ಸಿದ್ದರಾಮಯ್ಯರನ್ನ ನೀವೇ ನಮ್ಮ ನಾಯಕರು ಎಂದ SBM ಟೀಂ

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಎಸ್​ಬಿಎಂ ಟೀಂ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಇನ್ನು ಎಸ್​ಬಿಎಂ ಟೀಂ ಕಂಡು ಸಿದ್ದರಾಮಯ್ಯ ಸಹ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ಎಸ್​ಬಿಎಂ ಟೀಂ ಸೇರಿದಂತೆ 17 ಶಾಸಕರು ರಾಜೀನಾಮೆ ನೀಡಿದ್ದರು. ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಇದೀಗ ಸಿದ್ದರಾಮಯ್ಯ ‘ಏನ್ರಯ್ಯಾ ಎಸ್​ಬಿಎಂ ಒಟ್ಟಿಗೆ ಬಂದಿದ್ದೀರಲ್ಲ ಎಂದರು. ಈ ವೇಳೆ ನೀವೇ ನಮ್ಮ ನಾಯಕರು ಸಾರ್ […]

ಸಿದ್ದರಾಮಯ್ಯರನ್ನ ನೀವೇ ನಮ್ಮ ನಾಯಕರು ಎಂದ SBM ಟೀಂ
ಸಾಧು ಶ್ರೀನಾಥ್​

Updated on: Dec 14, 2019 | 2:48 PM

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಎಸ್​ಬಿಎಂ ಟೀಂ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಇನ್ನು ಎಸ್​ಬಿಎಂ ಟೀಂ ಕಂಡು ಸಿದ್ದರಾಮಯ್ಯ ಸಹ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಮೈತ್ರಿ ಸರ್ಕಾರದ ಅವಧಿಯಲ್ಲಿ ಎಸ್​ಬಿಎಂ ಟೀಂ ಸೇರಿದಂತೆ 17 ಶಾಸಕರು ರಾಜೀನಾಮೆ ನೀಡಿದ್ದರು. ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಇದೀಗ ಸಿದ್ದರಾಮಯ್ಯ ‘ಏನ್ರಯ್ಯಾ ಎಸ್​ಬಿಎಂ ಒಟ್ಟಿಗೆ ಬಂದಿದ್ದೀರಲ್ಲ ಎಂದರು. ಈ ವೇಳೆ ನೀವೇ ನಮ್ಮ ನಾಯಕರು ಸಾರ್ ಎಂದು ಮುನಿರತ್ನ, ಭೈರತಿ ಬಸವರಾಜ್ ಮತ್ತು ಎಸ್​.ಟಿ.ಸೋಮಶೇಖರ್ ಉತ್ತರಿಸಿದ್ದಾರೆ. ಯಾವಾಗಂತೆ ಮಂತ್ರಿ ಮಾಡೋದು ಎಂದ ಸಿದ್ದರಾಮಯ್ಯ, ಯಡಿಯೂರಪ್ಪ ನಿಮ್ಮನ್ನ ಮಂತ್ರಿ ಮಾಡ್ತಾರೆ ಬಿಡಿ ಎಂದಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us