ಕರ್ನಾಟಕದ 641 ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಘೋಷಣೆ

ಭಾರಿ ಕುತೂಹಲ ಕೆರಳಿಸಿರುವ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಉಪಚುನಾವಣೆ ದಿನಾಂಕವನ್ನ ಕೇಂದ್ರ ಚುನಾವಣಾ ಆಯೋಗ ಇತ್ತೀಚೆಗೆ ಘೋಷಿಸಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯದ 521 ಗ್ರಾಮ ಪಂಚಾಯಿತಿ​ಗಳಲ್ಲಿ ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ಘೋಷಣೆ ಮಾಡಿದೆ.

ಕರ್ನಾಟಕದ 641 ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಘೋಷಣೆ
ಕರ್ನಾಟಕದ 641 ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಘೋಷಣೆ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 18, 2024 | 7:04 PM

ಬೆಂಗಳೂರು, ಅಕ್ಟೋಬರ್​ 18: ರಾಜ್ಯ ರಾಜಕೀಯದಲ್ಲಿ ಹಗರಣಗಳ ಮಧ್ಯೆ ಇತ್ತೀಚೆಗೆ ಬೈಎಲೆಕ್ಷನ್ ಘೋಷಣೆ ಮಾಡಲಾಗಿತ್ತು. ಚುನಾವಣೆ ಘೋಷಣೆ ಆಗಿದ್ದೇ ತಡ ಮೂರು ಪಕ್ಷಗಳು ರಣತಂತ್ರ ಆರಂಭಿಸಿವೆ. ಇದರ ಮಧ್ಯೆ ಕರ್ನಾಟಕದ 531 ಗ್ರಾಮ ಪಂಚಾಯಿತಿಗಳಲ್ಲಿ (Gram panchayat) ತೆರವಾಗಿರುವ ಸ್ಥಾನಗಳಿಗೆ ರಾಜ್ಯ ಚುನಾವಣಾ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ನವೆಂಬರ್ 21 ರಂದು ಮತದಾನ ನಡೆಯಲಿದ್ದು, ನವೆಂಬರ್ 26 ರಂದು ಮತ ಎಣಿಕೆ ನಡೆಯಲಿದೆ.

ಕರ್ನಾಟಕದ ಮೂರು ಕ್ಷೇತ್ರಗಳು ಸೇರಿ ವಿವಿಧ ರಾಜ್ಯಗಳ 47 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಭಾರಿ ಕುತೂಹಲ ಕೆರಳಿಸಿರುವ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಉಪಚುನಾವಣೆ ದಿನಾಂಕವನ್ನ ಕೇಂದ್ರ ಚುನಾವಣಾ ಆಯೋಗ ಇತ್ತೀಚೆಗೆ ಘೋಷಿಸಿದೆ.

ನ.13ರಂದು ಎಲೆಕ್ಷನ್: ನ.23ಕ್ಕೆ ಮತಎಣಿಕೆ

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ. ಅಕ್ಟೋಬರ್ 18ರಿಂದ ಉಪಚುನಾವಣೆಗೆ ಅಧಿಸೂಚನೆಯು ಪ್ರಕಟವಾಗಲಿದೆ. ಇನ್ನು ಅಕ್ಟೋಬರ್ 25ರಂದು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಇದನ್ನೂ ಓದಿ: ಶಿವಕುಮಾರ್ ಸಹ ಕುಮಾರಸ್ವಾಮಿಯಂತೆ ಹಿಟ್ ಅಂಡ್ ರನ್ ಪಾಲಿಸಿಗೆ ಜೋತು ಬಿದ್ದಂತಿದೆ!

ಅಕ್ಟೋಬರ್​ 28ರಂದು 3 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆಗೆ ಅವಕಾಶ ಇದೆ. ನ.23ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆ ಫಲಿತಾಂಶ ಹೊರಬೀಳಲಿದೆ.

ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ: ಡಿಸಿಎಂ ಡಿಕೆ ಶಿವಕುಮಾರ್

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಎನ್ನುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಉಪ ಕದನದ ಕಹಳೆ ಮೊಳಗಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ್ದ ಅವರು, ಅಧಿಕೃತವಾಗಿ ಅಭ್ಯರ್ಥಿಗಳ ಘೋಷಣೆ ಆಗಲಿ. ಆಮೇಲೆ ನಮ್ಮ ನಿರ್ಧಾರ ಏನು ಅಂತ ಹೇಳುತ್ತೇವೆ. ಮುಂದೆ ಏನಾಗುತ್ತೆ ನೋಡೋಣ ಎಂದಿದ್ದಾರೆ. ಈಗಾಗಲೇ ಉಪಚುನಾವಣೆ ಕೆಲಸ ಆರಂಭಿಸಿದ್ದೇವೆ. ಮೂರು ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Sandur Bypoll: ಸಂಡೂರು ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಲ್ಲ, ಅಭ್ಯರ್ಥಿಯೂ ಅಲ್ಲ: ಶ್ರೀರಾಮುಲು ಸ್ಪಷ್ಟನೆ

ಇನ್ನು ಉಪಚುನಾವಣೆಯಲ್ಲಿ ನಾವು ನೂರಕ್ಕೆ ನೂರರಷ್ಟು ಗೆಲುತ್ತೇವೆ ಎಂದು ಸಚಿವ ಎಂ.ಬಿ.ಪಾಟೀಲ್ ಭರವಸೆ ವ್ಯಕ್ತಪಡಿಸಿದ್ದರು. ವಿಜಯಪುರ ನಗರದಲ್ಲಿ ಮಾತನಾಡಿದ್ದ ಅವರು, ವರಿಷ್ಠರ ಜತೆ ಚರ್ಚಿಸಿ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ