ಪರೀಕ್ಷೆ ನಡೆಯದಿದ್ದರೂ ಮುಂದಿನ ಸೆಮಿಸ್ಟರ್‌ಗೆ ಆನ್‌ಲೈನ್ ಕ್ಲಾಸ್ ಆರಂಭಿಸಿ; ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಸೂಚನೆ
UG and PG Classes in Karnataka: ಕೆಲವು ಕೋರ್ಸ್ಗಳ1, 3, 5 ಮತ್ತು 7 ಸೆಮಿಸ್ಟರ್ ಪರೀಕ್ಷೆ ಇನ್ನೂ ಪೂರ್ಣಗೊಂಡಿಲ್ಲ. ಆದರೂ 2,4,6 ಮತ್ತು 8ನೇ ಸೆಮಿಸ್ಟರ್ನ ತರಗತಿಗಳನ್ನು ಆನ್‌ಲೈನ್ ಮೂಲಕ ಆರಂಭಿಸಲು ಸೂಚನೆ ನೀಡಲಾಗಿದೆ.
ಬೆಂಗಳೂರು: ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಕೊವಿಡ್ ಮತ್ತು ಲಾಕ್ಡೌನ್ನಿಂದ ಪರೀಕ್ಷೆಗಳು ನಡೆಯುವುದು ತಡವಾದರೂ ಆನ್‌ಲೈನ್ ಕ್ಲಾಸ್ ಮುಂದುವರೆಸಬೇಕು, ಮುಂದಿನ ಸೆಮಿಸ್ಟರ್‌ಗೆ ಆನ್‌ಲೈನ್ ಕ್ಲಾಸ್ ಶುರುಮಾಡಬೇಕು ಎಂದು ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಸೂಚಿಸಿದ್ದಾರೆ. ಈ ಬೆನ್ನಲ್ಲೇ ಉನ್ನತ ಶಿಕ್ಷಣ ಇಲಾಖೆ ವಿಶ್ವವಿದ್ಯಾಲಯಗಳಿಗೆ ಸುತ್ತೋಲೆ ನೀಡಿದೆ. ಪ್ರಸಕ್ತ ಸಾಲಿನ ಪರೀಕ್ಷೆ ನಡೆಯದಿದ್ದರೂ ಮುಂದಿನ ಸೆಮಿಸ್ಟರ್ ಪ್ರಾರಂಭಿಸುವಂತೆ ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ.
ಕೆಲವು ಕೋರ್ಸ್ಗಳ1, 3, 5 ಮತ್ತು 7 ಸೆಮಿಸ್ಟರ್ ಪರೀಕ್ಷೆ ಇನ್ನೂ ಪೂರ್ಣಗೊಂಡಿಲ್ಲ. ಆದರೂ 2,4,6 ಮತ್ತು 8ನೇ ಸೆಮಿಸ್ಟರ್ನ ತರಗತಿಗಳನ್ನು ಆನ್‌ಲೈನ್ ಮೂಲಕ ಆರಂಭಿಸಬೇಕು. ಇಂಜಿನಿಯರಿಂಗ್ ಹಾಗೂ ಕೆಲವು ವೃತ್ತಿಪರ ಕೋರ್ಸ್‌ಗಳಲ್ಲಿ ಮುಂದಿನ ಸೆಮಿಸ್ಟರ್‌ಗೆ ಹೋಗಲು ಕ್ಯಾರಿ ಓವರ್ ಪದ್ಧತಿ ಅನ್ವಯವಾಗುವುದಿಲ್ಲ. ಇವುಗಳ ಬಗ್ಗೆ ಕುಲಪತಿಗಳು ಹಾಗೂ ಪ್ರಾಂಶುಪಾಲರು ಉನ್ನತ ಶಿಕ್ಷಣ ಪರಿಷತ್ತಿನ ಜತೆ ಚರ್ಚಿಸಿ ನಿರ್ಧಾರಕ್ಕೆ ಸೂಚನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು.
ಈಗಾಗಲೇ ಮುಂದೂಡಲ್ಪಟ್ಟಿದೆ ಎಸ್ಎಸ್ಎಲ್ಸಿ ಪರೀಕ್ಷೆ ಜೂನ್ 21ರಿಂದ ಪ್ರಾರಂಭವಾಗಬೇಕಿದ್ದ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಮುಂದೂಡಿದ್ದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮೇ 13ರಂದು ತಿಳಿಸಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ಮುಂದೆ ಯಾವಾಗ ನಡೆಯುತ್ತದೆ ಎಂದು ಇನ್ನೂ ದಿನಾಂಕವನ್ನು ಪ್ರಕಟಿಸಿಲ್ಲ. ಅನಿರ್ದಿಷ್ಟಾವಧಿವರೆಗೆ ಮುಂದೂಡಲಾಗಿದ್ದು, ನಂತರದ ದಿನಗಳಲ್ಲಿ ಹೊಸ ದಿನಾಂಕ ತಿಳಿಸುವುದಾಗಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು, ಶಾಲಾ ಸಂಘಟನೆಗಳು, ಶಿಕ್ಷಕರು, ಪಾಲಕರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾಗಿ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಇನ್ನು ಕೊರೊನಾ ಹಿನ್ನೆಲೆಯಲ್ಲಿ ದೇಶಾದ್ಯಂತ ಬಹುತೇಕ ಎಲ್ಲ ರೀತಿಯ ಆಫ್ಲೈನ್ ಪರೀಕ್ಷೆಗಳನ್ನೂ ಮುಂದೂಡಲಾಗುತ್ತಿದೆ.
ಇದನ್ನೂ ಓದಿ: ಕೊವಿಡ್ ಔಷಧಿಗಳಿಗೆ ಉಚ್ಚರಿಸಲು ಅಸಾಧ್ಯವಾದ ಹೆಸರು ಇಟ್ಟದ್ದು ಶಶಿ ತರೂರ್ ಆಗಿರಬಹುದೇ; ತೆಲಂಗಾಣ ಸಚಿವ ಕೆಟಿಆರ್ ಪ್ರಶ್ನೆ
Karnataka Lockdown: ಕರ್ನಾಟಕದಲ್ಲಿ ಜೂನ್ 7ರ ಬೆಳಗ್ಗೆ 6ಗಂಟೆಯವರೆಗೂ ಲಾಕ್ಡೌನ್ ವಿಸ್ತರಣೆ; ಸಿಎಂ ಯಡಿಯೂರಪ್ಪ ಘೋಷಣೆ (Start online class for the next semester for UG and PG even if the exam is not done direct Higher Education Minister Dr Ashwath Narayan)