ಬೆಂಗಳೂರು: ರಾಜ್ಯದಲ್ಲಿಂದು ಹೊಸದಾಗಿ 877 ಜನರಿಗೆ ಕೊರೊನಾ ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 9,20,373ಕ್ಕೇರಿದೆ. ಇದಲ್ಲದೆ, ರಾಜ್ಯದಲ್ಲಿ ಇಂದು ಸೋಂಕಿನಿಂದ 6 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 12,096 ಜನರು ಕೊನೆಯುಸಿರೆಳೆದಿದ್ದಾರೆ.
ಜೊತೆಗೆ, ಸೋಂಕಿತರ ಪೈಕಿ 8,97,200 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು 11,058 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.
ಇತ್ತ, ಬೆಂಗಳೂರಿನಲ್ಲಿ ಇಂದು ಒಂದೇ ದಿನ 464 ಜನರಿಗೆ ಸೋಂಕು ಪತ್ತೆಯಾಗಿದೆ. ಇದೀಗ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 3,88,850ಕ್ಕೇರಿದೆ. ಇಂದು ನಗರದಲ್ಲಿ ಕೊರೊನಾ ಸೋಂಕಿಗೆ ನಾಲ್ವರು ಬಲಿಯಾಗಿದ್ದು ರಾಜಧಾನಿಯಲ್ಲಿ ಕೊರೊನಾಗೆ ಈವರೆಗೆ 4,321 ಜನರು ಬಲಿಯಾಗಿದ್ದಾರೆ.
ಜೊತೆಗೆ, 3,88,850 ಸೋಂಕಿತರ ಪೈಕಿ 3,77,443 ಜನರು ಗುಣಮುಖರಾಗಿದ್ದು 7,085 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದೆ.