ಹಬ್ಬದಲ್ಲೂ ಪಕ್ಷ ಸಂಘಟನೆ ಕೆಲಸ, ಬಸವರಾಜ ಬೊಮ್ಮಾಯಿ ಮನೆಗೆ ತೆರಳಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತುಕತೆ

ಹಬ್ಬದಲ್ಲೂ ಪಕ್ಷ ಸಂಘಟನೆ ಕೆಲಸ, ಬಸವರಾಜ ಬೊಮ್ಮಾಯಿ ಮನೆಗೆ ತೆರಳಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತುಕತೆ

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 13, 2023 | 12:00 PM

ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಗಿಟ್ಟಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪಕ್ಷದೊಳಗಿನ ತಮ್ಮ ವಿರೋಧಿಗಳ ಬಾಯಿ ಮುಚ್ಚಿಸಿರುವುದು ಸತ್ಯ, ಆದರೆ ನೂತನ ಅಧ್ಯಕ್ಷನ ಮುಂದೆ ದೊಡ್ಡ ಸವಾಲುಗಳಿವೆ. ಅಸಮಾಧಾಗೊಂಡಿರುವ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅವುಗಳಲ್ಲಿ ಪ್ರಮುಖವಾದದ್ದು.

ಬೆಂಗಳೂರು: ಹಲವಾರು ಹಿರಿಯ ನಾಯಕರ ಅಸಮಾಧಾನ, ಬೇಗುದಿ ಮತ್ತು ಬೇಸರದ ನಡುವೆ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿವೈ ವಿಜಯೇಂದ್ರ (BY Vijayendra) ಯಾವುದನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದೆ ಪಕ್ಷವನ್ನು ಸಂಘಟಿಸುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ಇಂದು ಬೆಳಗ್ಗೆ ಅವರು ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿರುರುವ ಬಸವರಾಜ ಬೊಮ್ಮಾಯಿವರವರನ್ನು (Basavaraj Bommai) ಬೆಂಗಳೂರಿನ ಆರ್ ಟಿ ನಗರದಲ್ಲಿರುವ (RT Nagar) ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಇತ್ತೀಚಿಗಷ್ಟೇ ಮನೆಗೆ ವಾಪಸ್ಸಾಗಿ ಚೇತರಿಸಿಕೊಳ್ಳುತ್ತಿರುವ ಬೊಮ್ಮಾಯಿ ಪಕ್ಷದ ನೂತನ ರಾಜ್ಯಾಧ್ಯಕ್ಷರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಶಾಲು ತೊಡಿಸಿ ಹಾರ ಹಾಕಿ ಗೌರವಿಸಿದರು. ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಗಿಟ್ಟಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪಕ್ಷದೊಳಗಿನ ತಮ್ಮ ವಿರೋಧಿಗಳ ಬಾಯಿ ಮುಚ್ಚಿಸಿರುವುದು ಸತ್ಯ, ಆದರೆ ನೂತನ ಅಧ್ಯಕ್ಷನ ಮುಂದೆ ದೊಡ್ಡ ಸವಾಲುಗಳಿವೆ. ಅಸಮಾಧಾಗೊಂಡಿರುವ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅವುಗಳಲ್ಲಿ ಪ್ರಮುಖವಾದದ್ದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ