Betta Kuruba: ಕರ್ನಾಟಕದ ಬೆಟ್ಟ ಕುರುಬ ಜನಾಂಗವನ್ನ ಎಸ್.ಟಿ. ಸಮುದಾಯಕ್ಕೆ ಸೇರಿಸಿದ ಕೇಂದ್ರ ಸಂಪುಟ -ಪ್ರಲ್ಹಾದ್ ಜೋಶಿ ಸಂತಸ
Scheduled Tribe Community: ಕರ್ನಾಟಕದ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳ ಅಂಚಿನಲ್ಲಿ ಬೆಟ್ಟ ಕುರುಬ ಜನಾಂಗ ನೆಲೆಸಿತ್ತು. ಕಾರಣಾಂತರಗಳಿಂದ ಈ ಜನಾಂಗದವರನ್ನು ಒಕ್ಕಲೆಬ್ಬಿಸಲಾಗಿತ್ತು. ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸುವಂತೆ ಈ ಜನಾಂಗದವರು ಕಳೆದ 30 ವರ್ಷಗಳಿಂದ ಹೋರಾಡುತ್ತಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ವಿಚಾರವಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಕರ್ನಾಟಕದ ಬೆಟ್ಟ ಕುರುಬ ಜನಾಂಗಕ್ಕೆ ( Betta Kuruba or Kadu Kuruba) ಸೇರಿದ 12 ಜಾತಿಗಳನ್ನ ಎಸ್.ಟಿ ಸಮುದಾಯದ ಪಟ್ಟಿಗೆ (Scheduled Tribe Community) ಸೇರ್ಪಡೆಗೊಳಿಸಲಾಗಿದೆ. ಕರ್ನಾಟಕ ಸರ್ಕಾರ ಮಾಡಿದ ಶಿಫಾರಸ್ಸನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಈ ಕುರಿತಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಕರ್ನಾಟಕದ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳ ಅಂಚಿನಲ್ಲಿ ಬೆಟ್ಟ ಕುರುಬ ಜನಾಂಗ ನೆಲೆಸಿತ್ತು. ಕಾರಣಾಂತರಗಳಿಂದ ಈ ಜನಾಂಗದವರನ್ನು ಒಕ್ಕಲೆಬ್ಬಿಸಲಾಗಿತ್ತು. ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸುವಂತೆ ಈ ಜನಾಂಗದವರು ಕಳೆದ 30 ವರ್ಷಗಳಿಂದ ಹೋರಾಡುತ್ತಿದ್ದರು.
ಕರ್ನಾಟಕದ ಮಲೆ ಮಹದೇಶ್ವರ ಬೆಟ್ಟದಲ್ಲಿ ಹಾಗೂ ಸುತ್ತಮುತ್ತಲಿನ ಬೆಟ್ಟಗಳಲ್ಲಿ ಬೆಟ್ಟ ಕುರುಬರು ವಾಸಿಸುತ್ತಿದ್ದರು. ಇವರನ್ನ ಕಾಡು ಕುರುಬರು ಎಂದು ಕರೆಯಲಾಗುತ್ತಿತ್ತು. ನಂತರದಲ್ಲಿ ಬೆಟ್ಟ ಕುರುಬರು ಎಂದು ಕರೆಯಲಾಗುತ್ತಿತ್ತು. ಇದೀಗ ಈ ಸಮುದಾಯಕ್ಕೆ ಸೇರಿದ 12 ಉಪ ಜಾತಿಗಳನ್ನು ಎಸ್.ಟಿ ಸಮುದಾಯಕ್ಕೆ ಸೇರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಪ್ರಧಾನಿ ಶ್ರೀ @narendramodi ಜೀ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಬೆಟ್ಟ ಕುರುಬ ಜನಾಂಗ ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. #CabinetDecisions pic.twitter.com/GWnvZw7E8l
— Pralhad Joshi (@JoshiPralhad) September 14, 2022
ಕರ್ನಾಟಕದ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳ ಅಂಚಿನಲ್ಲಿ ಬೆಟ್ಟ ಕುರುಬ ಜನಾಂಗ ನೆಲೆಸಿತ್ತು. ಕಾರಣಾಂತರಗಳಿಂದ ಈ ಜನಾಂಗದವರನ್ನು ಒಕ್ಕಲೆಬ್ಬಿಸಲಾಗಿತ್ತು. ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸುವಂತೆ ಈ ಜನಾಂಗದವರು ಕಳೆದ 30 ವರ್ಷಗಳಿಂದ ಹೋರಾಡುತ್ತಿದ್ದರು.
— Pralhad Joshi (@JoshiPralhad) September 14, 2022