ಬೆಂಗಳೂರು, ಅಕ್ಟೋಬರ್ 18: ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದ ಯೋಜನೆ (Midday Meal Scheme) ಗೆ ಕೇಂದ್ರ ಸರ್ಕಾರದಿಂದ 131 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 81 ಕೋಟಿ ರೂ. ಒಟ್ಟು 212 ಕೋಟಿ ರೂ. ಹಣವನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಸದ್ಯ ಬಿಡುಗಡೆ ಮಾಡಲಾಗಿರುವ ಅನುದಾನಕ್ಕೆ ವೆಚ್ಚ ಭರಿಸಲು ಆಯುಕ್ತರು ಶಾಲಾ ಶಿಕ್ಷಣ ಇಲಾಖೆ, ಸಂಬಂಧಿಸಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮತ್ತು ಮುಖ್ಯ ಲೆಕ್ಕಾಧಿಕಾರಿಗಳಿಗೆ ಅನುಮತಿ ನೀಡಲಾಗಿದೆ.
ಈ ಆದೇಶದಲ್ಲಿ ಬಿಡುಗಡೆ ಮಾಡಲಾಗಿರುವ ಅನುದಾನವನ್ನು 1-8ನೇ ತರಗತಿ ಮಧ್ಯಾಹ್ನ ಉಪಹಾರ ಯೋಜನೆಯನ್ನು ಅನುಷ್ಠಾನ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಯಂತೆ ನಿಗದಿತ ಉದ್ದೇಶಗಳಿಗೆ ಮಾತ್ರ ವೆಚ್ಚ ಭರಿಸುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ಯುಜಿಸಿ ಮಾಜಿ ಅಧ್ಯಕ್ಷ ಪ್ರೊ.ಸುಖದೇವ್ ತೋರಟ್ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗ ರಚನೆ: ಸರ್ಕಾರ ಆದೇಶ
ಬಿಡುಗಡೆ ಮಾಡಲಾಗಿರುವ ಅನುದಾನವನ್ನು ಖಜಾನೆ-2 PFMS ತಂತ್ರಾಂಶದ ಮೂಲಕ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯಿಂದ ನೀಡಲಾಗಿರುವ ಮಾರ್ಗಸೂಚಿಯಂತೆ ಅನುಷ್ಠಾನ ಮಾಡಲಾಗಿದೆ.
ಬಿಸಿಯೂಟದ ಅನುದಾನವನ್ನು ಪ್ರಧಾನ ಮಂತ್ರಿ ಪೋಷಣೆ ಶಕ್ತಿ ನಿರ್ಮಾಣ ಯೋಜನೆಯ (ಮಧ್ಯಾಹ್ನ ಉಪಹಾರ ಯೋಜನೆ) Singal Nodal Agency ಖಾತೆಗೆ ಜಮಾ ಮಾಡಿಕೊಂಡು ನಿಯಮಾನುಸಾರ ವೆಚ್ಚ ಭರಿಸುವಂತೆ ತಿಳಿಸಲಾಗಿದೆ.
ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆರ್ಥಿಕ ಇಲಾಖೆ, ಖಜಾನೆ ಆಯುಕ್ತರು ಹಾಗೂ INMC ಯನ್ನು ಸಂಪರ್ಕಿಸಿ ಸಮನ್ವಯ ಸಾಧಿಸಿಕೊಂಡು ಎಲ್ಲಾ ಅಗತ್ಯ ಪೂರ್ವಭಾವಿ ಕ್ರಮಗಳನ್ನು ನಿರ್ದೇಶಕರು, ಪ್ರಧಾನ ಮಂತ್ರಿ ಘೋಷಣ ಶಕ್ತಿ ನಿರ್ಮಾಣ್ ಯೋಜನೆ ತ್ವರಿತವಾಗಿ ಕೈಗೊಂಡು Singal Nodal Agency ಖಾತೆಗೆ ಅನುದಾನ ಜಮೆಯಾಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಸದ್ಯ ಬಿಡುಗಡೆಯಾಗಿರುವ ಅನುದಾನಕ್ಕೆ ಸಂಬಂಧಿಸಿದ ವೆಚ್ಚಗಳಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಮುಖ್ಯ ಲೆಕ್ಕಾಧಿಕಾರಿಗಳು ಸೂಕ್ತ ಲೆಕ್ಕ ಪತ್ರಗಳನ್ನು ದಾಖಲಿಸುವಂತೆ ಮತ್ತು ಅದರ ಮೇಲ್ವಿಚಾರಣೆ ಮಾಡುವಂತೆ ಶಾಲಾ ಶಿಕ್ಷಣ ಇಲಾಖೆಗೆ ತಿಳಿಸಿದ್ದು, ಹಾಗೂ ರಾಜ್ಯ ಕಛೇರಿ ಹಂತದಲ್ಲಿ ಭರಿಸುವ ವೆಚ್ಚಗಳಿಗೆ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಸೂಕ್ತ ಲೆಕ್ಕ ಪತ್ರಗಳನ್ನು ದಾಖಲಿಸುವಂತೆ ಸೂಚಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:06 pm, Wed, 18 October 23