ಡಿಕೆಶಿ, ಜಮೀರ್ ಸೇರಿ ಏಳು ಸಚಿವರಿಗೆ ಗುತ್ತಿಗೆದಾರರ ಸಂಘದಿಂದ ಖಾರದ ಪತ್ರ; ಹೋರಾಟದ ಎಚ್ಚರಿಕೆ

Karnataka contractors association's letter to 7 ministers: ವಿವಿಧ ಇಲಾಖೆಗಳಿಂದ ಹಣ ಪಾವತಿ ಬಾಕಿ ಉಳಿಸಿಕೊಂಡಿರುವುದು ಸೇರಿದಂತೆ ಗುತ್ತಿಗೆದಾರರನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಗುತ್ತಿಗೆದಾರರ ಸಂಘ ಆರೋಪಿಸಿದೆ. ಹಿಂದಿನ ಸರ್ಕಾರದ ವಿರುದ್ಧ ಹೋರಾಟ ಮಾಡಿದಂತೆ ಈ ಸರ್ಕಾರದ ವಿರುದ್ಧವೂ ಹೋರಾಟ ಮಾಡಲು ಸಿದ್ಧ ಎಂದು ಎಚ್ಚರಿಕೆ ನೀಡಿದೆ. ಡಿಕೆ ಶಿವಕುಮಾರ್, ಪ್ರಿಯಾಂಕ್ ಖರ್ಗೆ, ಜಮೀರ್ ಅಹ್ಮದ್ ಖಾನ್ ಸೇರಿದಂತೆ ಏಳು ಸಚಿವರಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದಿದೆ.

ಡಿಕೆಶಿ, ಜಮೀರ್ ಸೇರಿ ಏಳು ಸಚಿವರಿಗೆ ಗುತ್ತಿಗೆದಾರರ ಸಂಘದಿಂದ ಖಾರದ ಪತ್ರ; ಹೋರಾಟದ ಎಚ್ಚರಿಕೆ
ಡಿಕೆ ಶಿವಕುಮಾರ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 13, 2025 | 10:27 AM

ಬೆಂಗಳೂರು, ಜನವರಿ 13: ಬಾಕಿ ಹಣ ಪಾವತಿ ಆಗದೇ ಇರುವುದು ಸೇರಿದಂತೆ ಗುತ್ತಿಗೆದಾರರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಗುತ್ತಿಗೆದಾರರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯ ಗುತ್ತಿಗೆದಾರರ ಸಂಘವು ಏಳು ಸಚಿವರಿಗೆ ಪತ್ರ ಬರೆದಿದೆ. ಅಧಿಕಾರಿಗಳು ಹಾಗೂ ಸಚಿವರ ವರ್ತನೆ ಬಗ್ಗೆ ಈ ಪತ್ರದಲ್ಲಿ ಅಸಮಾಧಾನ ತೋಡಿಕೊಳ್ಳಲಾಗಿದೆ. ತಮ್ಮ ಸಮಸ್ಯೆಗಳಿಗೆ ಸ್ಪಂದಿಸದೇ ಇದ್ದರೆ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದೂ ಈ ಗುತ್ತಿಗೆದಾರರು ಎಚ್ಚರಿಕೆ ನೀಡಿದ್ದಾರೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಎಚ್ ಸಿ ಮಹದೇವಪ್ಪ, ಜಮೀರ್ ಅಹ್ಮದ್ ಖಾನ್, ಎನ್ ಎಸ್ ಬೋಸರಾಜು, ದಿನೇಶ್ ಗುಂಡೂರಾವ್ ಮತ್ತು ರಹೀಂ ಖಾನ್ ಅವರಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರದಿಂದ ಗುತ್ತಿಗೆದಾರರಿಗೆ ಸಾಕಷ್ಟು ಹಣ ಪಾವತಿ ಬಾಕಿ ಇದೆ. ಈ ಬಗ್ಗೆ ಸಾಕಷ್ಟು ಬಾರಿ ಕೇಳಿದರೂ ಸ್ಪಂದನೆ ಇಲ್ಲ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಬಳಿ ಬಾಕಿ ಕೇಳಿದರೆ ಸಚಿವರನ್ನು ಭೇಟಿಯಾಗಿ ಎನ್ನುತ್ತಾರೆ. ಯಾವುದೇ ಸಮಸ್ಯೆಗೂ ಅವರು ಸ್ಪಂದಿಸುವುದಿಲ್ಲ. ಸಚಿವರ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಿಲ್ಲ ಎಂದು ಗುತ್ತಿಗೆದಾರರ ಸಂಘವು ತನ್ನ ಪತ್ರದಲ್ಲಿ ಅಸಮಾಧಾನ ಹೊರಹಾಕಿದೆ.

ಇದನ್ನೂ ಓದಿ: ಬೆಂಗಳೂರಿಗೆ ಸುರ್ಜೆವಾಲ ಭೇಟಿ; ಸೋಮವಾರ 3 ಸಭೆ; ಡಿನ್ನರ್ ಪೊಲಿಟಿಕ್ಸ್ ಚರ್ಚೆಯೂ ಸಾಧ್ಯತೆ

ಈ ಸರ್ಕಾರಕ್ಕೆ ಗುತ್ತಿಗೆದಾರರ ಸಂಕಷ್ಟದ ಬಗ್ಗೆ ಸ್ವಲ್ಪವೂ ಕರುಣೆ ಹೊಂದಿಲ್ಲ ಎಂದನಿಸುತ್ತದೆ. ಈ ರೀತಿ ನಮ್ಮನ್ನು ಕಡೆಗಣಿಸುತ್ತೀರಿ ಎಂದು ಕನಸಿನಲ್ಲೂ ಎಣಿಸಿರಲಿಲ್ಲ. ಈ ಪತ್ರ ತಲುಪಿ ಏಳು ದಿನದೊಳಗೆ ಗುತ್ತಿಗೆದಾರರ ಸಭೆ ಕರೆದು ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕಾಗುತ್ತದೆ ಎಂದು ಸಂಘವು ಎಚ್ಚರಿಕೆ ನೀಡಿದೆ.

ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಇದೇ ಪತ್ರದಲ್ಲಿ ನೀಡಲಾಗಿದೆ. ‘ಹಿಂದಿನ ಸರ್ಕಾರದ ವಿರುದ್ಧ ಗುತ್ತಿಗೆದಾರರು ಹೋರಾಟ ಮಾಡಿರುವುದು ತಮಗೆ ತಿಳಿದಿದೆ. ತಮ್ಮ ಮನವಿಗೆ ಸರಿಯಾಗಿ ಸ್ಪಂದಿಸದಿದ್ದರೆ ಮುಂದೆ ಹೋರಾಟದ ಹಾದಿ ಹಿಡಿಯಲು ನಿರ್ಧರಿಸಿದ್ದೇವೆ. ಆದಷ್ಟೂ ಬೇಗನೆ ಈ ಸಮಸ್ಯೆಗೆ ಪರಿಹಾರ ಹುಡುಕಲು ಕ್ರಮ ಕೈಗೊಳ್ಳಬೇಕು’ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಇದನ್ನೂ ಓದಿ: 11 ಜೆಡಿಎಸ್ ಶಾಸಕರು ಕಾಂಗ್ರೆಸ್​ಗೆ ಹೋಗುತ್ತಾರಾ?; ಅಲ್ಲಗಳೆದ ದೇವೇಗೌಡ; ಪಕ್ಷ ಮುಗಿಸಲು ಯಾರಿಂದಲೂ ಅಸಾಧ್ಯ ಎಂದ ಮಾಜಿ ಪ್ರಧಾನಿ

ಸರ್ಕಾರದಿಂದ ಗುತ್ತಿಗೆದಾರರಿಗೆ 32 ಸಾವಿರ ಕೋಟಿ ರುಪಾಯಿ ಹಣ ಪಾವತಿ ಬಾಕಿ ಇದೆ ಎಂದು ಗುತ್ತಿಗೆದಾರರ ಸಂಘ ಹೇಳಿದೆ. ಬೃಹತ್ ನೀರಾವರಿ ಇಲಾಖೆಯೊಂದರಿಂದಲೇ 14,000 ಕೋಟಿ ರೂಗೂ ಅಧಿಕ ಹಣ ಬಾಕಿ ಇದೆಯಂತೆ. ಅಷ್ಟೇ ಅಲ್ಲ, ಕಮಿಷನ್ ಕೊಟ್ಟರೆಯೇ ಗುತ್ತಿಗೆ ನೀಡುವ ಕೆಲಸ ಆಗುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಹಂಗಾಮಿ ಅಧ್ಯಕ್ಷರಾದ ಜಗನ್ನಾಥ ಬಿ ಶೇಗಣಿ ಆರೋಪಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಿಡ್ ವೀಕ್ ಬಗ್ಗೆ ಘೋಷಣೆ ಮಾಡಿದ ಬಿಗ್ ಬಾಸ್; ರಜತ್​ಗೆ ಸ್ಕೆಚ್ ಇಟ್ಟ ಭವ್ಯಾ
ಮಿಡ್ ವೀಕ್ ಬಗ್ಗೆ ಘೋಷಣೆ ಮಾಡಿದ ಬಿಗ್ ಬಾಸ್; ರಜತ್​ಗೆ ಸ್ಕೆಚ್ ಇಟ್ಟ ಭವ್ಯಾ
ಬಸ್​ನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯನ್ನು ಥಳಿಸಿದ ಬಸ್ ಕಂಡಕ್ಟರ್​
ಬಸ್​ನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯನ್ನು ಥಳಿಸಿದ ಬಸ್ ಕಂಡಕ್ಟರ್​
ಬಿಗ್ ಶೋ ಬಿಗ್ಗೆಸ್ಟ್ ಸಿಕ್ಸ್: ರಾಕೆಟ್ ಸಿಕ್ಸ್ ಸಿಡಿಸಿದ ಮ್ಯಾಕ್ಸ್​ವೆಲ್
ಬಿಗ್ ಶೋ ಬಿಗ್ಗೆಸ್ಟ್ ಸಿಕ್ಸ್: ರಾಕೆಟ್ ಸಿಕ್ಸ್ ಸಿಡಿಸಿದ ಮ್ಯಾಕ್ಸ್​ವೆಲ್
Daily Devotional: ಹಣೆ ಬರಹ ಬದಲಿಸಲು ಸಾಧ್ಯವೆ? ಇಲ್ಲಿದೆ ಉತ್ತರ
Daily Devotional: ಹಣೆ ಬರಹ ಬದಲಿಸಲು ಸಾಧ್ಯವೆ? ಇಲ್ಲಿದೆ ಉತ್ತರ
ಇಂದು ಬನದ ಹುಣ್ಣಿಮೆ, ಈ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಇಂದು ಬನದ ಹುಣ್ಣಿಮೆ, ಈ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಜಗದೀಶ್ ಬೆಳ್ಯಪ್ಪ, ಎಂ ಶ್ರೀಕಾಂತ್​ಗೆ ಬೆಂಗಳೂರು ಪ್ರೆಸ್​ಕ್ಲಬ್​ ಪ್ರಶಸ್ತಿ
ಜಗದೀಶ್ ಬೆಳ್ಯಪ್ಪ, ಎಂ ಶ್ರೀಕಾಂತ್​ಗೆ ಬೆಂಗಳೂರು ಪ್ರೆಸ್​ಕ್ಲಬ್​ ಪ್ರಶಸ್ತಿ
ಹಸುಗಳ ಮಾಲೀಕರಿಗೆ ವೈಯಕ್ತಿಕ ಪರಿಹಾರ ಕೊಡುತ್ತೇನೆ ಎಂದ ಸಚಿವ ಜಮೀರ್
ಹಸುಗಳ ಮಾಲೀಕರಿಗೆ ವೈಯಕ್ತಿಕ ಪರಿಹಾರ ಕೊಡುತ್ತೇನೆ ಎಂದ ಸಚಿವ ಜಮೀರ್
ಹಸುಗಳ ಕೆಚ್ಚಲು ಕೊಯ್ದು ವಿಕೃತಿ, ಕೇಸ್ ಬುಕ್: ಸಿಎಂ ಹೇಳಿದ್ದೇನು?
ಹಸುಗಳ ಕೆಚ್ಚಲು ಕೊಯ್ದು ವಿಕೃತಿ, ಕೇಸ್ ಬುಕ್: ಸಿಎಂ ಹೇಳಿದ್ದೇನು?
ಮುಖವಾಡ ಕಳಚಿದ ಮೇಲೆ ಭವ್ಯಾ ಗೌಡ ಬಗ್ಗೆ ತ್ರಿವಿಕ್ರಮ್​ಗೆ ಜ್ಞಾನೋದಯ
ಮುಖವಾಡ ಕಳಚಿದ ಮೇಲೆ ಭವ್ಯಾ ಗೌಡ ಬಗ್ಗೆ ತ್ರಿವಿಕ್ರಮ್​ಗೆ ಜ್ಞಾನೋದಯ
ಕಂಬಳ ಓಟವನ್ನು ಬೆರುಗಣ್ಣಿನಿಂದ ನೋಡಿದ ನಟಿ ಶಾನ್ವಿ
ಕಂಬಳ ಓಟವನ್ನು ಬೆರುಗಣ್ಣಿನಿಂದ ನೋಡಿದ ನಟಿ ಶಾನ್ವಿ