AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಹಾಗೂ ಉಪ ಚುನಾವಣೆ ಪ್ರಚಾರಕ್ಕೆ ರಾಜ್ಯ ಚುನಾವಣೆ ಆಯೋಗದಿಂದ ಟಫ್ ರೂಲ್ಸ್

ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಹಾಗೂ ಉಪ ಚುನಾವಣೆಗಳ ದಿನಾಂಕ ಘೋಷಣೆಯಾಗಿದ್ದು ಅಭ್ಯರ್ಥಿಗಳು ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಆದ್ರೆ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದು ಘೋಷಣೆಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ರಾಜ್ಯ ಚುನಾವಣೆ ಆಯೋಗ ಟಫ್ ರೂಲ್ಸ್ ಜಾರಿ ಮಾಡಿದೆ.

ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಹಾಗೂ ಉಪ ಚುನಾವಣೆ ಪ್ರಚಾರಕ್ಕೆ ರಾಜ್ಯ ಚುನಾವಣೆ ಆಯೋಗದಿಂದ ಟಫ್ ರೂಲ್ಸ್
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on:Apr 20, 2021 | 8:48 AM

Share

ಬಳ್ಳಾರಿ: ಕರ್ನಾಟಕ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಅಬ್ಬರದ ಪ್ರಚಾರಕ್ಕೆ ರಾಜ್ಯ ಚುನಾವಣೆ ಆಯೋಗ ಬ್ರೇಕ್ ಹಾಕಿದೆ. ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಹಾಗೂ ಉಪ ಚುನಾವಣೆಗಳ ದಿನಾಂಕ ಘೋಷಣೆಯಾಗಿದ್ದು ಅಭ್ಯರ್ಥಿಗಳು ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಆದ್ರೆ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದು ಘೋಷಣೆಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ರಾಜ್ಯ ಚುನಾವಣೆ ಆಯೋಗ ಟಫ್ ರೂಲ್ಸ್ ಜಾರಿ ಮಾಡಿದೆ.

ರಾಜ್ಯ ಚುನಾವಣೆ ಆಯೋಗ ಜಾರಿ ಮಾಡಿದ ರೂಲ್ಸ್ -ಅಭ್ಯರ್ಥಿ ಸೇರಿ ಗರಿಷ್ಠ 5 ಜನರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡುವ ಮೂಲಕ ಮನೆ ಮನೆಗೆ ತೆರಳಿ ಪ್ರಚಾರ ನಡೆಸಬಹುದು -ಪ್ರಚಾರಕ್ಕೆ ಯಾವುದೇ ವಾಹನಗಳನ್ನು ಬಳಸುವುದು ಹಾಗೂ ಗುಂಪು ಸೇರಿ ಚುನಾವಣೆ ಪ್ರಚಾರ ನಡೆಸುವಂತಿಲ್ಲ -ಅಭ್ಯರ್ಥಿಗಳು ಪ್ರಚಾರದ ವೇಳೆ ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಬೇಕು -ಇಲೆಕ್ಟ್ರಾನಿಕ್ ಮೀಡಿಯಾದಲ್ಲಿ ಪ್ರಚಾರ ಕೈಗೊಳ್ಳಬಹುದು -ಅಭ್ಯರ್ಥಿಗಳು ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದ ಕರಪತ್ರಗಳನ್ನು ಹಂಚುಬಹುದು. ಈ ವೇಳೆ ಫೇಸ್ ಮಾಸ್ಕ್ ಮತ್ತು ಕೈ ಗವಸು ಧರಿಸುವುದು ಕಡ್ಡಾಯ

ಸದ್ಯ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಚುನಾವಣೆ ಆಯೋಗ ಕೆಲವು ನಿಯಮಗಳನ್ನು ಜಾರಿ ಮಾಡಿದೆ. ಆದ್ರೆ ಇದು ಎಷ್ಟರ ಮಟ್ಟಿಗೆ ಪಾಲನೆಯಾಗುತ್ತೇ ಎಂಬುವುದೇ ಪ್ರಶ್ನೆ. ಈಗಾಗಲೇ ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಗುಂಪು ಗುಂಪಾಗಿ ಸಾಮಾಜಿಕ ಅಂತರ ಮರೆತು ಮತದಾರರನ್ನ ಭೇಟಿ ಮಾಡಿ ಮತಯಾಚಿಸುತ್ತಿದ್ದಾರೆ.

ರಾಜ್ಯ ಚುನಾವಣೆ ಆಯೋಗದಿಂದ ಟಫ್ ರೂಲ್ಸ್

ಇದನ್ನೂ ಓದಿ: ನಾಯಿಗಳ ದಾಳಿಗೆ ತತ್ತರಿಸಿದ ಜಿಂಕೆ; ಪೊಲೀಸರು ಮತ್ತು ಅರಣ್ಯ ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ಕಾಡು ಸೇರಿದ ಮೂಕಪ್ರಾಣಿಗಳು

Published On - 8:46 am, Tue, 20 April 21