BBMP ಚುನಾವಣೆ ಮುಂದೂಡಲು ‘ಸುಪ್ರೀಂ’ ಮೊರೆಹೋದ ರಾಜ್ಯ ಸರ್ಕಾರ

|

Updated on: Dec 12, 2020 | 11:21 AM

ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ ಮೊರೆಹೋಗಿದೆ. ಚುನಾವಣೆ ಮುಂದೂಡಲು ರಾಜ್ಯ ಸರ್ಕಾರ ಸುಪ್ರೀಂಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ.

BBMP ಚುನಾವಣೆ ಮುಂದೂಡಲು ‘ಸುಪ್ರೀಂ’ ಮೊರೆಹೋದ ರಾಜ್ಯ ಸರ್ಕಾರ
ಸುಪ್ರೀಂ ಕೋರ್ಟ್​
Follow us on

ಬೆಂಗಳೂರು: ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ ಮೊರೆಹೋಗಿದೆ. ಚುನಾವಣೆ ಮುಂದೂಡಲು ರಾಜ್ಯ ಸರ್ಕಾರ ಸುಪ್ರೀಂಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ.

6 ವಾರಗಳಲ್ಲಿ ಚುನಾವಣೆ ನಡೆಸಬೇಕೆಂದು ಗುಡುಗಿದ್ದ ಹೈಕೋರ್ಟ್
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಸರ್ಕಾರ ಕ್ಷೇತ್ರಗಳ ಮರುವಿಂಗಡಣೆಯ ಕಾರಣ ನೀಡಿದೆ ಎಂದು ತಿಳಿದುಬಂದಿದೆ. ಜೊತೆಗೆ, ವಿಶೇಷ ಕಾಯ್ದೆ ರೂಪಿಸುವ ಬಗ್ಗೆ ಸಹ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ. 6 ವಾರಗಳಲ್ಲಿ ಚುನಾವಣೆ ನಡೆಸಲು ಹೈಕೋರ್ಟ್ ಕಳೆದ ವಾರ ಆದೇಶ ಹೊರಡಿಸಿತ್ತು.

ತಕ್ಷಣ ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

Published On - 11:15 am, Sat, 12 December 20