ರಾಜ್ಯದ ಶಿಕ್ಷಕರಿಗೆ ಮೂರು ವಾರಗಳ ಕಾಲ ಮಧ್ಯಂತರ ರಜೆ -ಸಿಎಂ BSY ಘೋಷಣೆ
ಬೆಂಗಳೂರು: ರಾಜ್ಯದ ಶಿಕ್ಷಕರಿಗೆ ಮೂರು ವಾರಗಳ ಕಾಲ ಮಧ್ಯಂತರ ರಜೆ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 12ರಿಂದ 30ರವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಣೆಯಾಗಿದೆ. ಸಿಎಂ ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು ಈಗಾಗಲೇ ಕೊವಿಡ್ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ ಪ್ರಾರಂಭಿಸುವುದಿಲ್ಲ. ವಿದ್ಯಾಗಮ ಸಹ ಸ್ಥಗಿತಗೊಳಿಸಲಾಗಿದೆ. ಹಲವಾರು ಶಿಕ್ಷಕರು ಸೋಂಕಿಗೆ ಒಳಗಾಗಿದ್ದನ್ನು ಮಾಧ್ಯಮದ ಮೂಲಕ ಗಮನಿಸಿದ್ದೇನೆ. ವಿದ್ಯಾರ್ಥಿಗಳು, ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಮೂರು ವಾರಗಳ ಕಾಲ ಮಧ್ಯಂತರ ರಜೆ ನೀಡಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಅಕ್ಟೋಬರ್ […]
ಬೆಂಗಳೂರು: ರಾಜ್ಯದ ಶಿಕ್ಷಕರಿಗೆ ಮೂರು ವಾರಗಳ ಕಾಲ ಮಧ್ಯಂತರ ರಜೆ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 12ರಿಂದ 30ರವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಣೆಯಾಗಿದೆ. ಸಿಎಂ ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು ಈಗಾಗಲೇ ಕೊವಿಡ್ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ ಪ್ರಾರಂಭಿಸುವುದಿಲ್ಲ. ವಿದ್ಯಾಗಮ ಸಹ ಸ್ಥಗಿತಗೊಳಿಸಲಾಗಿದೆ. ಹಲವಾರು ಶಿಕ್ಷಕರು ಸೋಂಕಿಗೆ ಒಳಗಾಗಿದ್ದನ್ನು ಮಾಧ್ಯಮದ ಮೂಲಕ ಗಮನಿಸಿದ್ದೇನೆ. ವಿದ್ಯಾರ್ಥಿಗಳು, ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಮೂರು ವಾರಗಳ ಕಾಲ ಮಧ್ಯಂತರ ರಜೆ ನೀಡಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಅಕ್ಟೋಬರ್ 12 ರಿಂದ 30 ರವರೆಗೆ ಮಧ್ಯಂತರ ರಜೆ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವರ್ಗಕ್ಕೆ ಮುಂಚಿತವಾಗಿ ದಸರಾ ಹಬ್ಬದ ಶುಭಾಶಯ ಎಂದು ಯಡಿಯೂರಪ್ಪ ಹೇಳಿದ್ದಾರೆ.