100 ಅಂಬೇಡ್ಕರ್ ಹಾಸ್ಟೇಲ್​ ನಿರ್ಮಾಣಕ್ಕೆ 600 ಕೋಟಿ ರೂ ಬಿಡುಗಡೆ: ಸಂಪುಟ ಸಭೆ ಅನುಮೋದನೆ

847 ANMS ಉಪ ಕೇಂದ್ರಗಳಿಗೆ ಶಕ್ತಿ ತುಂಬಿ ಆರೋಗ್ಯ ಕೇಂದ್ರಗಳನ್ನಾಗಿ ಮಾಡಲಾಗುತ್ತದೆ. 71 ಕೋಟಿ ವೆಚ್ಚದಲ್ಲಿ NHMಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ನುರಿತ ಸಿಬ್ಬಂದಿ ನೀಡಲಾಗುವುದು ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.

100 ಅಂಬೇಡ್ಕರ್ ಹಾಸ್ಟೇಲ್​ ನಿರ್ಮಾಣಕ್ಕೆ 600 ಕೋಟಿ ರೂ ಬಿಡುಗಡೆ: ಸಂಪುಟ ಸಭೆ ಅನುಮೋದನೆ
ಜೆ.ಸಿ ಮಾಧುಸ್ವಾಮಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 20, 2023 | 3:19 PM

ಬೆಂಗಳೂರು: ಲೋಕೋಪಯೋಗಿ ಇಲಾಖೆವತಿಯಿಂದ (PWD) 100 ಅಂಬೇಡ್ಕರ್ ವಸತಿ ನಿಲಯ ನಿರ್ಮಾಣಕ್ಕೆ 600 ಕೋಟಿ ರೂ. ನೀಡಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ತೆರಿಕೇರಿ ತಾಲ್ಲೂಕು ಕಲ್ಲತ್ತಿ ಡ್ಯಾಮ್​​ಗೆ 20 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಹಾಗೇ 847 ANMS ಉಪ ಕೇಂದ್ರಗಳಿಗೆ ಶಕ್ತಿ ತುಂಬಿ ಆರೋಗ್ಯ ಕೇಂದ್ರಗಳನ್ನಾಗಿ ಮಾಡಲಾಗುತ್ತದೆ. 71 ಕೋಟಿ ವೆಚ್ಚದಲ್ಲಿ NHMಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತದೆ. ನುರಿತ ಸಿಬ್ಬಂದಿ ನೀಡಲಾಗುವುದು ಎಂದು ಸಚಿವ ಜೆ.ಸಿ ಮಾಧುಸ್ವಾಮಿ (JC Madhuswamy) ಹೇಳಿದ್ದಾರೆ.

ಇಂದು (ಜ.20) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಿತ್ತೂರು ತಾಲ್ಲೂಕಿನ 50 ಬೆಡ್​ನ ಆಸ್ಪತ್ರೆಯನ್ನು 100 ಬೆಡ್​ಗೆ ಹೆಚ್ಚಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕ್ಷತ್ರಿಯ ಮರಾಠ ಯುವ ವೇದಿಕೆಗೆ ಶಾಲಾ ಕಟ್ಟಡಕ್ಕಾಗಿ 2 ಎಕರೆ  ಜಾಗ ನೀಡಲು ಅನುಮೋದಿಸಲಾಗಿದೆ. ಬೆಂಗಳೂರು ನಗರದ ಕಲಾಸಿಪಾಳ್ಯದಲ್ಲಿ ನವೀನ ಬಸ್ ನಿಲ್ದಾಣ ನಿರ್ಮಾಣಕ್ಕೆ 63 ಕೋಟಿ ರೂ. ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆಯಲ್ಲಿ ಸ್ಪೂರ್ತಿ ಯೋಜನೆಗೆ 12.5 ಕೋಟಿ ರೂ. ಅನುಮೋದನೆ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ನಾರಯಣ ಗುರು ಹೆಸರಲ್ಲಿ ಹಿಂದುಳಿದ ವರ್ಗಗಳ ಶಾಲಾ ನಿರ್ಮಾಣಕ್ಕೆ 72 ಕೋಟಿ ರೂ. ನೀಡಲಾಗಿದೆ ಎಂದರು.

ಕಲ್ಲು ಗಣಿ ಗುತ್ತಿಗೆ ಮಂಜೂರಾತಿಯಡಿ ಕ್ವಾರಿ ಲೀಸ್ ಕೊಡುತ್ತಿದ್ದೇವೆ. ಎಷ್ಟು ಲೀಸ್ ಕೊಟ್ಟಿದ್ದೀವಿ ಅದರ ಜೊತೆ ನಕ್ಷೆಗಿಂತ ಸ್ವಲ್ಪ ಹೆಚ್ಚು ಕಡಿಮೆಯಾದರು ಅನುಮತಿ ನೀಡುವ ಅಧಿಕಾರವನ್ನು ಅಧಿಕಾರಿಗಳಿಗೆ ಕೊಟ್ಟಿದ್ದೇವೆ ಎಂದು ಮಾಹಿತಿ ನೀಡಿದರು.

ಸಕ್ಕರೆ ಕಾರ್ಖಾನೆಗಳಿಗೆ ವಿಧಿಸುತ್ತಿದ್ದ ಸೆಸ್ ಪ್ರಮಾಣ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ನಿಜಲಿಂಗಪ್ಪ ಸಕ್ಕರೆ ಸಂಶೋಧನಾ ಸಂಸ್ಥೆ ನಿರ್ವಹಣೆಗಾಗಿ ಸೆಸ್ ಹೆಚ್ಚಿಸಲಾಗಿದೆ. ಮಡಿಕೇರಿ, ಬೆಳಗಾವಿ, ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರಿಟಿಕಲ್ ಕೇರ್ ಸೆಂಟರ್​ ನಿರ್ಮಾಣಮಾಡಲಾಗುತ್ತದೆ. ಮಡಿಕೇರಿ ಜಿಲ್ಲೆಯಲ್ಲಿ ಕ್ರಿಟಿಕಲ್ ಕೇರ್ ಸೆಂಟರ್​ಗೆ 13.22 ಕೋಟಿ ರೂ. ಬೆಳಗಾವಿ ಜಿಲ್ಲೆಯಲ್ಲಿ ಕ್ರಿಟಿಕಲ್ ಕೇರ್ ಸೆಂಟರ್​ಗೆ 23.75 ಕೋಟಿ ರೂ ನೀಡಲಾಗುವುದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:18 pm, Fri, 20 January 23

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ