬರತ್ತೆ, ತಪ್ಪಿತಸ್ಥರು ಯಾರೂ ಅನ್ನೋದು ತನಿಖೆ ಬಳಿಕ ಗೊತ್ತಾಗತ್ತೆ ಎಂದಿದ್ದಾರೆ.

ಸದ್ಯ ಇದೇ ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆಯಲ್ಲಿ ಹಲವರನ್ನ ಬಂಧಿಸಲಾಗಿದ್ದು, ಹಲವರ ವಿಚಾರಣೆ ನಡೆದಿದೆ. ಸಾಕಷ್ಟು ದಾಖಲೆಗಳು, ಹಣ ವರ್ಗಾವಣೆ ಸಂಬಂಧದ ಸಾಕ್ಷಗಳನ್ನೂ ಕೂಡ ತನಿಖಾ ಸಂಸ್ಥೆಗಳು ಕಲೆ ಹಾಕ್ತಿವೆ. ಆದ್ರೆ ಈ ಪ್ರಕರಣದಲ್ಲಿ ಪ್ರಭಾವಿಗಳನ್ನ ರಕ್ಷಿಸಲಾಗ್ತಿರೊ ಆರೋಪ ಕೇಳಿ ಬಂದಿದೆ. ಇದಕ್ಕೆ ದದ್ದಲ್​ ಸ್ಪಷ್ಟನೆ ನೀಡಿದ್ದು, ಇದರಲ್ಲಿ ಯಾರೂ ಏನನ್ನೂ ಮುಚ್ಚಿಡಲು ಸಾಧ್ಯವಿಲ್ಲ. ಯಾರನ್ನೂ, ಮಂತ್ರಿಗಳು, ಅಧ್ಯಕ್ಷರನ್ನ ರಕ್ಷಣೆ ಮಾಡಲು ಸಾಧ್ಯವಿಲ್ಲ.

ಇದನ್ನೂ ಓದಿ: ಸರ್ಕಾರದಿಂದ ಪರಿಹಾರ ಸಿಕ್ಕರೆ ಅದು ಸೆಕಂಡರಿ, ಮೊದಲು ನನ್ನ ಪತಿಯ ಸಾವಿಗೆ ನ್ಯಾಯ ಸಿಗಬೇಕು: ಕವಿತಾ ಚಂದ್ರಶೇಖರನ್

ಸತ್ಯವನ್ನ ತನಿಖಾ ಸಂಸ್ಥೆಗಳು ಹೊರ ತರ್ತಾರೆ. ತನಿಖೆ ಬಳಿಕ ತಪ್ಪು ಮಾಡಿರೋರ ಬಗ್ಗೆ ಎಲ್ಲರಿಗೂ ಗೊತ್ತಾಗತ್ತೆ. ನಮ್ಮ ಪ್ರೊಸಡಿಂಗ್ ಗಳಲ್ಲಿ ಫೈನಾನ್ಸ್ ವಿಚಾರ ಇರಲಿಲ್ಲ. ಫೋರ್ಜರಿ ಮೀಟಿಂಗ್ ಗಳ ಬಗ್ಗೆ ಹೇಳಲಾಗಿದೆಯಂತೆ. ಮಾರ್ಚ್30 ರಂದು ನಲ್ಲಿ ಮೀಟಿಂಗ್ ಮಾಡಲಾಗಿದೆ ಅಂತ ದಾಖಲೆಗಳನ್ನ ತೋರಿಸಲಾಗ್ತಿದೆ ಅಂತೆ.

ನನ್ನ ಪಾತ್ರ ಇದ್ರೆ ನನ್ನ ವಿರುದ್ಧವೂ ಕ್ರಮ ಆಗತ್ತೆ. ನನ್ನ ಆತ್ಮಸಾಕ್ಷಿಯಾಗಿ ನಾನು ಸಹಿ ದಾಖಲು ಮಾಡಿಲ್ಲ ಅಂತ ಹೇಳಿದ್ದಾರೆ. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವೈದ್ಯಕೀಯ ಸಚಿವ ಶರಣ ಪ್ರಕಾಶ್ ಪಾಟೀಲ್ ಕೂಡ ಪ್ರತಿಕ್ರಿಯೆ ನೀಡಿದ್ದು ಎಸ್​​ಐ ಟಿ ರಚನೆಯಾಗಿದೆ. ಈ ಬಗ್ಗೆ ಕಾನೂನಿನಡೊ ಕ್ರಮ ಆಗತ್ತೆ ಅಂತ ಹೇಳಿದ್ದಾರೆ.

ನಿತ್ಯ ವಾಲ್ಮೀಕಿ ನಿಗಮದ ಕೇಸ್​ ಹೊಸ ಹೊಸ ತಿರುವು ಪಡೆಯುತ್ತಿದ್ದು ತನಿಖೆಯಲ್ಲಿ ಯಾವೆಲ್ಲಾ ಸತ್ಯ ಹೊರಬರತ್ತೆ. ಯಾರೆಲ್ಲಾ ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಅನ್ನೋದು ಗೊತ್ತಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:34 pm, Fri, 21 June 24

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ