ರಾಜ್ಯ ಸರ್ಕಾರ ತನ್ನ ಸ್ವಾತಂತ್ರ್ಯ ಕಸಿದುಕೊಂಡಿದೆ ಎಂದ ಕರ್ನಾಟಕ ರಾಜ್ಯ ಚುನಾವಣಾ ಆಯೋಗ, ಹಾಗೆ ಅಂದಿದ್ದೇಕೆ?

ಸುಪ್ರೀಂ ಕೋರ್ಟ್ ಆದೇಶದಂತೆ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗದಂತೆ ರಾಜ್ಯ ಸರ್ಕಾರ ತನ್ನ ಅಧಿಕಾರವನ್ನು ಕಸಿದುಕೊಂಡಿದೆ ಎಂದು ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಮಂಗಳವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.

ರಾಜ್ಯ ಸರ್ಕಾರ ತನ್ನ ಸ್ವಾತಂತ್ರ್ಯ ಕಸಿದುಕೊಂಡಿದೆ ಎಂದ ಕರ್ನಾಟಕ ರಾಜ್ಯ ಚುನಾವಣಾ ಆಯೋಗ, ಹಾಗೆ ಅಂದಿದ್ದೇಕೆ?
ಕರ್ನಾಟಕ ಹೈಕೋರ್ಟ್
Edited By:

Updated on: May 17, 2022 | 7:37 PM

ಸುಪ್ರೀಂಕೋರ್ಟ್(Supreme Court) ತೀರ್ಪು ಹಿನ್ನೆಲೆಯಲ್ಲಿ ರಾಜ್ಯ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಸಂಬಂಧದ ಚುನಾವಣಾ ಆಯೋಗ(Karnataka State Election Commission) ಸಲ್ಲಿಸಿರುವ ಮೆಮೋ ಕುರಿತು ನ್ಯಾ.ಎಸ್. ಜಿ.ಪಂಡಿತ್ ಮತ್ತು ನ್ಯಾ.ಎಂ.ಜಿ ಉಮಾ ಅವರನ್ನು ಒಳಗೊಂಡ ನ್ಯಾಯಪೀಠ ಇಂದು ವಿಚಾರಣೆ ನಡೆಸಿದೆ. ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಆದೇಶದಂತೆ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗದಂತೆ ರಾಜ್ಯ ಸರ್ಕಾರ ತನ್ನ ಅಧಿಕಾರವನ್ನು ಕಸಿದುಕೊಂಡಿದೆ ಎಂದು ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಮಂಗಳವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.

ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಮತ್ತು ನ್ಯಾಯಮೂರ್ತಿ ಎಂ.ಜಿ.ಉಮಾ ಅವರನ್ನೊಳಗೊಂಡ ಹೈಕೋರ್ಟ್‌ನ ವಿಭಾಗೀಯ ಪೀಠ ಇಂದು ಚುನಾವಣಾ ಆಯೋಗದ ಅರ್ಜಿಯ ವಿಚಾರಣೆ ನಡೆಸಿತು. ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ತಕ್ಷಣವೇ ನಡೆಸುವಂತೆ ಕಳೆದ ವಾರ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದರೂ, ತುರ್ತು ಪರಿಸ್ಥಿತಿಯನ್ನು ಉಲ್ಲೇಖಿಸಿ ಬಾಕಿ ಉಳಿದಿರುವ ಅರ್ಜಿಯನ್ನು ವಿಚಾರಣೆ ಮಾಡಲು ಆಯೋಗವು ಹೈಕೋರ್ಟ್‌ಗೆ ಮೆಮೊವನ್ನು ಸಲ್ಲಿಸಿತು. ಇದನ್ನೂ ಓದಿ: ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನು ಪ್ರಶ್ನಿಸುವ ಅಧಿಕಾರ ಸಿದ್ದರಾಮಯ್ಯನಿಗೆ ಇಲ್ಲ: ಬೋಪಯ್ಯ

ಸುಪ್ರೀಂ ಕೋರ್ಟ್‌ನ ನಿರ್ದೇಶನವನ್ನು ಅನುಸರಿಸುವ ಬದಲು ಏಕೆ ಮೆಮೊ ಸಲ್ಲಿಸಲಾಗಿದೆ ಎಂದು ಆಯೋಗದ ವಕೀಲರನ್ನು ಹೈಕೋರ್ಟ್ ಕೇಳಿದೆ. ಇದ್ಕಕೆ ಉತ್ತರಿಸಿದ ವಕೀಲರು ಕ್ಷೇತ್ರಗಳ ವಿಂಗಡಣೆ ಮತ್ತು ಮೀಸಲಾತಿ ಪಟ್ಟಿಯನ್ನು ರಚಿಸುವ ಚುನಾವಣಾ ಆಯೋಗದ ಅಧಿಕಾರವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಹೀಗಾಗಿ ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಇದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿವರವಾದ ಪರಿಶೀಲನೆ ಅಗತ್ಯ ಎಂದು ಗಮನಿಸಿದ ನ್ಯಾಯಾಲಯವು ವಿಚಾರಣೆಯನ್ನು ಮೇ 23 ಕ್ಕೆ ಮುಂದೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ