ಶಿವಮೊಗ್ಗದಿಂದ ಹೈದರಾಬಾದ್ಗೆ ತೆರಳಬೇಕಿದ್ದ ಸ್ಟಾರ್ ಏರ್ಲೈನ್ಸ್ ವಿಮಾನ ಹಾರಾಟ ರದ್ದು; ಪ್ರಯಾಣಿಕರ ಆಕ್ರೋಶ
ಶಿವಮೊಗ್ಗದಿಂದ ಹೈದರಾಬಾದ್ಗೆ ತೆರಳಬೇಕಿದ್ದ ಸ್ಟಾರ್ ಏರ್ಲೈನ್ಸ್ ವಿಮಾನ ಹಾರಾಟ ರದ್ದುಗೊಳಿಸಲಾಗಿದೆ. ಹವಾಮಾನ ವೈಪರೀತ್ಯ ಹಿನ್ನೆಲೆ ವಿಮಾನ ಹಾರಾಟ ರದ್ದುಗೊಳಿಸಲಾಗಿದೆ. ಅದರಂತೆ, ಹೈದರಾಬಾದ್ಗೆ ತೆರಳಲು ಆಗದೆ 70 ಪ್ರಯಾಣಿಕರು ಪರದಾಟ ನಡೆಸಿದರು. ಪ್ರಯಾಣಿಕರಿಗೆ ಯಾವುದೇ ವ್ಯವಸ್ಥೆ ಮಾಡದಿರುವ ಕಾರಣಕ್ಕೆ ವಿಮಾನ ಸಂಸ್ಥೆ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.
ಶಿವಮೊಗ್ಗ, ಡಿ.9: ಹವಾಮಾನ ವೈಪರೀತ್ಯ ಹಿನ್ನೆಲೆ ಜಿಲ್ಲೆಯಿಂದ ಹೈದರಾಬಾದ್ಗೆ (Shivamogga To Hyderabad) ತೆರಳಬೇಕಿದ್ದ ಸ್ಟಾರ್ ಏರ್ಲೈನ್ಸ್ (Star Airlines) ವಿಮಾನ ಹಾರಾಟ ರದ್ದುಗೊಳಿಸಲಾಗಿದೆ. ಸಂಜೆ 4.30ಕ್ಕೆ ಶಿವಮೊಗ್ಗದಿಂದ ಹೈದರಾಬಾದ್ಗೆ ಈ ವಿಮಾನ ತೆರಳಬೇಕಿತ್ತು.
ಶಿವಮೊಗ್ಗದಿಂದ ಹೈದರಾಬಾದ್ಗೆ ಸ್ಟಾರ್ ಏರ್ಲೈನ್ಸ್ ವಿಮಾನದಲ್ಲಿ ಸುಮಾರು 70 ಪ್ರಯಾಣಿಕರು ಪ್ರಯಾಣ ಕೈಗೊಳ್ಳಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಹಾರಾಟ ರದ್ದುಗೊಂಡ ಹಿನ್ನೆಲೆ ಕಳೆದ 3 ಗಂಟೆಯಿಂದ ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರು ಪರದಾಟ ನಡೆಸಿದರು. ವಿಮಾನ ಹಾರಾಟಕ್ಕಾಗಿ ಕಾದು ಸುಸ್ತಾದರು.
ಇದನ್ನೂ ಓದಿ: IND vs SA: ಹರಿಣಗಳ ಬೇಟೆಯಾಡಲು ಬೆಂಗಳೂರಿನಿಂದ ವಿಮಾನ ಹತ್ತಿದ ಟೀಂ ಇಂಡಿಯಾ
ಸ್ಟಾರ್ ಏರ್ ಲೈನ್ಸ್ನಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ವಿಮಾನದಲ್ಲಿ ಕುಳಿತಿದ್ದ ಪ್ರಯಾಣಿಕರು ವಾಪಸ್ ಆದರು. ಅಲ್ಲದೆ, ಯಾವುದೇ ವ್ಯವಸ್ಥೆ ಮಾಡದ ವಿಮಾನ ಸಂಸ್ಥೆ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:26 pm, Sat, 9 December 23