ಕೌಟುಂಬಿಕ ಕಲಹ: ಮೂವರಿಗೆ ಚಾಕುವಿನಿಂದ ಇರಿದು ಆರೋಪಿ ಪರಾರಿ

| Updated By: ಆಯೇಷಾ ಬಾನು

Updated on: Dec 29, 2020 | 8:30 AM

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮೂವರಿಗೆ ಚೂರಿಯಿಂದ ಚುಚ್ಚಿ ಆರೋಪಿ ಪರಾರಿಯಾಗಿದ್ದಾನೆ. ಪೊಲೀಸರು ವಿಶೇಷ ತಂಡದೊಂದಿಗೆ ಆರೋಪಿಯ ಪತ್ತೆ ಹಚ್ಚುವಿಕೆಗೆ ತನಿಖೆ ನಡೆಸುತ್ತಿದ್ದಾರೆ.

ಕೌಟುಂಬಿಕ ಕಲಹ: ಮೂವರಿಗೆ ಚಾಕುವಿನಿಂದ ಇರಿದು ಆರೋಪಿ ಪರಾರಿ
ಪರಾರಿಯಾದ ರಾಮ್​ದಾಸ್​
Follow us on

ಕೊಡಗು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮೂವರಿಗೆ ಚಾಕುವಿನಿಂದ ಚುಚ್ಚಿ ಆರೋಪಿ ಪರಾರಿಯಾಗಿರುವ ಘಟನೆ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ವಿಲ್ಸನ್(45), ಸ್ಟೀವನ್(28) ಹಾಗೂ 17 ವರ್ಷದ ಯುವತಿ ಚಾಕು ಇರಿತಕ್ಕೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.

ಕುಟುಂಬದ ವಿಚಾರಕ್ಕೆ ಶುರುವಾದ ಜಗಳ ತಾರಕಕ್ಕೆ ಏರಿದೆ. ಬಳಿಕ ರೊಚ್ಚಿಗೆದ್ದ  ರಾಮ್​ದಾಸ್​ ಎಂಬಾತ ಮೂವರಿಗೆ ಚಾಕುವಿನಿಂದ ಚುಚ್ಚಿ ಪರಾರಿಯಾಗಿದ್ದಾನೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆಗಾಗಿ ಮೊದಲು ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಿದ್ದು  ನಂತರ ಮಡಿಕೇರಿ ಆಸ್ಪತ್ರೆಗೆ ರವಾನಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಶೇಷ ಪೊಲೀಸ್ ತಂಡ ರಚನೆಯಾಗಿದ್ದು, ಪರಾರಿಯಾಗಿರುವ ರಾಮ್​ದಾಸ್​ನನ್ನು ಪತ್ತೆ ಹಚ್ಚಲು ತನಿಖೆ ನಡೆಯುತ್ತಿದೆ.



ಸಂಬಂಧಿಕನಿಂದಲೇ ಮಹಿಳೆಯ ಭೀಕರ ಕೊಲೆ, ಚಾಕುವಿನಿಂದ ಇರಿದು ಎಸ್ಕೇಪ್ ಆದ..