AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಯೂಟ ಯೋಜನೆ: ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ 212 ಕೋಟಿ ರೂ. ಹಣ ಬಿಡುಗಡೆ

ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದ ಯೋಜನೆಗೆ ಕೇಂದ್ರ ಸರ್ಕಾರದಿಂದ 131 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 81 ಕೋಟಿ ರೂ. ಒಟ್ಟು 212 ಕೋಟಿ ರೂ. ಹಣವನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. 

ಬಿಸಿಯೂಟ ಯೋಜನೆ: ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ 212 ಕೋಟಿ ರೂ. ಹಣ ಬಿಡುಗಡೆ
ಪ್ರಾತಿನಿಧಿಕ ಚಿತ್ರ
ಪ್ರಸನ್ನ ಗಾಂವ್ಕರ್​
| Edited By: |

Updated on:Oct 18, 2023 | 6:31 PM

Share

ಬೆಂಗಳೂರು, ಅಕ್ಟೋಬರ್​​ 18: ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದ ಯೋಜನೆ (Midday Meal Scheme) ಗೆ ಕೇಂದ್ರ ಸರ್ಕಾರದಿಂದ 131 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 81 ಕೋಟಿ ರೂ. ಒಟ್ಟು 212 ಕೋಟಿ ರೂ. ಹಣವನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಸದ್ಯ ಬಿಡುಗಡೆ ಮಾಡಲಾಗಿರುವ ಅನುದಾನಕ್ಕೆ ವೆಚ್ಚ ಭರಿಸಲು ಆಯುಕ್ತರು ಶಾಲಾ ಶಿಕ್ಷಣ ಇಲಾಖೆ, ಸಂಬಂಧಿಸಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮತ್ತು ಮುಖ್ಯ ಲೆಕ್ಕಾಧಿಕಾರಿಗಳಿಗೆ ಅನುಮತಿ ನೀಡಲಾಗಿದೆ.

ಈ ಆದೇಶದಲ್ಲಿ ಬಿಡುಗಡೆ ಮಾಡಲಾಗಿರುವ ಅನುದಾನವನ್ನು 1-8ನೇ ತರಗತಿ ಮಧ್ಯಾಹ್ನ ಉಪಹಾರ ಯೋಜನೆಯನ್ನು ಅನುಷ್ಠಾನ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಯಂತೆ ನಿಗದಿತ ಉದ್ದೇಶಗಳಿಗೆ ಮಾತ್ರ ವೆಚ್ಚ ಭರಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಯುಜಿಸಿ ಮಾಜಿ ಅಧ್ಯಕ್ಷ ಪ್ರೊ.ಸುಖದೇವ್ ತೋರಟ್‌ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗ ರಚನೆ: ಸರ್ಕಾರ ಆದೇಶ

ಬಿಡುಗಡೆ ಮಾಡಲಾಗಿರುವ ಅನುದಾನವನ್ನು ಖಜಾನೆ-2 PFMS ತಂತ್ರಾಂಶದ ಮೂಲಕ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯಿಂದ ನೀಡಲಾಗಿರುವ ಮಾರ್ಗಸೂಚಿಯಂತೆ ಅನುಷ್ಠಾನ ಮಾಡಲಾಗಿದೆ.

ಬಿಸಿಯೂಟದ ಅನುದಾನವನ್ನು ಪ್ರಧಾನ ಮಂತ್ರಿ ಪೋಷಣೆ ಶಕ್ತಿ ನಿರ್ಮಾಣ ಯೋಜನೆಯ (ಮಧ್ಯಾಹ್ನ ಉಪಹಾರ ಯೋಜನೆ) Singal Nodal Agency ಖಾತೆಗೆ ಜಮಾ ಮಾಡಿಕೊಂಡು ನಿಯಮಾನುಸಾರ ವೆಚ್ಚ ಭರಿಸುವಂತೆ ತಿಳಿಸಲಾಗಿದೆ.

ಇದನ್ನೂ ಓದಿ: 5 ಸ್ಟಾರ್ ಗ್ರೇಡ್ ಹೊಂದಿರುವ ಬೀದರ್ ಪಶು ವಿವಿಗೆ ಸಿಬ್ಬಂದಿಗಳೇ ಇಲ್ಲ, 2 ಸಾವಿರ ಹುದ್ದೆಗಳು ಖಾಲಿ, ಆದರೂ ವಿಶ್ವವಿದ್ಯಾಲಯ ರನ್​ ಆಗ್ತಿದೆ!

ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆರ್ಥಿಕ ಇಲಾಖೆ, ಖಜಾನೆ ಆಯುಕ್ತರು ಹಾಗೂ INMC ಯನ್ನು ಸಂಪರ್ಕಿಸಿ ಸಮನ್ವಯ ಸಾಧಿಸಿಕೊಂಡು ಎಲ್ಲಾ ಅಗತ್ಯ ಪೂರ್ವಭಾವಿ ಕ್ರಮಗಳನ್ನು ನಿರ್ದೇಶಕರು, ಪ್ರಧಾನ ಮಂತ್ರಿ ಘೋಷಣ ಶಕ್ತಿ ನಿರ್ಮಾಣ್‌ ಯೋಜನೆ ತ್ವರಿತವಾಗಿ ಕೈಗೊಂಡು Singal Nodal Agency ಖಾತೆಗೆ ಅನುದಾನ ಜಮೆಯಾಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಸದ್ಯ ಬಿಡುಗಡೆಯಾಗಿರುವ ಅನುದಾನಕ್ಕೆ ಸಂಬಂಧಿಸಿದ ವೆಚ್ಚಗಳಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಮುಖ್ಯ ಲೆಕ್ಕಾಧಿಕಾರಿಗಳು ಸೂಕ್ತ ಲೆಕ್ಕ ಪತ್ರಗಳನ್ನು ದಾಖಲಿಸುವಂತೆ ಮತ್ತು ಅದರ ಮೇಲ್ವಿಚಾರಣೆ ಮಾಡುವಂತೆ ಶಾಲಾ ಶಿಕ್ಷಣ ಇಲಾಖೆಗೆ ತಿಳಿಸಿದ್ದು, ಹಾಗೂ ರಾಜ್ಯ ಕಛೇರಿ ಹಂತದಲ್ಲಿ ಭರಿಸುವ ವೆಚ್ಚಗಳಿಗೆ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಸೂಕ್ತ ಲೆಕ್ಕ ಪತ್ರಗಳನ್ನು ದಾಖಲಿಸುವಂತೆ ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 6:06 pm, Wed, 18 October 23

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ