ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಚೂರಿ ಇರಿತ ಕೇಸ್​: ಐವರ ಬಂಧನ

| Updated By: ಗಂಗಾಧರ​ ಬ. ಸಾಬೋಜಿ

Updated on: Jun 10, 2024 | 8:54 PM

ನಿನ್ನೆ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುತ್ತಿದ್ದ ಹಿನ್ನಲೆಯಲ್ಲಿ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರ ಸಂತೋಷ ಮುಗಿಲುಮುಟ್ಟಿತ್ತು. ಆದರೆ ಈ ವೇಳೆ ಮಂಗಳೂರಿನಲ್ಲಿ ಇಬ್ಬರಿಗೆ ಚೂರಿಯಾಗಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಣಾಜೆ‌ ಠಾಣೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಭಾರತ್ ಮಾತಕೀ ಜೈ ಘೋಷಣೆ ಕೂಗಿದ ವಿಚಾರಕ್ಕೆ ಚೂರಿ ಇರಿಯಲಾಗಿತ್ತು.

ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಚೂರಿ ಇರಿತ ಕೇಸ್​: ಐವರ ಬಂಧನ
ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಚೂರಿ ಇರಿತ ಕೇಸ್​: ಐವರ ಬಂಧನ
Follow us on

ಮಂಗಳೂರು, ಜೂನ್​​ 10: ಬಿಜೆಪಿ (BJP) ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ (Stabbing) ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕೊಣಾಜೆ‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಾಕೀರ್(28), ಅಬ್ದುಲ್ ರಜಾಕ್(40), ಅಬೂಬಕ್ಕರ್ ಸಿದ್ದಿಕ್(35), ಸವಾದ್(18), ಹಫೀಝ್(24) ಬಂಧಿತರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರ್ ಎಂಬಲ್ಲಿ ನಿನ್ನೆ ರಾತ್ರಿ ಭಾರತ್ ಮಾತಕೀ ಜೈ ಘೋಷಣೆ ಕೂಗಿದ ವಿಚಾರಕ್ಕೆ ಚೂರಿ ಇರಿಯಲಾಗಿತ್ತು. ಹರೀಶ್ ಮತ್ತು ನಂದ ಕುಮಾರ್ ಚೂರಿ ಇರಿತಕ್ಕೆ ಒಳಗಾದವರು.

ಮಸೀದಿ ಮುಂದೆ ಪ್ರಚೋದನಕಾರಿ ಘೋಷಣೆ ಕೂಗಿದ ಆರೋಪ: ದೂರು

ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣ ದಾಖಲಾಗಿದೆ. ಮಸೀದಿ ಮುಂದೆ ಪ್ರಚೋದನಕಾರಿ ಘೋಷಣೆ ಕೂಗಿದಾರೆಂದು‌ ಬೋಳಿಯಾರ್ ಜುಮ್ಮಾ ಮಸೀದಿ ಅಧ್ಯಕ್ಷ ಪಿ.ಕೆ.ಅಬ್ದುಲ್ಲಾ ರಿಂದ ಪೊಲೀಸ್ ದೂರು ನೀಡಲಾಗಿದೆ. ಮಸೀದಿಯ ಹೊರಗೆ ನಿಂತಿದ್ದ ಜನರನ್ನು ನಿಂದಿಸಿದ ಆರೋಪ ಕೂಡ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರ್ ಎಂಬಲ್ಲಿ ನಿನ್ನೆ ನಡೆದಿದ್ದ ಘಟನೆ ನಡೆದಿದೆ.

ಇದನ್ನೂ ಓದಿ: ಮಂಗಳೂರು: ಬಿಜೆಪಿ ವಿಜಯೋತ್ಸವ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರಿಗೆ ಚಾಕು ಇರಿತ, ಮೂವರು ವಶಕ್ಕೆ

ದೂರಿನ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡ ಕೊಣಾಜೆ ಠಾಣೆ ಪೊಲೀಸರು, ಆರೋಪಿಗಳಾದ ಸುರೇಶ್, ವಿನಯ್, ಸುಭಾಷ್, ರಂಜಿತ್, ಧನಂಜಯ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

ಕಾನೂನು ಕೈಗೆ ತೆಗೆದುಕೊಂಡಾಗ ಕ್ಷಮೆ ಇಲ್ಲ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದು, ಕಾನೂನು ಪ್ರಕಾರ ಕ್ರಮವಾಗುತ್ತಿರುವಾಗ ನಮ್ಮ ಹಸ್ತಕ್ಷೇಪವಿಲ್ಲ. ಈಗಾಗಲೇ ಮೂರ್ನಾಲ್ಕು ಜನರನ್ನು ಪೊಲೀಸರು ಬಂಧಿಸಿದ್ದಾರೆ. ನಿಷ್ಪಕ್ಷಪಾತವಾಗಿ ಕ್ರಮವಾಗುತ್ತೆ, ಇದರಲ್ಲಿ ರಾಜಕೀಯ ಹಸ್ತಕ್ಷೇಪವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಭಾರತ್ ಮಾತಾ ಕೀ ಜೈ ಎಂದವರ ಮೇಲೆ ದಾಳಿ, ಚೂರಿ ಇರಿತ; ಸಿಸಿಟಿವಿ ದೃಶ್ಯ ಇಲ್ಲಿದೆ

ಕಾನೂನು ಕೈಗೆ ತೆಗೆದುಕೊಂಡಾಗ ಕ್ಷಮಿಸುವುದಕ್ಕೆ ಆಗುವುದಿಲ್ಲ. ಕಾನೂನು ಕೈಗೆ ತೆಗೆದುಕೊಂಡವರ ಮೇಲೆ ಕಾನೂನು ಕ್ರಮ ಆಗಬೇಕು. ಇಂತಹ ಘಟನೆ ಆದಾಗ ಸರ್ಕಾರ ರಾಜಕಾರಣಿಗಳು ತಟಸ್ಥವಾಗಿರಬೇಕು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:40 pm, Mon, 10 June 24