ಬೆಳಗಾವಿ-ಹುಬ್ಬಳ್ಳಿ ಮಧ್ಯದಲ್ಲಿ 100 ಎಕರೆಯಲ್ಲಿ ಸ್ಟಾರ್ಟ್ ಅಪ್ ಪಾರ್ಕ್: ಸಚಿವ ಎಂಬಿ ಪಾಟೀಲ್
ಬೆಳಗಾವಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಬೆಳಗಾವಿ ಹಾಗೂ ಹುಬ್ಬಳ್ಳಿ ಮಧ್ಯದಲ್ಲಿ ನೂರು ಎಕರೆ ಪ್ರದೇಶದಲ್ಲಿ ಸ್ಟಾರ್ಟ್ ಅಪ್ ಪಾರ್ಕ್ ಮಾಡುತ್ತೇವೆ. ಇದು ಯುವ ಉದ್ಯಮಿಗಳಿಗೆ ಅನಕೂಲ ಆಗುವ ಯೋಜನೆ ಎಂದು ಹೇಳಿದ್ದಾರೆ. ಹುಬ್ಬಳ್ಳಿ ಹಾಗೂ ಬೆಳಗಾವಿ ನೇರ ರೈಲು ಮಾರ್ಗಕ್ಕೆ ಅಲೈನ್ ಮೆಂಟ್ ಸಮಸ್ಯೆ ಇವೆ ಎಂದಿದ್ದಾರೆ.
ಬೆಳಗಾವಿ, ಆಗಸ್ಟ್ 30: ಬೆಳಗಾವಿ ಹಾಗೂ ಹುಬ್ಬಳ್ಳಿ ಮಧ್ಯದಲ್ಲಿ ನೂರು ಎಕರೆ ಪ್ರದೇಶದಲ್ಲಿ ಸ್ಟಾರ್ಟ್ ಅಪ್ ಪಾರ್ಕ್ ಮಾಡುತ್ತೇವೆ ಎಂದು ಸಚಿವ ಎಂ.ಬಿ ಪಾಟೀಲ್ (M. B. Patil) ಹೇಳಿದ್ದಾರೆ. ನಗರದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಗೋವಾ ಹೆದ್ದಾರೆ ಮೇಲೆ ಫೌಂಡ್ರಿ ಪಾರ್ಕ್ ಮಾಡುತ್ತೇವೆ. ಬೆಂಗಳೂರಿನಲ್ಲಿ ಸ್ಟಾರ್ಟ್ ಅಪ್ ರಾಜಧಾನಿಯಾಗಿ ಗುರುಸಿಕೊಂಡಿದೆ. ಅಲ್ಲಿ ಕೂಡ ಸ್ಟಾರ್ಟ್ ಅಪ್ ಪಾರ್ಕ್ ಮಾಡುತ್ತೇವೆ. ಯುವ ಉದ್ಯಮಿಗಳಿಗೆ ಈ ಯೋಜನೆ ಅನಕೂಲವಾಗಲಿದೆ ಎಂದು ಹೇಳಿದ್ದಾರೆ.
ಬೆಳಗಾವಿ, ಹುಬ್ಬಳ್ಳಿ ಮಧ್ಯದಲ್ಲಿ ಇಂಡಸ್ಟ್ರಿಯಲ್ ಪಾರ್ಕ್ ವಿಚಾರವಾಗಿ ಮಾತನಾಡಿದ ಅವರು, ಕಿತ್ತೂರು ಬಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಬೇಕಿತ್ತು. ಬೆಳಗಾವಿ, ಹುಬ್ಬಳ್ಳಿ ವಿಮಾನ ನಿಲ್ದಾಣ ಮೇಲ್ದರ್ಜೆಗೆ ಏರಿದ್ದರಿಂದ ಇದು ಸಾಧ್ಯವಾಗಿಲ್ಲ. ಬೆಳಗಾವಿ- ಹುಬ್ಬಳ್ಳಿ ನಡುವೆ ಇಂಡಸ್ಟ್ರಿಯಲ್ ಕಾರಿಡಾರ್ ಮಾಡಲು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರಯತ್ನ ಸಹ ಮಾಡಲಿದೆ ಎಂದಿದ್ದಾರೆ.
ಹುಬ್ಬಳ್ಳಿ ಹಾಗೂ ಬೆಳಗಾವಿ ನೇರ ರೈಲು ಮಾರ್ಗಕ್ಕೆ ಅಲೈನ್ ಮೆಂಟ್ ಸಮಸ್ಯೆ
ಹುಬ್ಬಳ್ಳಿ ಹಾಗೂ ಬೆಳಗಾವಿ ನೇರ ರೈಲು ಮಾರ್ಗ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಅಲೈನ್ ಮೆಂಟ್ ಸಮಸ್ಯೆ ಇವೆ. ನಾಲ್ಕೈದು ದಿನಗಳ ಹಿಂದೆ ಸಭೆ ಮಾಡಿದ್ದೇನೆ. ಸೂಕ್ತ ತಾಂತ್ರಿಕ ಕ್ರಮ ವಹಿಸಲು ಸೂಚನೆ ನೀಡಲಾಗಿದೆ. ಬೆಳಗಾವಿ ಹಾಗೂ ಬೆಂಗಳೂರಿನ ರೈಲು ಪ್ರಯಾಣದ ಅಂತರ ಐದು ಗಂಟೆ ಕಡಿಮೆಯಾಲಿದೆ. ಸಂಬಂಧಿಸಿದ ಹಾಗೂ ಶಾಸಕರು, ಸಚಿವರ ಜೊತೆಗೆ ಮಾತನಾಡಿದ್ದೇನೆ. ಅಲೈನ್ ಮೆಂಟ್ ಬದಲಾವಣೆಗೆ ರೈಲು ಇಲಾಖೆ ಒಪ್ಪಲ್ಲ ಎಂದು ತಿಳಿಸಿದ್ದಾರೆ.
ನಾನೇ ಸ್ವಯಂ ಘೋಷಿತ ಸಿಎಂ ಆಗಲು ಸಾಧ್ಯವಿಲ್ಲ
ಎಂಬಿ ಪಾಟೀಲ್ ಯಾವಾಗ ಸಿಎಂ ಆಗುತ್ತಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು, ನಮ್ಮಗೆ ಆಸೆ ಇದೆ, ದುರಾಸೆ ಇಲ್ಲ. ಸಿಎಂ ಆಗಬೇಕು ಅಂದರೆ ಪಕ್ಷ, ಶಾಸಕರು ಒಪ್ಪಬೇಕು. ನಾನೇ ಸ್ವಯಂ ಘೋಷಿತ ಸಿಎಂ ಆಗಲು ಸಾಧ್ಯವಿಲ್ಲ. ಪಕ್ಷದಲ್ಲಿ ಯಾರು ದುರಾಸೆ ಪಡುತ್ತಿಲ್ಲ. ಎಲ್ಲಾ ಸಚಿವರು, ಶಾಸಕರು ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಭೂಮಿ ಹಂಚಿದ್ದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಎಂಬಿ ಪಾಟೀಲ್
ಚನ್ನಪಟ್ಟಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ನಾನೇ ಎಂಬ ಡಿಕೆಶಿ ಹೇಳಿಕೆ ವಿಚಾರವಾಗಿ ಮಾತನಾಡಿದ್ದು, ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆಗೆ ಒಂದು ನಿಯಮ ಇದೆ. ಹೈಕಮಾಂಡ್ ಅಭ್ಯರ್ಥಿಯನ್ನ ಆಯ್ಕೆ ಮಾಡುತ್ತೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಹೆಸರು ಸಹ ಪರಿಗಣಿಸಲಾಗುವುದು ಎಂದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:51 pm, Fri, 30 August 24